ಬಾಕಿ ವಿಲೇವಾರಿ ಶೀಘ್ರಗೊಳಿಸಿ: ಮಹೇಶ್ವರ ರಾವ್ ಸೂಚನೆ
ಮಳೆಹಾನಿ: 2.72 ಕೋ.ರೂ. ಪರಿಹಾರ ವಿತರಣೆ
Team Udayavani, Oct 21, 2020, 2:00 AM IST
ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಹೇಶ್ವರ ರಾವ್ ಮಾತನಾಡಿದರು.
ಉಡುಪಿ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದ್ದು, 2,068 ಪ್ರಕರಣಗಳಲ್ಲಿ 2.72 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಉಳಿದ ಪ್ರಕರಣಗಳಲ್ಲಿ ಶೀಘ್ರವಾಗಿ ಪರಿಹಾರ ನೀಡಬೇಕು ಎಂದು ಸರಕಾರದ ಕಂದಾಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಪ್ರಸ್ತುತ ಸ್ಥಿತಿ, ಪ್ರಕೃತಿ ವಿಕೋಪ ಹಾಗೂ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಸರಕಾರದ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಖಾಸಗಿ ಕಟ್ಟಡಗಳನ್ನು ನಿರ್ಮಾಣ ಮಾಡಲು ಮರಳಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮಳೆ ಪ್ರಮಾಣ ಕಡಿಮೆ ಆಗಿರುವ ಹಿನ್ನೆಲೆ ಮರಳಿನ ಬ್ಲಾಕ್‌ಗಳನ್ನು ಗುರುತಿಸುವುದ ರೊಂದಿಗೆ ನಿಯಮಾನುಸಾರ ಮರಳು ತೆಗೆಯಲು ಅನುಮತಿ ನೀಡಬೇಕು ಎಂದವರು ತಿಳಿಸಿದರು. ಗ್ರಾಮಸೇವಕರು ಹಾಗೂ ಗ್ರಾಮ ಲೆಕ್ಕಿಗರು ಗ್ರಾಮ ವ್ಯಾಪ್ತಿಗಳಲ್ಲಿ ಸರ್ವೇ ನಂಬರ್ ಅನ್ವಯ ಬೆಳೆಗಳ ನಿಖರ ಮಾಹಿತಿಯನ್ನು ಹೊಂದಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಸಿಇಒ ಡಾ| ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹೆಚ್ಚುವರಿ ಎಸ್‌ಪಿ ಕುಮಾರ ಚಂದ್ರ, ಉಪ ವಿಭಾಗಾಧಿಕಾರಿ ರಾಜು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಔಷಧ ವ್ಯವಸ್ಥೆ
ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚು ಮಾಡುವುದರೊಂದಿಗೆ ಸೋಂಕಿತರನ್ನು ಪ್ರತ್ಯೇಕಿಸಿ ಸೋಂಕು ಹರಡದಂತೆ ಎಚ್ಚರ ವಹಿಸಬೇಕು. ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಔಷಧ ದಾಸ್ತಾನು ಹಾಗೂ ಸುರಕ್ಷತಾ ಪರಿಕರಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಮುಂದಿನ ದಿನಗಳ ಚಿಕಿತ್ಸೆಗೆ ಅಗತ್ಯವಿರುವ ಔಷಧ ಹಾಗೂ ಪರಿಕರಗಳನ್ನು ಸರಕಾರದಿಂದ ವ್ಯವಸ್ಥೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.