ಅಜೆಕಾರು: 14ನೇ ಶತಮಾನದ ಶಿಲಾ ಶಾಸನ ಪತ್ತೆ
Team Udayavani, Sep 23, 2022, 9:57 AM IST
ಅಜೆಕಾರು: ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಎಂಬಲ್ಲಿ 14ನೇ ಶತಮಾನದ ವೈಷ್ಣವ ಪಂಥದ ಶಿಲಾ ಶಾಸನ ಪತ್ತೆಯಾಗಿದೆ. ಗಾಣದಬೆಟ್ಟು ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ ಈ ಶಾಸನ ಪತ್ತೆಯಾಗಿದ್ದು ಇದು ಸುಮಾರು 1409 ಇಸವಿಯದ್ದಾಗಿರಬಹುದೆಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.
ಪ್ರಾಚ್ಯಸಂಚಯ ಸಂಶೋಧನಾ ಕೇಂದ್ರ ಉಡುಪಿ ಇದರ ಅಧ್ಯಯನ ನಿರ್ದೇಶಕರಾದ ಎಸ್. ಎ. ಕೃಷ್ಣಯ್ಯ ಹಾಗೂ ಕಡಿಯಾಳಿ ಯು. ಕಮಲಾಬಾಯಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಕೆ ಶ್ರೀಧರ ಭಟ್ ಇವರ ಮಾರ್ಗದರ್ಶನದಲ್ಲಿ ಫ್ಲೀಚ್ ಇಂಡಿಯಾ ಫೌಂಡೇಶನ್ ಹೈದರಾಬಾದ್ ಇದರ ಸಹಾಯಕ ಸಂಶೋಧಕ ಶ್ರುತೇಶ್ ಆಚಾರ್ಯ ಶಿಲಾಶಾಸನವನ್ನು ಓದಿ ಅಧ್ಯಯನ ನಡೆಸಿದ್ದಾರೆ.
ಶಿಲಾ ಶಾಸನದ ಮೇಲ್ಭಾಗದಲ್ಲಿ ಸೂರ್ಯ ಚಂದ್ರ ಹಾಗೂ ಶಂಖ ಚಕ್ರಗಳ ಕೆತ್ತನೆಯನ್ನು ಕೆತ್ತಲಾಗಿದೆ ಇದು ವೈಷ್ಣವ ಪಂಥದ ಶಿಲಾ ಶಾಸನ ವಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ. ಈ ಶಾಸನದಲ್ಲಿ 14ನೇ ಶತಮಾನದ ಕನ್ನಡವನ್ನು ಬಳಕೆ ಮಾಡಲಾಗಿದ್ದು ಇದು ವಿಜಯನಗರ ಕಾಲದ ಕನ್ನಡ ಲಿಪಿಯನ್ನು ಹೋಲುತ್ತದೆ ಎಂದು ಸಂಶೋಧಕ ಶ್ರುತೇಶ್ ಆಚಾರ್ಯ ಹೇಳಿದ್ದಾರೆ.
ಈ ಶಾಸನದಲ್ಲಿ 10 ಸಾಲುಗಳನ್ನು ಬರೆಯಲಾಗಿದ್ದು ಸುಮಾರು ಮೂರು ಅಡಿ ಎತ್ತರ ಎರಡು ಅಡಿ ಅಗಲ ಹೊಂದಿರುವ ಶಾಸನವು ಕಲ್ಲಿನಿಂದ ಕೊರೆಯಲ್ಪಟ್ಟಿದೆ. ಈ ಶಾಸನದಲ್ಲಿ ಮಂಣ್ಣೆ (ಪ್ರಸ್ತುತ ಮರ್ಣೆ ಗ್ರಾಮ)ಯ ಆಜಕಾರ ವಿಷ್ಣು ದೇವರ ದೀವಿಗೆಗೆ ಕಾತು ಮೂಲಿಗ (ಮೊಲಿ ಸಮುದಾಯ ಇರಬಹುದು) ಎಂಬವರು ಬೆಟ್ಟಿಂ ಪ್ರದೇಶ ದಿಂದ (ಗಾಣದಬೆಟ್ಟು) ಎಣ್ಣೆಯನ್ನು ಮತ್ತು 11 ತೆಂಗಿನಕಾಯಿಗಳನ್ನು ದಾನವಾಗಿ (ಉಂಬಳಿ) ಬಿಟ್ಟಿರುವ ಕುರಿತು ಶಾಸನದಲ್ಲಿ ಉಲೇಖವಾಗಿದೆ.
ಈ ಶಾಸನವು ಪತ್ತೆಯಾಗಿರುವ ಸಮೀಪದಲ್ಲಿ ಪುರಾತನ ವಿಷ್ಣುಮೂರ್ತಿ ದೇವಸ್ಥಾನವಿದ್ದು ಶಾಸನದಲ್ಲಿ ದೇವಸ್ಥಾನದ ಉಲ್ಲೇಖ ಇದೆ ಎಂದು ಸಂಶೋಧಕರು ಹೇಳಿದ್ದಾರೆ. ಕ್ಷೇತ್ರಕಾರ್ಯ ಶೋಧನೆ ಸಂದರ್ಭ ಪ್ರಕಾಶ್ ಶೆಟ್ಟಿ, ಸುರೇಶ್ ಶೆಟ್ಟಿ, ರವಿ ಸಂತೋಷ್ ಆಳ್ವ, ಸುಶಾಂತ್ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.