ಉಡುಪಿ: ಮಾನಭಂಗ ನಡೆಸಿದ ಆರೋಪಿಗೆ 3 ವರ್ಷ ಜೈಲು ಶಿಕ್ಷೆ


Team Udayavani, Dec 1, 2022, 8:55 PM IST

tdy-24

ಉಡುಪಿ: ಎಂಟು ವರ್ಷಗಳ ಹಿಂದೆ ಕೊಲೆ ಪ್ರಕರಣದ ಸಾಕ್ಷಿಗೆ ಹಲ್ಲೆಗೈದು ಮಾನಭಂಗ ನಡೆಸಿದ ಆರೋಪಿಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಗುರುವಾರ ಆದೇಶಿಸಿದೆ.

ಧನಂಜಯ್‌(35) ಶಿಕ್ಷೆಗೆ ಗುರಿಯಾದ ಆರೋಪಿ. 2013ರ ನ.27ರಂದು ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯೋಗೀಶ್‌ ಎಂಬಾತ ರಂಜಿತಾ ಅವರನ್ನು ಕಡೆಕಾರು ಗ್ರಾಮದ ಪಟೇಲರ ತೋಟ ಎಂಬಲ್ಲಿ ಕೊಲೆ ಮಾಡಿದ್ದನು. ಈ ಬಗ್ಗೆ ರಂಜಿತಾ ಅವರ ಸಂಬಂಧಿ ಹಾಗೂ ನೆರೆಮನೆಯ ಅಶ್ವಿ‌ನಿ ಮಲ್ಪೆ ಪೊಲೀಸ್‌ ಠಾಣೆಗೆ ದೂರು ನೀಡಿ ಪ್ರಮುಖ ಸಾಕ್ಷಿಯಾಗಿದ್ದರು.

ಈ ಹಿನ್ನೆಲೆಯಲ್ಲಿ ಕೊಲೆ ಪ್ರಕರಣದ ಆರೋಪಿ ಯೋಗೀಶ್‌ನ ಸಂಬಂಧಿ ಧನಂಜಯ್‌ ಎಂಬಾತ 2014ರ ಸೆ.10ರಂದು ಅಶ್ವಿ‌ನಿ ಅವರ ಮನೆಗೆ ಅಕ್ರಮ ವಾಗಿ ಪ್ರವೇಶಿಸಿ, ಕೈಯಿಂದ ಹಲ್ಲೆ ನಡೆಸಿ ಬಟ್ಟೆಯನ್ನು ಹರಿದು ಮಾನಕ್ಕೆ ಕುಂದು ಉಂಟು ಮಾಡಿದ್ದನು. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ರಂಜಿತಾಳ ಕೊಲೆ ಪ್ರಕರಣದಲ್ಲಿ ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಈ ಬಗ್ಗೆ ಆರೋಪಿ ವಿರುದ್ಧ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ದಿನೇಶ್‌ ಹೆಗ್ಡೆ ಅವರು ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆರೋಪಿಗೆ ಅಕ್ರಮ ಪ್ರವೇಶಕ್ಕೆ 6ತಿಂಗಳು ಸಾದಾ ಜೈಲು ಶಿಕ್ಷೆ, ಹಲ್ಲೆಗೆ 6 ತಿಂಗಳು ಸಾದಾ ಜೈಲುಶಿಕ್ಷೆ, ಮಾನಭಂಗಕ್ಕೆ 3ವರ್ಷ ಜೈಲುಶಿಕ್ಷೆ ಮತ್ತು 20ಸಾವಿರ ರೂ. ದಂಡ, ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ 6 ತಿಂಗಳು ಜೈಲು ಶಿಕ್ಷೆ ಮತ್ತು ಕೊಲೆ ಬೆದರಿಕೆಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 5ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಪ್ರಾಸಿಕ್ಯೂಷನ್‌ ಪರವಾಗಿ ಪಬ್ಲಿಕ್‌ ಪ್ರಾಸಿಕ್ಯೂಷನ್‌ ಜಯರಾಮ ಶೆಟ್ಟಿ ವಾದಿಸಿದ್ದರು.

ಟಾಪ್ ನ್ಯೂಸ್

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

Supreme Court

Supreme Court; ಮೀಸಲಿಂದ ಹೊರಗಿಡುವ ಬಗ್ಗೆ ಶಾಸಕಾಂಗ, ಕಾರ್‍ಯಾಂಗ ನಿರ್ಧರಿಸಲಿ

BJP Symbol

Delhi BJP;ಮಹಾರಾಷ್ಟ್ರ ಮಾದರಿ ಯೋಜನೆ: ವರದಿ

rajnath 2

Aero India 2025:ಇಂದು ರಾಯಭಾರಿಗಳ ಜತೆಗೆ ರಾಜನಾಥ್‌ ಸಭೆ

ಯಾತ್ರಾ ಸ್ಥಳಗಳಲ್ಲಿ ಭಕ್ತರ ಸುರಕ್ಷೆಗಿರಲಿ ಮೊದಲ ಆದ್ಯತೆ

ಯಾತ್ರಾ ಸ್ಥಳಗಳಲ್ಲಿ ಭಕ್ತರ ಸುರಕ್ಷೆಗಿರಲಿ ಮೊದಲ ಆದ್ಯತೆ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

Supreme Court

Supreme Court; ಮೀಸಲಿಂದ ಹೊರಗಿಡುವ ಬಗ್ಗೆ ಶಾಸಕಾಂಗ, ಕಾರ್‍ಯಾಂಗ ನಿರ್ಧರಿಸಲಿ

BJP Symbol

Delhi BJP;ಮಹಾರಾಷ್ಟ್ರ ಮಾದರಿ ಯೋಜನೆ: ವರದಿ

rajnath 2

Aero India 2025:ಇಂದು ರಾಯಭಾರಿಗಳ ಜತೆಗೆ ರಾಜನಾಥ್‌ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.