ಕೋವಿಡ್, ಪರೀಕ್ಷೆ ಎರಡನ್ನೂ ಎದುರಿಸಿ ವಿದ್ಯಾರ್ಥಿಗಳು ಜಯಶಾಲಿ

ಉಡುಪಿ ಜಿಲ್ಲೆಯ ಎಲ್ಲ ವಲಯಗಳಿಗೂ ಎ ಗ್ರೇಡ್‌; ದಕ್ಷಿಣ ಕನ್ನಡ ಜಿಲ್ಲೆಗೆ "ಬಿ' ಗ್ರೇಡ್‌

Team Udayavani, Aug 11, 2020, 6:10 AM IST

ಕೋವಿಡ್, ಪರೀಕ್ಷೆ ಎರಡನ್ನೂ ಎದುರಿಸಿ ವಿದ್ಯಾರ್ಥಿಗಳು ಜಯಶಾಲಿ

ಉಡುಪಿ: ಸೋಮವಾರ ಪ್ರಕಟವಾದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ಎ ಗ್ರೇಡ್‌ ಗಳಿಸಿದೆ. ಜಿಲ್ಲೆಯ 5 ವಲಯ ಗಳೂ ಎ ಗ್ರೇಡ್‌ ಪಡೆದಿರುವುದು ವಿಶೇಷ. ಜಿಲ್ಲೆಯಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗಾಗಿ ಪ್ರೇರಣಾ ಶಿಬಿರ, ಪ.ಪಂಗಡದ ಮಕ್ಕಳಿಗೆ ವಿಶೇಷ ಕಲಿಕಾ ಶಿಬಿರ, ವಿಷಯ ಆಧಾರಿತ ಕಾರ್ಯಕ್ರಮ, ಬೆಳಗ್ಗೆ ಮತ್ತು ಮಧ್ಯಾಹ್ನ ಒಂದೊಂದು ತಾಸು ಹೆಚ್ಚುವರಿ ತರಗತಿ ಮೊದಲಾದ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ನಿತ್ಯದ ತರಗತಿಗಳು ಮುಗಿದ ಬಳಿಕವೂ ಹೆಚ್ಚುವರಿ ತರಗತಿಗಳನ್ನು ಮಾಡಲಾಗುತ್ತಿತ್ತು.

ವಿಶೇಷ ಕಾರ್ಯಾಗಾರ
ಜಿಲ್ಲೆಯಲ್ಲಿ ಜನವರಿ ತಿಂಗಳಿನಿಂದ ತರಬೇತಿ ಪ್ರಕ್ರಿಯೆಗಳು ಮತ್ತಷ್ಟು ವೇಗ ಪಡೆದುಕೊಂಡಿದ್ದವು. ಬಿಇಒಗಳು ಮನೆಮನೆಗೆ ತೆರಳಿ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಚರ್ಚೆ ನಡೆಸಿದ್ದರು. ಓದಿನಲ್ಲಿ ಹಿಂದೆ ಇರುವ ವಿದ್ಯಾರ್ಥಿ ಗಳಿಗೆ ವಿಶೇಷ ಕಾರ್ಯಾಗಾರ ಗಳನ್ನು ಕೂಡ ನಡೆಸಲಾಗಿತ್ತು. ಲಾಕ್‌ಡೌನ್‌ ಅವಧಿಯಲ್ಲಿಯೂ ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಸ್ಮಾಟ್‌ಕ್ಲಾಸ್‌. ಇಂಟರ್‌ನೆಟ್‌ ಕಲಿಕೆಗಳು ಮಕ್ಕಳ ಕಲಿಕೆಗೆ ಮತ್ತಷ್ಟು ಪ್ರೋತ್ಸಾಹ ಸಿಕ್ಕಿದಂತಾಯಿತು. 159 “ಎ’ ಗ್ರೇಡ್‌ ಶಾಲೆಗಳು ಬೈಂದೂರಿನಲ್ಲಿ 21, ಕುಂದಾಪುರದಲ್ಲಿ 24, ಕಾರ್ಕಳದಲ್ಲಿ 37, ಉಡುಪಿ (ಉತ್ತರ) 38, ಉಡುಪಿ (ದಕ್ಷಿಣ 39 ಸಹಿತ ಉಡುಪಿ ಜಿಲ್ಲೆಯಲ್ಲಿ ಒಟ್ಟು 159 ಶಾಲೆಗಳು “ಎ’ಗ್ರೇಡ್‌ ಪಡೆದುಕೊಂಡಿದೆ. “ಬಿ’ ಗ್ರೇಡ್‌ ಪಡೆದಿರುವ ಶಾಲೆಗಳ ಸಂಖ್ಯೆ ಒಟ್ಟು 79. 23 ಶಾಲೆಗಳು “ಸಿ’ ಗ್ರೇಡ್‌ ಪಡೆದುಕೊಂಡಿದೆ.

ಐವರಿಗೆ 620ಕ್ಕೂ ಅಧಿಕ ಅಂಕ
ಉಡುಪಿ ಜಿಲ್ಲೆಯ 5 ಮಂದಿ ವಿದ್ಯಾರ್ಥಿಗಳು 620ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ಅನುದಾನ ರಹಿತ ವಿಭಾಗದಲ್ಲಿ ಕಿರಿಮಂಜೇಶ್ವರದ ಸಾಂದೀಪನಾ ಆಂಗ್ಲಮಾಧ್ಯಮ ಶಾಲೆಯ ಸುರಭಿ ಶೆಟ್ಟಿ (624), ಅನುದಾನಿತ ವಿಭಾಗದಲ್ಲಿ ಹಂಗಾರಕಟ್ಟೆಯ ಚೇತನ ಪ್ರೌಢಶಾಲೆಯ ಗ್ರೀಷ್ಮಾ ಶೆಟ್ಟಿಗಾರ (621), ಸರಕಾರಿ ಶಾಲೆ ವಿಭಾಗದಲ್ಲಿ ವಳಕಾಡು ಸರಕಾರಿ ಪ್ರೌಢ ಶಾಲೆಯ ಭವ್ಯಾ ನಾಯಕ್‌(622), ಬಸ್ರೂರು ಸರಕಾರಿ ಪ್ರೌಢಶಾಲೆಯ ಶ್ರಾವ್ಯಾ ಮೊಗವೀರ (621), ಪೆರ್ವಾಜೆ ಸರಕಾರಿ ಪ್ರೌಢಶಾಲೆಯ ಅದ್ವೆ„ತ್‌ ಶರ್ಮ(620) ಅಂಕಗಳನ್ನು ಪಡೆದುಕೊಂಡಿದ್ದಾರೆ.

2019ನೇ ಸಾಲಿನ ಎಸೆಸೆಲ್ಸಿ ಫ‌ಲಿತಾಂಶದಲ್ಲಿ ಒಟ್ಟು 12 ಮಂದಿ ವಿದ್ಯಾರ್ಥಿಗಳು 620ಕ್ಕಿಂತ ಅಧಿಕ ಅಂಕ ಗಳಿಸಿದ್ದರು. ಅದಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಶೇ. 60ರಷ್ಟು ಇಳಿಕೆಯಾಗಿದೆ.

ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ “ಗ್ರೇಡ್‌’ ಪಡೆದುಕೊಂಡು ಅತ್ಯುತ್ತಮ ಉತ್ತಮ ಸಾಧನೆ ಮಾಡಿದೆ. ಶೇ. 85ಕ್ಕಿಂತ ಅಧಿಕ ಅಂಕ ಪಡೆಯಲು ಶ್ರಮಿಸಿದ ಜಿಲ್ಲೆಯ ಶಿಕ್ಷಣಾಧಿಕಾರಿಗಳು, ವಲಯ ಶಿಕ್ಷಣಾಧಿಕಾರಿಗಳು, ಅಧಿಕಾರಿ ವರ್ಗ, ಅಧ್ಯಾಪಕ ವೃಂದ ಹಾಗೂ ಪೋಷಕರಿಗೆ ಕೃತಜ್ಞತೆಗಳು. ಜಿಲ್ಲೆಯ ಈ ಫ‌ಲಿತಾಂಶ ಹೆಮ್ಮೆ ತಂದಿದೆ.
-ಜಿ.ಜಗದೀಶ್‌, ಜಿಲ್ಲಾಧಿಕಾರಿಗಳು

ದಕ್ಷಿಣ ಕನ್ನಡ ಜಿಲ್ಲೆಗೆ “ಬಿ’ ಗ್ರೇಡ್‌
ಮಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ದ.ಕ. ಜಿಲ್ಲೆಗೆ ಒಟ್ಟಾರೆ ಫಲಿತಾಂಶದಲ್ಲಿ “ಬಿ’ ಗ್ರೇಡ್‌ ಲಭಿಸಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಫಲಿತಾಂಶದಲ್ಲಿ ಸಾಕಷ್ಟು ಕುಸಿತವಾಗಿದೆ. ಕೊರೊನಾ ಆತಂಕದಿಂದ ಲಾಕ್‌ಡೌನ್‌ ಪರಿಣಾಮ ಮಾರ್ಚ್‌ ಅಂತ್ಯದಲ್ಲಿ ನಡೆಯಬೇಕಿದ್ದ ಪರೀಕ್ಷೆ ಜೂನ್‌ ಅಂತ್ಯದಲ್ಲಿ ನಡೆದಿತ್ತು. ವಿದ್ಯಾರ್ಥಿಗಳಿಗೆ ಮೂರು ತಿಂಗಳ ಕಾಲ ಅಭ್ಯಾಸಕ್ಕೆ ಅವಕಾಶ ಲಭಿಸಿದ್ದರೂ ಫಲಿತಾಂಶ ಕಡಿಮೆಯಾಗಿದೆ. ಶೇ. 70ಕ್ಕಿಂತ ಹೆಚ್ಚು ಫಲಿತಾಂಶವಿರುವ ಜಿಲ್ಲೆಗಳಿಗೆ “ಎ’ ಗ್ರೇಡ್‌, ಶೇ. 60-70 ಫಲಿತಾಂಶ ಇರುವ ಶಾಲೆಗಳಿಗೆ “ಬಿ’ ಗ್ರೇಡ್‌ ನೀಡಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಯೋರ್ವರು ತಿಳಿಸಿ ದ್ದಾರೆ. ಕಳೆದ ವರ್ಷ ಶೇ. 86.85 ಫಲಿತಾಂಶದೊಂದಿಗೆ ರಾಜ್ಯದಲ್ಲಿ 7ನೇ ಸ್ಥಾನದಲ್ಲಿ ದ.ಕ. ಜಿಲ್ಲೆ ಇತ್ತು.

2015-16ರಲ್ಲಿ 3, 2016-17ರಲ್ಲಿ 2, 2017-18ರಲ್ಲಿ 4ನೇ ಸ್ಥಾನವನ್ನು ದ.ಕ. ಜಿಲ್ಲೆ ಪಡೆದುಕೊಂಡಿತ್ತು. 2017-18ರ ಬಳಿಕ ನಿರಂತಕ ಕುಸಿತ ಕಂಡಿದ್ದು, ರಾಜ್ಯ ಮಟ್ಟದ ಸ್ಥಾನದಲ್ಲಿ ಜಿಲ್ಲೆಯ ಸ್ಥಾನ ಕಡಿಮೆಯಾಗುತ್ತಿದೆ.

ಜಿಲ್ಲೆಯ ಟಾಪರ್
2019-20ನೇ ಸಾಲಿನ ಫಲಿತಾಂಶ ದಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅನುಷ್‌ 625 ಅಂಕದೊಂದಿಗೆ ರಾಜ್ಯದಲ್ಲಿ ಪ್ರಥಮ ಹಾಗೂ ಡೊಂಗರಕೇರಿ ಕೆನರಾ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಧಿ ರಾವ್‌ 624, ಅಳಿಕೆ ಸತ್ಯಸಾಯಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸುಮುಖ್‌ ಸುಬ್ರಹ್ಮಣ್ಯ 624 ಅಂಕ ಗಳಿಸಿ ರಾಜ್ಯದಲ್ಲಿ ದ್ವಿತೀಯ ಸ್ಥಾನವನ್ನು ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Missing Case: ಮಗುವಿನೊಂದಿಗೆ ತಾಯಿ ನಾಪತ್ತೆ

Missing Case: ಮಗುವಿನೊಂದಿಗೆ ತಾಯಿ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.