ಅಜೆಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಮುಳಿಹುಲ್ಲಿನ ಕಟ್ಟಡದಲ್ಲಿ ಆರಂಭವಾದ ಶಾಲೆಗೀಗ 111 ವರ್ಷ

Team Udayavani, Nov 5, 2019, 5:43 AM IST

zz-19

1908 ಶಾಲೆ ಸ್ಥಾಪನೆ
2008ರಲ್ಲಿ ಶತಮಾನೋತ್ಸವ ಆಚರಣೆ

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಅಜೆಕಾರು: ಅಜೆಕಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಯಶಸ್ವಿ 111 ವರ್ಷಗಳನ್ನು ಕಳೆದು ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದೆ. ಅಂದಿನ ಕಾಲದಲ್ಲಿ ಗ್ರಾಮೀಣ ಪ್ರದೇಶವಾಗಿದ್ದ ಅಜೆಕಾರು ಕೃಷಿ ಕುಟುಂಬಗಳನ್ನು ಹೆಚ್ಚಾಗಿ ಹೊಂದಿತ್ತು. ಆ ಸಂದರ್ಭದಲ್ಲಿ ಕ್ರಿ.ಶ. 20ನೇ ಶತಮಾನದ ಆದಿಭಾಗದಲ್ಲಿ ಅಜೆಕಾರಿನ ಆಸುಪಾಸಿನಲ್ಲಿ ಶಾಲೆಗಳಿಲ್ಲದೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿರುವುದನ್ನು ಮನಗಂಡ ದಿ| ಶಿರ್ವ ಅಬ್ರಹಾಂ ಮಿನೇಜಸ್‌ ಅವರು ಅಜೆಕಾರಿನ ಮುಳಿಹುಲ್ಲಿನ ಕಟ್ಟಡ ಒಂದರಲ್ಲಿ 1908ರಲ್ಲಿ ಶಾಲೆಯನ್ನು ತೆರೆದು ಈ ಪ್ರದೇಶದ ಜನತೆಗೆ ಶಿಕ್ಷಣ ಪಡೆಯುವ ಸದವಕಾಶ ಕಲ್ಪಿಸಿಕೊಟ್ಟರು.

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1949ರಲ್ಲಿ ಹಿ.ಪ್ರಾ. ಶಾಲೆಯಾಗಿ ಭಡ್ತಿ
ಕ್ರಿ.ಶ. 1925ರಲ್ಲಿ ಹೆಬ್ರಿ, ಕಾರ್ಕಳದ ನಡುವೆ ಒಂದು ಪ್ರಮುಖ ಶಾಲೆಯಾಗಿ ಬೆಳೆಯುತ್ತಿದ್ದ ಸಂದರ್ಭ ಮಿನೇಜಸ್‌ ಅವರು ಕಿರಿಯ ವಿಭಾಗದ ಶಾಲೆಯಿರುವ ಕಟ್ಟಡಕ್ಕೆ 9 ಸೆಂಟ್ಸ್‌ ಸ್ಥಳ ಬಿಟ್ಟುಕೊಟ್ಟರು. ಅನಂತರ ವಿದ್ಯಾಭಿಮಾನಿಗಳ ನೆರವಿನಿಂದ ಶಾಲೆಗೆ ಹೆಂಚು ಹೊದಿಸಲಾಯಿತು. 1949ರಲ್ಲಿ ಹಿ.ಪ್ರಾ. ಶಾಲೆಯಾಗಿ ಭಡ್ತಿಗೊಂಡಿತು. ಈ ಸಂದರ್ಭ ದಿ| ಅಜೆಕಾರು ಪಾಂಡುರಂಗ ಕಿಣಿ ಯಾನೆ ದೇವು ಮಾಸ್ಟ್ರೆ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು.

ಅಜೆಕಾರು ಪೇಟೆಯಲ್ಲೇ ಶಾಲೆ ಇದ್ದ ಸಂದರ್ಭ ವರ್ಷ ದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿ ಸ್ಥಳಾವಕಾಶದ ಕೊರತೆ ಉಂಟಾದುದರಿಂದ 1953ರಲ್ಲಿ ದಿ| ಸುಂದರ ನಾಯಕ್‌ ಅವರು ತಮ್ಮ 3 ಎಕ್ರೆ ಜಾಗವನ್ನು ಶಿಕ್ಷಣ ಸಂಸ್ಥೆಗೆ ದಾನವಾಗಿ ನೀಡಿದರು. 1956ರಲ್ಲಿ ಶಾಲೆಯ ಸುಸಜ್ಜಿತ ಕಟ್ಟಡವು ನಿರ್ಮಾಣಗೊಂಡಿತು. 1969ರಲ್ಲಿ ಬೋರ್ಡ್‌ ಮಾ.ಹಿ. ಪ್ರಾ. ಶಾಲೆಯಾಗಿ ಘೋಷಿಸಲ್ಪಟ್ಟಿತು. 1973ರಲ್ಲಿ ಕಾರ್ಕಳ ತಾ| ಬೋರ್ಡ್‌ ಮತ್ತು ಅಜೆಕಾರು ಪಂಚಾಯತ್‌ ನೆರವಿನಿಂದ ಹೆಚ್ಚುವರಿ ಕೊಠಡಿ ನಿರ್ಮಿಸ ಲಾಯಿತು.

131 ವಿದ್ಯಾರ್ಥಿಗಳು
ಶಾಲೆ ಪ್ರಾರಂಭವಾದ ವರ್ಷದಲ್ಲಿ ಸುಮಾರು 125 ಮಕ್ಕಳು ಶಿಕ್ಷಣ ಪಡೆದಿದ್ದು ಮೂವರು ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದರು 1-3ನೇ ತರಗತಿಯ ವರೆಗೆ ಶಿಕ್ಷಣ ನೀಡಲಾಗುತ್ತಿತ್ತು. ಅಜೆಕಾರು, ಕಡ್ತಲ, ಹೆರ್ಮುಂಡೆ, ಎಣ್ಣೆಹೊಳೆ, ಅಂಡಾರು, ಕಾಡುಹೊಳೆ ಗ್ರಾಮ ಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಶಾಲೆಗೆ ಬರುತ್ತಿ ದ್ದರು. ಪ್ರಸ್ತುತ ಶಾಲೆಯಲ್ಲಿ 131 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು 6 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ.

ಮೂಲ ಸೌಕರ್ಯ
ಶಾಲೆಯು 2008ರಲ್ಲಿ ಶತಮಾನೋತ್ಸವವನ್ನು ಆಚರಿಸಿದ್ದು ಈ ಸಂದರ್ಭವನ್ನು ಸ್ಮರಣೀಯವಾಗಿಡಲು ಕ್ರೀಡಾ ವೇದಿಕೆ, ಧ್ವಜ ಕಟ್ಟೆ, ಸ್ಟೇಡಿಯಂ ಹಾಗೂ 200 ಮೀ. ಟ್ರಾÂಕ್ಸ್‌ಗಳನ್ನೊಳಗೊಂಡ ವಿಶಾಲ ಕ್ರೀಡಾಂಗಣ ನಿರ್ಮಿಸಲಾಗಿದೆ. ಶಾಲೆಯು ಅಡುಗೆ ಕೋಣೆ, ಶೌಚಾಲಯ, ಶುದ್ಧೀಕರಿಸಿದ ಕುಡಿಯುವ ನೀರು ಯೋಜನೆ, ಸ್ಮಾರ್ಟ್‌ ಕ್ಲಾಸ್‌, ವಾಚನಾಲಯ, ಶಿಕ್ಷಕರ ಕೊಠಡಿಗಳನ್ನು ಒಳಗೊಂಡು ಅವಶ್ಯವಿರುವ ಬಹುತೇಕ ಎಲ್ಲ ಮೂಲ ಸೌಕರ್ಯ ಒಳಗೊಂಡಿದೆ. ಸರಕಾರಿ ಶಾಲೆಗೆ ಸ್ವಾಗತ ಗೋಪುರವನ್ನು ಶಾಲೆಯ ಹಳೆವಿದ್ಯಾರ್ಥಿ, ಉದ್ಯಮಿ ಶಿವರಾಮ ಜಿ. ಶೆಟ್ಟಿಯವರು ನಿರ್ಮಿಸಿಕೊಟ್ಟಿದ್ದಾರೆ. ಶಾಲೆಯ ಹಳೆ ವಿದ್ಯಾರ್ಥಿ ಡಾ| ಸುಧಾಕರ ಶೆಟ್ಟಿ ಅವರು ಶಾಲೆಗೆ ಕಳೆದ 5 ವರ್ಷಗಳಿಂದ ಗೌರವ ಶಿಕ್ಷಕಿಯನ್ನು ನೇಮಿಸಿ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸಹಕರಿಸುತ್ತಿದ್ದಾರೆ.

ಅಜೆಕಾರು ಪರಿಸರದ ಅತ್ಯಂತ ಹಳೆಯ ಶಾಲೆ ನಮ್ಮದಾಗಿದ್ದು ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ಗ್ರಾಮಸ್ಥರ ಸಹಕಾರ ಹಾಗೂ ಕೊಡುಗೆಗಳಿಂದ ಶಾಲೆ 111ನೇ ವರ್ಷದಲ್ಲೂ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ.
-ಎಸ್‌. ಆರ್‌. ವಿಶ್ವನಾಥ್‌, ಮುಖ್ಯ ಶಿಕ್ಷಕರು

1970ರ ದಶಕದಲ್ಲಿ ಶಾಲೆಯ ವಿದ್ಯಾರ್ಥಿಯಾಗಿದ್ದ ನನಗೆ ಶಾಲೆಯಲ್ಲಿ ದೊರೆತ ಗುಣ ಮಟ್ಟದ ಶಿಕ್ಷಣ ಭವಿಷ್ಯಕ್ಕೆ ಬಹಳಷ್ಟು ಸಹಕಾರಿಯಾಯಿತು. ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದ ಫ‌ಲವಾಗಿ ಶಾಲೆಯು ಶತಮಾನವನ್ನು ಕಂಡು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿ ಮುನ್ನಡೆಯುತ್ತಿದೆ.
-ಡಾ| ಉಲ್ಲಾಸ್‌ ಕಾಮತ್‌, ಡೀನ್‌, ಮೆಲಕ ಮಣಿಪಾಲ ಮೆಡಿಕಲ್‌ ಕಾಲೇಜು, ಮಣಿಪಾಲ
( ಶಾಲೆಯ ಹಳೆ ವಿದ್ಯಾರ್ಥಿ)

-  ಜಗದೀಶ್‌ ರಾವ್‌

ಟಾಪ್ ನ್ಯೂಸ್

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.