ಡ್ರಗ್ಸ್ ಮುಕ್ತ ಜಿಲ್ಲೆಯಾಗಿ ಪಣ ; ಉಡುಪಿಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್
Team Udayavani, Oct 22, 2020, 1:09 AM IST
ಉಡುಪಿ: ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿದರು.
ಉಡುಪಿ: ಉಡುಪಿ ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಪಣತೊಡಬೇಕು. ಮಾದಕ ವಸ್ತುಗಳ ವಿರುದ್ಧದ ಹೋರಾಟದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ತಂಡ ಉತ್ತಮ ಕಾರ್ಯ ನಿರ್ವಹಿಸಿದೆ. ಈ ಪ್ರಕ್ರಿಯೆ ನಿರಂತರವಾಗಿರಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಚಂದು ಮೈದಾನದಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕೇಂದ್ರಸ್ಥಾನದಲ್ಲಿ ಬುಧವಾರ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಅವರು ಮಾತನಾಡಿದರು.
ಯಾವುದೇ ರೀತಿಯ ತುರ್ತು ಸಂದರ್ಭ ಎದುರಾದಾಗಲೂ ಪೊಲೀಸರು ರಕ್ಷಣೆಗೆ ನಿಲ್ಲುತ್ತಾರೆ. ಕೊರೊನಾ ನಿಯಂತ್ರಣದಲ್ಲಿ ಗಡಿಭಾಗ ಸಹಿತ ಪ್ರಮುಖ ಸ್ಥಳಗಳಲ್ಲಿ ಸೂಕ್ತ ನಿರ್ವಹಣೆ ಹಾಗೂ ಇತ್ತೀಚೆಗೆ ಬಂದ ನೆರೆ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಕಾರ್ಯವೈಖರಿ ಶ್ಲಾಘನಾರ್ಹ ಎಂದರು.
ಕಾರ್ಯಕ್ರಮಕ್ಕೆ ಮುನ್ನ ಹುತಾತ್ಮ ಪೊಲೀಸ್ ಪ್ರತಿಮೆಗೆ ಚಕ್ರ ಪುಷ್ಪಗುತ್ಛ ಸಮರ್ಪಣೆ ನಡೆಯಿತು. ಹಲವು ಗಣ್ಯರು ಪುಷ್ಪಗುತ್ಛ ಅರ್ಪಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಅವರು ಕಳೆದ ಒಂದು ವರ್ಷದಲ್ಲಿ ಹುತಾತ್ಮರಾದ ಪೊಲೀಸರ ಸಂಕ್ಷಿಪ್ತ ವಿವರ ನೀಡಿದರು. ಒಂದು ವರ್ಷದ ಅವಧಿಯಲ್ಲಿ ದೇಶದಲ್ಲಿ ಒಟ್ಟು 264 ಪೊಲೀಸರು ಹಾಗೂ ಕರ್ನಾಟಕದ 17 ಮಂದಿ ಪೊಲೀಸರು ಹುತಾತ್ಮರಾಗಿದ್ದಾರೆ ಎಂದರು. ಪೊಲೀಸ್ ಧ್ವಜವನ್ನು ಅರ್ಧಮಟ್ಟಕ್ಕೆ ಇಳಿಸುವ ಮೂಲಕ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.
ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ನಿರೀಕ್ಷಕ ಮೂರ್ತಿ ಎಸ್. ನಾಯ್ಕ ಅವರು ಪರೇಡ್ ಪ್ರಕ್ರಿಯೆಗಳನ್ನು ನೆರವೇರಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಡುಪಿ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ ಅವರು ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.