ಈಡೇರಿಸಲಾಗದ ಭರವಸೆ ನೀಡುವ ಕಾಂಗ್ರೆಸ್: ಅಣ್ಣಾಮಲೈ ಆರೋಪ
Team Udayavani, Feb 28, 2023, 4:30 AM IST
ಉಡುಪಿ: ವಿಧಾನಸಭೆ ಚುನಾವಣೆಯನ್ನು ಹೇಗಾದರೂ ಮಾಡಿ ಗೆಲ್ಲಲು ಕಾಂಗ್ರೆಸ್ ಈಡೇರಿಸಲಾಗದ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಅಲ್ಲದೆ, ಕರ್ನಾಟಕದಲ್ಲಿ ಗೆದ್ದು ಮುಂದಿನ ಲೋಕಸಭೆ ಚುನಾವಣೆಗೆ ಎಟಿಎಂ ರೀತಿಯಲ್ಲಿ ರಾಜ್ಯವನ್ನು ಬಳಸಿಕೊಳ್ಳಲು ಕಾಂಗ್ರೆಸ್ ಯೋಚಿಸುತ್ತಿದೆ ಎಂದು ರಾಜ್ಯ ಬಿಜೆಪಿ ಚುನಾವಣೆ ಸಹ ಉಸ್ತುವಾರಿ ಕೆ.ಅಣ್ಣಾಮಲೈ ಆರೋಪಿಸಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಭಾರತಮಾತೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿ, ಕಾಂಗ್ರೆಸ್ ಗೆದ್ದು ರಾಜ್ಯ ಬಜೆಟ್‌ನಲ್ಲಿ ಶೇ.10ರಷ್ಟು ಕಮಿಷನ್ ಹೊಡೆದು ಮುಂದಿನೆರಡು ವರ್ಷ ಸುಮಾರು 50,000 ಕೋ.ರೂ. ಸಂಗ್ರಹಿಸಿ ಲೋಕಸಭೆ ಚುನಾವಣೆ ಎದುರಿಸಲು ಎಟಿಎಂ ರೀತಿಯಲ್ಲಿ ಕರ್ನಾಟಕವನ್ನು ಬಳಸುವ ಸಾಧ್ಯತೆಯಿದೆ ಎಂದು ದೂರಿದರು.
ಕಾಂಗ್ರೆಸ್ ಬಳಿ ಆರೋಪ ಮಾಡುವುದು ಬಿಟ್ಟರೆ ಬೇರೇನೂ ವಿಷಯವಿಲ್ಲ. ಆದರೆ ನಮ್ಮದು ಅಭಿವೃದ್ಧಿಯ ಅಜೆಂಡಾ. ಕೇಂದ್ರ ಹಾಗೂ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಮತ ಯಾಚನೆ ಮಾಡಲಿದ್ದೇವೆ. ಕಾಂಗ್ರೆಸ್‌ನ ಆರೋಪಕ್ಕೆ ಉತ್ತರ ನೀಡಬೇಕಾಗಿಲ್ಲ. ನಮ್ಮ ಕೆಲಸವನ್ನು ಇನ್ನಷ್ಟು ವೇಗವಾಗಿ ಮಾಡಿಕೊಂಡು ಹೋಗಬೇಕು ಎಂದರು.
ಉಡುಪಿಯಲ್ಲಿ 6 ಇಂಜಿನ್ ಸರಕಾರ
ಕೇಂದ್ರ, ರಾಜ್ಯ ಸರಕಾರ, ಎಲ್ಲ ಶಾಸಕರು, ಸಂಸದರು, ಈ ಹಿಂದೆ ಜಿ.ಪಂ., ತಾ.ಪಂ. ಕೂಡ ಬಿಜೆಪಿ ಸ್ವೀಪ್ ಮಾಡಿತ್ತು. ಹೀಗಾಗಿ ಉಡುಪಿ ಜಿಲ್ಲೆಯಲ್ಲಿ 6 ಇಂಜಿನ್ ಸರಕಾರ ವಿದ್ದು,
ಅಭಿವೃದ್ಧಿ ವೇಗವಾಗಿ ಸಾಗುತ್ತಿದೆ. ಬಿಜೆಪಿಗೂ ಉಡುಪಿಗೂ ಅವಿನಾಭಾವ ಸಂಬಂಧವಿದೆ ಎಂದು ತಮ್ಮ ಆಡಳಿತದ ದಿನಗಳನ್ನು ಸ್ಮರಿಸಿಕೊಂಡರು.
ಕರ್ನಾಟಕವೇ ಬೆಸ್ಟ್
ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕವೇ ಅಭಿವೃದ್ಧಿ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಮುಂದಿದೆ. ಮಕ್ಕಳ ಶಿಕ್ಷಣ, ಜಿಎಸ್‌ಟಿ ಸಂಗ್ರಹ, ತೆರಿಗೆ ಸಂಗ್ರಹ, ದೇಶದ ಶೇ. 50ರಷ್ಟು ಸ್ಟಾರ್ಟ್‌ಅಪ್ ಬೆಂಗಳೂರಿನಲ್ಲಿದ್ದಾರೆ. ಗ್ರಾಮೀಣಾಭಿವೃದ್ಧಿ, ಕೇಂದ್ರದ ಸೌಲಭ್ಯಗಳ ಸದುಪಯೋಗ ಹೀಗೆ ಎಲ್ಲದರಲ್ಲೂ ಕರ್ನಾಟಕ ಮೊದಲಿದೆ. ಮುಂದಿನ ಚುನಾವಣೆ ಯಲ್ಲಿ ಬಿಜೆಪಿ 150ಕ್ಕೂ ಅಧಿಕ ಸೀಟು ಗೆದ್ದು ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಾಸ್ತಾವಿಕ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಶಾಸಕರಾದ ಕೆ.ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಕೆ. ಉದಯ ಕುಮಾರ್ ಶೆಟ್ಟಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಎ. ಸುವರ್ಣ, ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ, ಉಪಾಧ್ಯಕ್ಷರಾದ ಗೀತಾಂಜಲಿ ಸುವರ್ಣ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ, ವಕ್ತಾರ ರಾಘವೇಂದ್ರ ಕಿಣಿ, ಸಹ ವಕ್ತಾರರಾದ ಪ್ರತಾಪ್ ಶೆಟ್ಟಿ ಚೇರ್ಕಾಡಿ, ಶಿವಕುಮಾರ್ ಅಂಬಲಪಾಡಿ, ಪ್ರಮುಖರಾದ ಶ್ಯಾಮಲಾ ಕುಂದರ್, ಶರತ್ ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ದಿನಕರ ಬಾಬು, ನಳಿನಿ ಪ್ರದೀಪ್ ರಾವ್, ವೀಣಾ ನಾಯ್ಕ, ರವಿ ಅಮಿನ್, ಅಂಡಾರು ದೇವಿ ಪ್ರಸಾದ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯ ದರ್ಶಿಗಳಾದ ನವೀನ್ ಶೆಟ್ಟಿ ಕುತ್ಯಾರು ಸ್ವಾಗತಿಸಿ, ಸದಾನಂದ ಉಪ್ಪಿನಕುದ್ರು ನಿರೂಪಿಸಿದರು.
ಪ್ರಗತಿ ರಥಕ್ಕೆ ಚಾಲನೆ
ಜಿಲ್ಲೆಯ ಐದು ಕ್ಷೇತ್ರದಲ್ಲೂ ಚುನಾವಣೆಯವರೆಗೂ ಬಿಜೆಪಿ ಸರಕಾರದ ಸಾಧನೆ ಮತ್ತು ಕಾಂಗ್ರೆಸ್‌ನ ದುರಾಡಳಿತವನ್ನು ಒಳಗೊಂಡ ವೀಡಿಯೋ ಸಂದೇಶವನ್ನು ಗ್ರಾಮ ಗ್ರಾಮಕ್ಕೂ ತಲುಪಿಸುವ ಪ್ರಗತಿ ರಥಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಚಾಲನೆ ನೀಡಿದರು. ಈ ವೇಳೆ ಪಕ್ಷದ ಎಲ್ಲ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.