Scholarship: ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಇನ್ನು ಸುಲಭ
ಪ್ರತೀ ಕಾಲೇಜಲ್ಲೂ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿ ಸಶಕ್ತೀಕರಣ ಅಧಿಕಾರಿ
Team Udayavani, Aug 27, 2023, 12:05 PM IST
ಉಡುಪಿ: ಪದವಿಪೂರ್ವ, ಪದವಿ ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗದ ವಿದ್ಯಾರ್ಥಿ ಗಳಿಗೆ ಸರಕಾರದ ವಿವಿಧ ವಿದ್ಯಾರ್ಥಿ ವೇತನ ಗಳನ್ನು ಸಮರ್ಪಕವಾಗಿ ತಲುಪಿ ಸಲು ಪ್ರತೀ ಕಾಲೇಜುಗಳಲ್ಲೂ ವಿದ್ಯಾರ್ಥಿ ಸಶಕ್ತೀಕರಣ ಅಧಿಕಾರಿ (ಎಂಪವರ್‌ವೆುಂಟ್ ಆಫೀಸರ್) ನೇಮಿಸಲು ಸರಕಾರ ಆದೇಶ ಹೊರಡಿಸಿದೆ.
ಆಯಾ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೋಧಕ/ ಬೋಧ ಕೇತರ ಅಧಿಕಾರಿಯನ್ನು ಸಶಕ್ತೀಕರಣ ಅಧಿಕಾರಿಯಾಗಿ ನೇಮಿಸ ಬೇಕು. ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಕ್ತ ಅವಕಾಶವನ್ನು ಕಾಲೇಜಿನಲ್ಲಿಯೇ ಕಲ್ಪಿಸಬೇಕು. ಇದಕ್ಕಾಗಿ ಎಂಪವರ್‌ವೆುಂಟ್ ಸೆಲ್‌ನಲ್ಲಿ ಕಂಪ್ಯೂಟರ್, ಇಂಟರ್‌ನೆಟ್ ವ್ಯವಸ್ಥೆ ಒದಗಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.
ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವಾಗ ಕಂಡು ಬರುವ ಸಮಸ್ಯೆ ಗಳಿಂದ ವಿದ್ಯಾರ್ಥಿಗಳು ವಿವಿಧ ಇಲಾಖೆಯ ಕಚೇರಿಗೆ ಅಲೆಯು ವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಸಶಕ್ತೀಕರಣ ಅಧಿಕಾರಿಯು ಆಯಾ ಕಾಲೇಜು ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ವಿದ್ಯಾರ್ಥಿವೇತನಕ್ಕೆ ಅರ್ಹತೆ ಹೊಂದಿರು ವವರ ಪಟ್ಟಿ ಸಿದ್ಧಪಡಿಸಬೇಕು. ಅನಂತರ ಅವರಿಗೆ ವಿದ್ಯಾರ್ಥಿ ವೇತನದ ಮಾಹಿತಿ ನೀಡಿ, ಕಡ್ಡಾಯವಾಗಿ ಅರ್ಜಿ ಸಲ್ಲಿಸುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.
ಶುಲ್ಕ ಪಾವತಿಗೆ ಸಂಬಂಧಿಸಿದಂತೆ ಮೆಟ್ರಿಕ್ ಅನಂತರದ ವಿದ್ಯಾರ್ಥಿವೇತನಕ್ಕೆ ಅರ್ಹತೆ ಪಡೆದ ಎಸ್‌ಸಿ/ಎಸ್ಟಿ ವಿದ್ಯಾರ್ಥಿಗಳಿಂದ ದಾಖಲಾತಿ ಸಂದರ್ಭದಲ್ಲಿ ಶುಲ್ಕ ಪಾವತಿಸುವಂತೆ ಒತ್ತಾಯ ಮಾಡದೇ ಫ್ರೀಶಿಪ್‌ಕಾರ್ಡ್ ಬಳಸಿ ದಾಖಲಾತಿ ನೀಡಬೇಕು. ಸಶಕ್ತೀಕರಣ ಅಧಿಕಾರಿಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಎಸ್‌ಎಸ್‌ಪಿಯಿಂದ ಸೂಕ್ತ ತರಬೇತಿಯನ್ನು ನೀಡಲಾಗುವು ಎಂದು ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.
ಅಧಿಕಾರಿಯ ಕರ್ತವ್ಯ
ಅರ್ಜಿ ಸಲ್ಲಿಸುವ ಸಂದರ್ಭ ದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಎದುರಾದರೂ ಅದನ್ನು ಇಲಾಖೆಯ ಗಮನಕ್ಕೆ ತರುವುದು ಸಶಕ್ತೀಕರಣ ಅಧಿಕಾರಿಯ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ಕಾಲೇಜಿನಿಂದ ಇಲಾಖೆಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣ ಮಾಡಲೇ ಬಾರದು. ವಿದ್ಯಾರ್ಥಿಗಳು ಕಾಲೇಜಿಗೆ ಪ್ರವೇಶ ಪಡೆಯುವ ದಿನವೇ ಅಗತ್ಯ ದಾಖಲೆಗಳನ್ನು ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್‌ಗೆ (ಎಸ್‌ಎಸ್‌ಪಿ) ನೀಡಬೇಕು ಎಂದು ನಿರ್ದೇಶಿಸಿದೆ.
ಇದನ್ನೂ ಓದಿ: Sullia: ಕಾರ್ಮಿಕ ಕಲ್ಯಾಣ ಮಂಡಳಿಯ ಶಿಶುಪಾಲನ ಕೇಂದ್ರ ಸ್ಥಗಿತ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.