ಉಡುಪಿ: ರಸ್ತೆಯಲ್ಲಿ ನೋಟು ಎಸೆದಿದ್ದ ಬಾಲಕ ಪತ್ತೆ
Team Udayavani, Apr 17, 2020, 9:29 AM IST
ಸಾಂದರ್ಭಿಕ ಚಿತ್ರ
ಉಡುಪಿ: ನಗರದಲ್ಲಿ ಸೋಮವಾರ ಐನೂರು, ಎರಡು ಸಾವಿರ ಮುಖ ಬೆಲೆಯ ನಕಲಿ ನೋಟುಗಳನ್ನು ಎಸೆದು ಆತಂಕ ಮೂಡಿಸಲು ಕಾರಣವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಬೆಳಗ್ಗೆ 11 ಗಂಟೆ ಸುಮಾರಿಗೆ ಕೃಷ್ಣ ಮಠ ಸಮೀಪ ವಾದಿರಾಜ ನಗರ ರಸ್ತೆಯಲ್ಲಿ ನಕಲಿ ನೋಟುಗಳನ್ನು ಎಸೆದು ಪರಾರಿಯಾಗಿದ್ದ. ಇದನ್ನು ಕಂಡ ಕೆಲವರು ನೋಟುಗಳನ್ನು ಹೆಕ್ಕಿ ಪೊಲೀಸರಿಗೂ ಮಾಹಿತಿ ನೀಡಿದ್ದರು. ಸಾರ್ವಜನಿಕರೊಬ್ಬರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಸಿಸಿಟಿವಿ ಕೆಮರಾ ಮೂಲಕ ಹುಡುಕಲಾರಂಭಿಸಿದಾಗ ಅದು ಹೈಸ್ಕೂಲ್ ವಿದ್ಯಾರ್ಥಿಯೋರ್ವನ ಕೃತ್ಯ ಎಂಬುದು ತಿಳಿಯಿತು. ಬಳಿಕ ಪೊಲೀಸರು ಬಾಲಕನನ್ನು ವಿಚಾರಿಸಿದಾಗ, ಚಹಾ ಪುಡಿ ತರಲು ಅಂಗಡಿಗೆ ಹೋಗಿ ವಾಪಸ್ ಬರುವಾಗ ನನ್ನ ಬಳಿ ಇದ್ದ ಚಿಲ್ಡ್ರನ್ಸ್ ರಿಸರ್ವ್ ಬ್ಯಾಂಕಿನ ನೋಟನ್ನು (ಮಕ್ಕಳಾಡುವ ನೋಟು) ಎಸೆದು ಬಂದೆ. ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದಿದ್ದಾನೆ. ಪೊಲೀಸರು ಆತನಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.