ಕರಾವಳಿ ಜಿಲ್ಲೆಗಳಲ್ಲಿ 1348 ಹೊಸ ಕಿಂಡಿ ಅಣೆಕಟ್ಟುಗಳ ನಿರ್ಮಾಣ: ಸಚಿವ ಮಾಧುಸ್ವಾಮಿ
Team Udayavani, Nov 24, 2020, 4:06 PM IST
ಕಾಪು: ಕರಾವಳಿ ಪ್ರದೇಶದ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಯೋಜನೆಗಳನ್ನು ಅನುಷ್ಠಾನಗೊಳಿಸುವ ಕುರಿತು ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದ್ದು ಈ ಯೋಜನೆಯಡಿ 1348 ಹೊಸ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ಇಲಾಖೆ ಸಚಿವ ಮಾಧುಸ್ವಾಮಿ ಹೇಳಿದರು.
ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಗೆ 3,976 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕುವ ನಿರೀಕ್ಷೆಯಿದೆ ಎಂದರು.
ಸಮುದ್ರ ಸೇರುವ ನೇತ್ರಾವತಿ ನದಿ ಮತ್ತು ಕರಾವಳಿ ಜಿಲ್ಲೆಗಳ ವಿವಿಧ ನದಿ-ತೊರೆಗಳ ನೀರನ್ನು ನಮ್ಮಲ್ಲೇ ಉಳಿಸಿಕೊಂಡು, ಅದನ್ನು ರೈತರಿಗೆ ಒದಗಿಸಿಕೊಡುವ ನಿಟ್ಟಿನಲ್ಲಿ ಬೃಹತ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ನಿರ್ಹಣೆಯಿಲ್ಲದೇ ಸೊರಗುತ್ತಿರುವ ಕಿಂಡಿಅಣೆಕಟ್ಟುಗಳ ಬಗ್ಗೆ ಸಚಿವರ ಗಮನಕ್ಕೆ ತಂದಾಗ ಈ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿ, ಕ್ರಮ ತೆಗೆದುಕೊಳ್ಳಲಾಗುವುದು. ನಿರ್ವಹಣೆ ಕೊರತೆಯಿಂದ ತೊಂದರೆಗೊಳಗಾದ ಕಿಂಡಿಅಣೆಕಟ್ಟುಗಳ ದುರಸ್ತಿಗಾಗಿ ಕೂಡಲೇ 4 ಕೋಟಿ ರೂಪಾಯಿ ಅನುದಾನವನ್ನು ಹೊಂದಿಸಿಕೊಡಲಾಗುವುದು ಎಂದರು.
ಇದನ್ನೂ ಓದಿ:28 ಗುಂಟೆ ಜಮೀನಿನಲ್ಲಿ ಬಹುಬೆಳೆ ಬೆಳೆದು ಆದಾಯ ಕಂಡುಕೊಂಡ ಯುವ ರೈತ ರೇವಣ್ಣ
ಸಿ.ಆರ್.ಝ.ಡ್ ಕಾಯ್ದೆ ತಿದ್ದುಪಡಿಯ ಬಗ್ಗೆ ಸರಕಾರ ತನ್ನ ಪ್ರಯತ್ನ ಮುಂದುವರಿಸಿದೆ. ಖಾಯಿದೆಯನ್ನು ಕೇಂದ್ರ ಸರಕಾರ ತಿದ್ದುಪಡಿ ಮಾಡಿದ್ದು, ಅದರ ಮ್ಯಾಪಿಂಗ್ ಬಾಕಿಯಾಗಿದೆ. ಮ್ಯಾಪಿಂಗ್ ಪೂರ್ಣಗೊಂಡ ಕೂಡಲೇ ಬದಲಾದ ಸಿ.ಆರ್.ಝಡ್ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದರು.
ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ನಡೆದಿರುವ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ವಿಚಾರದಲ್ಲಿ ಸರಕಾರ ಈಗಾಗಲೇ ಕೋರ್ಟ್ ಗೆ ದಾಖಲಾತಿಗಳನ್ನು ಸಲ್ಲಿಸಿದ್ದು, ಒಂದೆರಡು ದಿನದಲ್ಲಿ ಮೇಲ್ಮನವಿ ಸಲ್ಲಿಸಲಿದ್ದೇವೆ. ಶೀಘ್ರ ಗೊಂದಲ ಬಗೆಹರಿಯುವ ವಿಶ್ವಾಸವಿದೆ ಎಂದರು.
ಸಂಪುಟ ಪುನಾರ್ರಚನೆ, ಸೇರ್ಪಡೆ ಇತ್ಯಾದಿಗಳ ಬಗ್ಗೆ ನೋ ಕಮೆಂಟ್ಸ್ ಎಂದ ಸಚಿವರು, ಕಾಂಟ್ರವರ್ಸಿ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದೇನೆ ಎಂದರು.
ಉಡುಪಿ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.