ಪ್ರತಿ ಜಿಲ್ಲೆಯಲ್ಲೂ ಕಾಂಗ್ರೆಸ್ ಪಾದಯಾತ್ರೆ : ಧ್ರುವನಾರಾಯಣ
Team Udayavani, Jun 25, 2022, 1:18 AM IST
ಉಡುಪಿ: ಸ್ವಾತಂತ್ರ್ಯದ 75ನೇ ವರ್ಷಾಚರಣೆ ಪ್ರಯುಕ್ತ “ಭಾರತ್ ಜೋಡೋ’ ಕಾರ್ಯಕ್ರಮದಡಿ ಪ್ರತೀ ಜಿಲ್ಲೆಯಲ್ಲೂ 75 ಕಿ.ಮೀ. ಪಾದಯಾತ್ರೆಯನ್ನು ಆ. 15 ರೊಳಗೆ ಹಮ್ಮಿಕೊಳ್ಳುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ತಿಳಿಸಿದ್ದಾರೆ.
ಕಾಂಗ್ರೆಸ್‌ನ ನವ ಸಂಕಲ್ಪ ಸಭೆಯಲ್ಲಿ ಆರು ಸಮಿತಿಗಳನ್ನು ರಚಿಸಿ, ಯುವ ಜನರನ್ನು ಪಕ್ಷಕ್ಕೆ ಕರೆತರುವುದು, ಮಹಿಳಾ ಸಶಕ್ತೀಕರಣ, ರೈತರ ಸಮಸ್ಯೆ, ಸಹಕಾರಿಗಳ ಸಮಸ್ಯೆ, ಪಕ್ಷ ಸಂಘಟನೆ ಮತ್ತು ಭಿನ್ನಮತ ಶಮನ ಬಗ್ಗೆ ಚರ್ಚಿಸಿ ಸಲಹೆಗಳನ್ನು ಕೆಪಿಸಿಸಿಗೆ ಕಳುಹಿಸಲಾಗುತ್ತದೆೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರಕಾರಗಳ ವೈಫಲ್ಯ ಗಳನ್ನು ಜನರ ಮುಂದಿಡಲಿದ್ದೇವೆ. ಅಗ್ನಿಪಥ ಮೂಲಕ ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸಲು ಕೇಂದ್ರ ಸರಕಾರ ಹೊರಟಿದೆ. ಇದನ್ನು ವಿರೋಧಿಸಿ ಪ್ರತೀ ವಿಧಾನಸಭೆ ವ್ಯಾಪ್ತಿಯಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಇ.ಡಿ., ಸಿಬಿಐ, ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರನ್ನು ದಮನ ಮಾಡಲು ಸಾಧ್ಯವಿಲ್ಲ ಎಂದರು.
ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಲ್ಲಿ ಡಾ| ಅಂಬೇಡ್ಕರ್, ಕುವೆಂಪು, ನಾರಾಯಣಗುರು, ಭಗತ್‌ಸಿಂಗ್, ಕನಕದಾಸರು ಸಹಿತ ಅನೇಕರಿಗೆ ಅವಮಾನ ಮಾಡಿದ್ದಾರೆ. ಬಿಜೆಪಿಗೆ ಸಾಮಾ ಜಿಕ ನ್ಯಾಯ ಬೇಕಿಲ್ಲ. ಸರಕಾರದ ಭ್ರಷ್ಟಾಚಾರವನ್ನು ಮರೆಮಾಚಲು ಇವೆೆಲ್ಲವನ್ನು ಅಸ್ತ್ರವಾಗಿ ಬಳಸುತ್ತಿ ದ್ದಾರೆ ಎಂದರು.
ಆಪರೇಶನ್ ಕಮಲದ ಮೂಲಕ ಮಹಾರಾಷ್ಟ್ರದಲ್ಲೂ ಬಿಜೆಪಿ ಸರಕಾರ ರಚನೆಗೆ ಮುಂದಾಗುತ್ತಿದೆ. ಕರ್ನಾಟಕದಿಂದಲೇ ಈ ಪ್ರವೃತ್ತಿ ಆರಂಭ ವಾಗಿದೆ. ಗುಜರಾತ್ ಮಾಡೆಲ್ ಭ್ರಷ್ಟಾಚಾರ ದಲ್ಲಿ ಮಾತ್ರ; ಅಭಿವೃದ್ಧಿಯಲ್ಲಲ್ಲ. ಎಲ್ಲದಕ್ಕೂ ಕೊನೆ ಇದ್ದೇ ಇರುತ್ತದೆ. ಜನರೇ ಮುಂದೆ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಕಾಂಗ್ರೆಸ್‌ನಲ್ಲಿ ಯುವಕರಿಗೆ ಆದ್ಯತೆ ನೀಡ ಲಾಗುತ್ತಿದೆ. ಪದಾಧಿಕಾರಿಗಳ ಹುದ್ದೆಯಲ್ಲಿ ಶೇ. 50ರಷ್ಟನ್ನು 50 ವರ್ಷಕ್ಕಿಂತ ಕೆಳಗಿನವರಿಗೆ ಮೀಸಲಿಡಲು ನಿರ್ಧಾರವಾಗಿದೆ. ಸಂಘಟ ನೆಯ ಮೂಲಕ ಪಕ್ಷಕ್ಕೆ ಶಕ್ತಿ ತುಂಬಲಾಗುತ್ತಿದೆ. ಸದಸ್ಯತ್ವ ಅಭಿಯಾನ ಚೆನ್ನಾಗಿ ನಡೆಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ನೋಂದಣಿಗೆ ಕಾಲಾವಕಾಶ ವಿಸ್ತರಿಸಿದ್ದೇವೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಮಮತಾ ಗಟ್ಟಿ, ಪ್ರಮುಖರಾದ ಎಂ.ಎ. ಗಫೂರ್, ಪ್ರಸಾದ್‌ರಾಜ್ ಕಾಂಚನ್, ದೀಪಕ್ ಕೋಟ್ಯಾನ್, ಸೌರಭ್ ಬಲ್ಲಾಳ್, ಅಣ್ಣಯ್ಯ ಸೇರಿಗಾರ್,
ಭಾಸ್ಕರ್ ರಾವ್ ಕಿದಿಯೂರು ಉಪಸ್ಥಿತರಿದ್ದರು.
ಯೋಧರಂತೆ ಬೂತ್ ಕಾಯಬೇಕು: ಮೊಯ್ಲಿ
ಅವಿಭಜಿತ ದ.ಕ. ಜಿಲ್ಲೆ ಕಾಂಗ್ರೆಸ್‌ನ ಭದ್ರ ಕೋಟೆಯಾಗಿತ್ತು. 15 ಕ್ಷೇತ್ರ ಸಹಿತ ಉಡುಪಿ-ಚಿಕ್ಕಮಗಳೂರು, ದ.ಕ. ಲೋಕಸಭೆ ಕ್ಷೇತ್ರವನ್ನು ಗೆದ್ದಿ ದ್ದೆವು. 32 ಜಿ.ಪಂ., 2 ಜಿಲ್ಲೆಯ ಎಲ್ಲ ತಾ.ಪಂ.ಗಳನ್ನೂ ಗೆದ್ದಿದ್ದೆವು. ಇದು ಕಾಂಗ್ರೆಸ್ ಪಕ್ಷದ ಇತಿಹಾಸ. ಇದೇ ಭವಿಷ್ಯಕ್ಕೆ ಮುನ್ನುಡಿಯಾಗಲಿದೆ.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಎಲ್ಲ ಕ್ಷೇತ್ರ ಗಳಲ್ಲೂ ಗೆಲ್ಲುವಂತೆ ಪಕ್ಷ ಸಂಘಟನೆ ಆಗಬೇಕಿದೆ. ಎಲ್ಲ ಬೂತ್‌ಗಳಲ್ಲಿ ಪಕ್ಷದ ಸಿದ್ಧಾಂತಕ್ಕೆ ಬದ್ಧರಾದವರನ್ನೇ ನೇಮಿಸಬೇಕು. ಯುದ್ಧ, ಗಲಭೆ ಏನೇ ನಡೆದರೂ ಕಾರ್ಯಕರ್ತರು ಯೋಧರಂತೆ ಬೂತ್‌ಗಳನ್ನು ಕಾಯಬೇಕೆಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.