ಉಡುಪಿ ಜಿಲ್ಲೆಯಲ್ಲಿ ಮತ್ತೆ ಏರಿಕೆಯಾದ ಸೋಂಕಿತರ ಸಂಖ್ಯೆ: 40 ಜನರಿಗೆ ಸೋಂಕು ದೃಢ
Team Udayavani, Jun 28, 2020, 5:27 PM IST
ಉಡುಪಿ: ಈಗಾಗಲೇ ಸಹಸ್ರ ಕೋವಿಡ್-19 ಸೋಂಕಿತರನ್ನು ಕಂಡಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 40 ಜನರ ದೇಹಕ್ಕೆ ಕೋವಿಡ್-19 ಸೋಂಕು ಹೊಕ್ಕಿದೆ. ಕಳೆದ ಕೆಲವು ದಿನಗಳಲ್ಲಿ ಸೋಂಕಿತರ ಸಂಖ್ಯೆ ಕುಸಿತ ಕಂಡಿದ್ದ ಜಿಲ್ಲೆಯಲ್ಲಿ ಇಂದು 40 ಜನರಿಗೆ ಸೋಂಕು ದೃಢವಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
ಇಂದಿನ 40 ಹೊಸ ಸೋಂಕಿತರ ಕಾರಣದಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1179ಕ್ಕೆ ಏರಿಕೆಯಾಗಿದೆ. ಇವರಲ್ಲಿ 1051 ಮಂದೊ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದು, ಸದ್ಯ ಜಿಲ್ಲೆಯಲ್ಲಿ 126 ಸಕ್ರಿಯ ಪ್ರಕರಣಗಳಿವೆ. ಇವರೆಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯ ಹೆಬ್ರಿಯ ಸಮುದಾಯ ಕೇಂದ್ರದ ವೈದ್ಯರು ಸಹಿತ ಏಳು ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಈ ಹಿನ್ನಲೆಯಲ್ಲಿ ಸಮುದಾಯ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದ್ದು, ಪಾಸಿಟಿವ್ ಬಂದ ಏಳು ಮಂದಿಯ ಮನೆಯನ್ನೂ ಸೀಲ್ ಡೌನ್ ಮಾಡಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 14,233 ಮಂದಿಯ ಗಂಟಲು ದ್ರವ ಸಂಗ್ರಹಿಸಿಲಾಗಿದ್ದು, ಅದರಲ್ಲಿ 1179 ಮಂದಿಯ ವರದಿ ಪಾಸಿಟಿವ್ ಬಂದಿದೆ. 12,788 ಮಂದಿಯ ವರದಿ ನೆಗೆಟಿವ್ ಬಂದಿದ್ದು, ಇನ್ನೂ 266 ವರದಿಗಳು ಬಾಕಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.