ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟು ಜಾರಿ
ಕಾರ್ಯಾಚರಣೆಗೆ ಸಿದ್ದಗೊಂಡಿದೆ 3 ತಂಡ ; ಪುನರಾವರ್ತನೆಯಾದರೆ ಲೈಸನ್ಸ್ ರದ್ದು
Team Udayavani, Sep 6, 2019, 5:03 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ನಿಟ್ಟಿನಲ್ಲಿ ನಗರಸಭೆಯು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಈಗಾಗಲೇ ಪ್ಲಾಸ್ಟಿಕ್ ಬಳಸುತ್ತಿರುವ ಅಂಗಡಿಗಳ ಮೇಲೂ ನಿಗಾ ಇರಿಸುವ ಕೆಲಸವನ್ನು ನಗರಸಭೆಯ ಅಧಿಕಾರಿಗಳು ಮಾಡಲಿದ್ದಾರೆ.
ರಾಜ್ಯ ಸರಕಾರದ ಪ್ಲಾಸ್ಟಿಕ್ ನಿಷೇಧ ಅಧಿಸೂಚನೆಯಂತೆ ಯಾವುದೇ ವ್ಯಕ್ತಿ, ಅಂಗಡಿ ಮಾಲಕರು, ಮಾರಾಟಗಾರರು, ಸಗಟು ಮಾರಾಟಗಾರರು, ಚಿಲ್ಲರೆ ವ್ಯಾಪಾರಿಗಳು, ವ್ಯಾಪಾರಿ ಮತ್ತು ಮಾರಾಟಗಾರರು, ದಪ್ಪದ ಯಾವುದೇ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ತಟ್ಟೆ, ಲೋಟ, ಚಮಚ, ಕ್ಲಿಂಗ್ ಫಿಲ್ಮ್ಸ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ, ಥರ್ಮಾಕೂಲ್, ಪ್ಲಾಸ್ಟಿಕ್ ಮೈಕೋ ಬೀಡ್ಸ್‌ನಿಂದ ತಯಾರಾದ ವಸ್ತುಗಳ ಬಳಕೆ, ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ ಮತ್ತು ವಿತರಣೆ ಮಾಡುವುದನ್ನು ನಿಷೇಧಿಸಲಾಗಿದೆ.
3 ತಂಡಗಳಿಂದ ಕಾರ್ಯಾಚರಣೆ
ಪ್ಲಾಸ್ಟಿಕ್ ನಿಷೇಧದ ವಿರುದ್ದ ನಗರಸಭೆಯು ಈಗಾಗಲೇ ಕಾರ್ಯಾಚರಣೆಗೆ 3 ತಂಡಗಳನ್ನು ಸಿದ್ದಗೊಳಿಸಿದೆ. ಮಣಿಪಾಲ, ಮಲ್ಪೆ, ಉಡುಪಿ (ಈಸ್ಟ್, ವೆಸ್ಟ್, ಸೆಂಟ್ರಲ್) ಭಾಗಗಳಲ್ಲಿ ಆ ತಂಡಗಳು ಕಾರ್ಯಾಚರಣೆ ನಡೆಸಲಿವೆ. ಈಗಾಗಲೇ ಒಂದೊಂದು ತಂಡಗಳ ಉಸ್ತುವಾರಿಗಳ ನೇಮಕವೂ ನಡೆದಿದ್ದು, ಪೂರ್ಣ ಜವಾಬ್ದಾರಿ ನೀಡಲಾಗಿದೆ.
ಲೈಸನ್ಸ್ ರದ್ದು!
ಅಧಿಕಾರಿಗಳು ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳು ಕಂಡು ಬಂದರೆ ಅಪಾರ ಪ್ರಮಾಣದಲ್ಲಿ ದಂಡ ವಿಧಿಸಲಾಗುತ್ತದೆ. ಮೊದಲ ಬಾರಿಗೆ 1000ರೂ. ಎರಡನೇ ಬಾರಿಗೆ 2000 ರೂ. ಹಾಗೂ ಮತ್ತೂ ಪುನರಾವರ್ತನೆಯಾದರೆ ಅಂಗಡಿ ಮಾಲಕರ ಲೈಸನ್ಸ್ ರದ್ದುಗೊಳಿಸುವ ಅಧಿಕಾರವನ್ನೂ ನೀಡಲಾಗಿದೆ.
ಕಾರ್ಯಾಚರಣೆಗೆ 3ತಂಡ
ನಗರಾದ್ಯಂತ ಪ್ಲಾಸ್ಟಿಕ್ ನಿಷೇಧ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಈಗಾಗಲೆ 3 ತಂಡಗಳು ತಯಾರಾಗಿದ್ದು ಕಾರ್ಯಾಚರಣೆಗೆ ಇಳಿಯಲಿವೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳು ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರಗಿಸಲಾಗುವುದು. ಪುನರಾವರ್ತನೆಯಾದರೆ ಅಂಗಡಿ ಲೈಸನ್ಸ್‌ನ್ನೂ ರದ್ದುಗೊಳಿಸಲಾಗುವುದು.
– ಆನಂದ ಕಲ್ಲೋಳಿಕರ್, ಪೌರಾಯುಕ್ತರು, ಉಡುಪಿ ನಗರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.