Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು
Team Udayavani, Oct 7, 2024, 1:45 PM IST
ವಿಟ್ಲ: ವಿಟ್ಲ ಭಾಗದಲ್ಲಿ ರವಿವಾರ (ಅ.6ರಂದು) ಭಾರೀ ಮಳೆಗೆ ನದಿಗಳು ಉಕ್ಕಿ ಹರಿದಿದ್ದು, ಈ ವೇಳೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ಯುವಕರಿಬ್ಬರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ಸಂಜೆ ವೇಳೆ ವ್ಯಕ್ತಿಯೊಬ್ಬರು ಸೇತುವೆಯಲ್ಲಿ ಹೋಗುತ್ತಿದ್ದಾಗ ಆಯತಪ್ಪಿ ಒಕ್ಕೆತ್ತೂರು ಹೊಳೆಗೆ ಬಿದ್ದಿದ್ದಾರೆ.
ಕೂಡಲೇ ಅಲ್ಲೇ ಇದ್ದ ಯುವಕರು ಪ್ರವಾಹವನ್ನೂ ಲೆಕ್ಕಿಸದೆ ಹೊಳೆಗೆ ಹಾರಿ ಈಜಾಡಿಕೊಂಡು ಹೋಗಿ ವ್ಯಕ್ತಿಯನ್ನು ಅಪಾಯದಿಂದ ರಕ್ಷಿಸಿದ್ದಾರೆ.
ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್ ಸಿ.ಎಚ್. ಹಾಗೂ ಸುರೇಶ್ ಸಿ.ಎಚ್. ರಕ್ಷಣೆ ಮಾಡಿದ ಯುವಕರು. 70ರ ಹರೆಯದ ಉಮ್ಮರ್ ರಕ್ಷಿಸಲ್ಪಟ್ಟವರು.
ಉಮ್ಮರ್ ಅವರು ಹೊಳೆಗೆ ಬೀಳುವುದನ್ನು ನೋಡಿದ ಕೂಡಲೇ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಇಬ್ಬರು ಯುವಕರು ಹೊಳೆಗೆ ಹಾರಿ ಈಜಾಡಿಕೊಂಡು ಹೋಗಿ ಉಮ್ಮರ್ ಅವರನ್ನು ರಕ್ಷಿಸಿದ್ದಾರೆ.
ಕೂಡಲೇ ಸ್ಥಳದಲ್ಲೇ ಇದ್ದ ಸ್ಥಳೀಯರು ಸಾಥ್ ಕೊಟ್ಟಿದ್ದಾರೆ. ಯುವಕರ ಸಮಯಪ್ರಜ್ಞೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.