ಅಂಗಡಿ, ಹೊಟೇಲ್‌ಗಳಲ್ಲಿ ನಿಯಮ ಉಲ್ಲಂಘಿಸಿದರೆ ಕ್ರಮ
ಜಿಲ್ಲಾಧಿಕಾರಿ ಜಗದೀಶ್ ಎಚ್ಚರಿಕೆ
Team Udayavani, Oct 16, 2020, 10:34 PM IST
ಉಡುಪಿ: ಇತ್ತೀಚಿನ ದಿನಗಳಲ್ಲಿ ಅಂಗಡಿ-ಮುಂಗಟ್ಟು, ಹೊಟೇಲ್‌ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಲಕರು ಮತ್ತು ಸಿಬಂದಿ ಸರಿಯಾದ ರೀತಿ ಮಾಸ್ಕ್ ಧರಿಸದೇ ಇರುವುದು ಕಂಡು ಬಂದಿದ್ದು ಅವರಿಗೆ ತಿಳಿಹೇಳಬೇಕು. ನಿಯಮ ಪಾಲಿಸದೇ ಇದ್ದಲ್ಲಿ ತಾತ್ಕಾಲಿಕವಾಗಿ ಅಂಗಡಿ ಪರವಾನಿಗೆಯನ್ನು ರದ್ದುಪಡಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಶುಕ್ರವಾರ ಜಿ.ಪಂ. ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಸಂಬಂಧಿಸಿ ಕೋವಿಡ್ ತೀವ್ರ ಪ್ರಚಾರಾಂದೋಲನ ಕಾರ್ಯಕ್ರಮ ಅನುಷ್ಠಾನದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಯಾಣಿಕರಿಗೆ ಮಾಸ್ಕ್
ಬಸ್‌ಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ತಪ್ಪದೇ ಮಾಸ್ಕ್ ಧರಿಸುವಂತೆ ಬಸ್‌ನ ನಿರ್ವಾಹಕರು ಎಚ್ಚರ ವಹಿಸಬೇಕು. ಸಾರ್ವಜನಿಕರು ಓಡಾಡುವ ಬಸ್‌ಗಳನ್ನು ಪ್ರತೀ ದಿನ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು ಎಂದರು. ಭಕ್ತರು, ಪ್ರವಾಸಿಗರಿಗೆ ಮಾಸ್ಕ್ ಜಿಲ್ಲೆಯ ಪ್ರತಿಯೊಂದು ದೇವಸ್ಥಾನದಲ್ಲಿ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ಬರುವ ಪ್ರವಾಸಿಗರು ಮುಖಗವಸು ಧರಿಸಬೇಕು. ಇಲ್ಲದಿದ್ದರೆ ಅವರ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಸೂಚಿಸಿದರು.
ದಂಡ ವಿಧಿಸಲು ಕರೆ
ಸರಕಾರವು ನೀಡಿರುವ ಮಾರ್ಗಸೂಚಿ ನಿರ್ಲಕ್ಷಿಸಿ ಜನರು ಓಡಾಡುತ್ತಿದ್ದರೆ ಅಂಥವರ ಮೇಲೆ ದಂಡವನ್ನು ವಿಧಿಸಬೇಕೆಂದು ಸೂಚಿಸಿದರು.
ಮೀನು ಮಾರುಕಟ್ಟೆಯಲ್ಲಿ ಎಚ್ಚರ
ಮಲ್ಪೆ ಹಾಗೂ ಗಂಗೊಳ್ಳಿ ಬಂದರಿನ ಮೀನು ಮಾರುಕಟ್ಟೆ, ಎ.ಪಿ.ಎಂ.ಸಿ. ಮಾರುಕಟ್ಟೆಗಳಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಸುವ ಕೆಲಸವಾಗಬೇಕಿದೆ ಎಂದರು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ.ಪಂ. ಸಿಇಒ ಡಾ| ನವೀನ್ ಭಟ್, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.
ಜಾಗೃತಿ ಮೂಡಿಸಿ
ಸರಕಾರಿ ನೌಕರರು ಕೋವಿಡ್ ಪ್ರತಿಜ್ಞೆ ಸ್ವೀಕರಿಸಿ ಮಾರ್ಗಸೂಚಿ ತಪ್ಪದೇ ಪಾಲಿಸುವುದರೊಂದಿಗೆ ಜನ ಸಾಮಾನ್ಯರಿಗೆ ಮಾದರಿಯಾಗಿ
ಮಾರ್ಗಸೂಚಿ ಪಾಲಿಸುವ ರೀತಿಯಲ್ಲಿ ಜನಜಾಗೃತಿ ಆಂದೋಲನ ನಡೆಸ ಬೇಕು. ಎಲ್ಲ ಇಲಾಖೆಯ ಕಾರ್ಯಕ್ರಮ ನಡೆಯುವಾಗ ಕೋವಿಡ್ ಜಾಗೃತಿ ಮೂಡಿಸುವ ಕೆಲಸವಾಗಬೇಕು, ಅಲ್ಲದೆ ದೈನಂದಿನ ಕೆಲಸ-ಕಾರ್ಯಗಳ ಪತ್ರದಲ್ಲಿಯೂ ಕೊರೊನಾ ಜಾಗೃತಿ ಮೂಡಿಸುವ ಬಗ್ಗೆ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.