“ರಾಷ್ಟ್ರೀಯ ವಿಪತ್ತು ನಿಧಿಯಿಂದ ಜಿಲ್ಲೆಗೆ 10 ಕೋ.ರೂ.’

ಸಮುದ್ರ ಕೊರೆತ ಪ್ರದೇಶಕ್ಕೆ ಉಸ್ತುವಾರಿ ಸಚಿವರ ಭೇಟಿ

Team Udayavani, Aug 12, 2020, 5:36 AM IST

“ರಾಷ್ಟ್ರೀಯ ವಿಪತ್ತು ನಿಧಿಯಿಂದ ಜಿಲ್ಲೆಗೆ 10 ಕೋ.ರೂ.’

ಹೆಬ್ರಿ ತಾ| ಕಚೇರಿಯಲ್ಲಿ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಪಡುಬಿದ್ರಿ: ರಾಷ್ಟ್ರೀಯ ವಿಪತ್ತು ನಿಧಿಯಿಂದ ಉಡುಪಿ ಜಿಲ್ಲೆಗೆ 10 ಕೋಟಿ ರೂ. ಗಳನ್ನು ಬಿಡುಗಡೆಗೊಳಿಸಲು ಈಗಾಗಲೇ ಬೇಡಿಕೆ ಸಲ್ಲಿಸಲಾಗಿದೆ. ಮುಂದಿನ 3 – 4 ದಿನಗಳಲ್ಲಿ ಇದನ್ನು ಬಿಡುಗಡೆಗೊಳಿಸ ಲಾಗುವ ನಿರೀಕ್ಷೆ ಇದ್ದು ಜಿಲ್ಲೆಯಲ್ಲಿನ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ತುರ್ತು ಕಾಮಗಾರಿಗಳಿಗಾಗಿ ಇದನ್ನು ಬಳಸಿಕೊಳ್ಳಲಾಗುವುದು ಎಂದು ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಆ. 11ರಂದು ಉಡುಪಿ ಜಿಲ್ಲೆಯಲ್ಲಿ ಮಳೆ ಹಾನಿಗೊಳಗಾಗಿರುವ ಪಡುಬಿದ್ರಿ ಬೀಚ್‌ ಪ್ರದೇಶವನ್ನು ವೀಕ್ಷಿಸಿ ಪತ್ರಕರ್ತರೊಂದಿಗೆ ಮಾತನಾಡಿದರು.  ಕರಾವಳಿ ಪ್ರದೇಶದಲ್ಲಿನ ಎರಡು  ಮುಖ್ಯ ವಿಷಯಗಳಾದ ಕಡಲ್ಕೊರೆತ ಮತ್ತು ನದಿ ಪಾತ್ರ ಉಕ್ಕಿ ಹರಿದು ಆಗುತ್ತಿರುವ ತೊಂದರೆಗಳ ವಿಚಾರ ವಾಗಿ ಆ. 10ರಂದು ಪ್ರಧಾನಿ ನರೇಂದ್ರ  ಮೋದಿಯವರೊಂದಿಗೆ ನಡೆಸಲಾದ ವೀಡಿಯೋ ಸಂವಾದದಲ್ಲಿ ಪ್ರಸ್ತಾವಿಸಿ
ದ್ದೇನೆ.ಪಶ್ಚಿಮಘಟ್ಟ ಪ್ರದೇಶಗಳಲ್ಲಿನ ಸೂಕ್ಷ್ಮ ಪ್ರದೇಶಗಳಲ್ಲಿನ ಭೂ ಕುಸಿತದ ಬಗೆಗೂ  ಉಲ್ಲೇಖೀಸಿದ್ದೇನೆ. ಭೂಕುಸಿತದ ಕುರಿತಾಗಿ ಜಿಯಾಲಾಜಿಕಲ್‌ ಸರ್ವೇ ಆಫ್‌ ಇಂಡಿಯಾ ಮೂಲಕ ಸರ್ವೇ ನಡೆಸಿ ಆ ಪ್ರದೇಶದ  ನಕ್ಷೆಯನ್ನು ತಯಾರಿಸಿಕೊಳ್ಳಲಾಗುವುದು. ಜನರ ಸ್ಥಳಾಂತರಕ್ಕಾಗಿ ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿಯೂ ಪ್ರಧಾನಿ ಯೊಂದಿಗೆ ಚರ್ಚಿಸಲಾಗಿದೆ ಎಂದರು.

ಸರಳ ಸ್ವಾತಂತ್ರ್ಯೋತ್ಸವ ಆಚರಣೆ
ಈ ಬಾರಿ ಸ್ವಾತಂತ್ರ್ಯೋತ್ಸವವನ್ನು ಕೊರೊನಾ ಮಾರ್ಗದರ್ಶಿ ಸೂಚನೆ ಯಂತೆ ಸಾರ್ವಜನಿಕರ ಪ್ರವೇಶ  ನಿಬಂಧಿಸಿ ಸರಳವಾಗಿ ಆಚರಿಸಲಾಗು ವುದು. ಉಡುಪಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಉಡುಪಿ ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದವರು ತಿಳಿಸಿದರು.

ಸಚಿವರೊಂದಿಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌, ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ವಿಷ್ಣುವರ್ಧನ್‌, ಉಡುಪಿ ಜಿ. ಪಂ. ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋಟ್‌, ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಕುಂದಾಪುರದ ಸಹಾಯಕ ಕಮಿಶನರ್‌ ಕೆ ರಾಜು, ಕಾಪು ತಹಶೀಲ್ದಾರ್‌ ಮಹಮ್ಮದ್‌ ಐಸಾಕ್‌, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ, ಜಿ. ಪಂ. ಸದಸ್ಯರಾದ ಗೀತಾಂಜಲಿ ಸುವರ್ಣ, ಶಶಿಕಾಂತ್‌ ಪಡುಬಿದ್ರಿ, ಉಡುಪಿ ತಾ. ಪಂ. ಮಾಜಿ ಅಧ್ಯಕ್ಷೆ ನೀತಾ ಗುರುರಾಜ್‌, ಬಿಜೆಪಿ ರಾಜ್ಯ ಕಾರ್ಯದರ್ಶಿ ಉದಯಕುಮಾರ್‌ ಶೆಟ್ಟಿ, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್‌ ನಾಯಕ್‌, ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ರಮಾಕಾಂತ ದೇವಾಡಿಗ, ಕಾಪು ಕಾಂದಾಯ ಪರಿವೀಕ್ಷಣಾಧಿಕಾರಿ ರವಿಶಂಕರ್‌, ಗ್ರಾಮಲೆಕ್ಕಿಗ ಶ್ಯಾಮ್‌ ಸುಂದರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.