ಕಾಲುವೆಗೆ ಅವೈಜ್ಞಾನಿಕ ಮಾದರಿಯಲ್ಲಿ ತಡೆಗೋಡೆ ನಿರ್ಮಾಣ
ಕಾಪು : ಸ್ಥಳೀಯರಿಂದ ಕಾಮಗಾರಿಗೆ ತಡೆ
Team Udayavani, Jun 9, 2020, 5:03 AM IST
ಕಾಪು: ಕಾಪು ಪುರಸಭೆ ವ್ಯಾಪ್ತಿಯ ಪಡು ಗ್ರಾಮದ ರಾಮನಗರದ ಮಳೆ ನೀರು ಹಾದು ಹೋಗುವ ರಾಜಕಾಲುವೆಯನ್ನು ಕಿರಿದುಗೊಳಿಸಿ, ಅವೈಜ್ಞಾನಿಕ ರೀತಿಯಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿರುವ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗೆ ಸ್ಥಳೀಯರೇ ತಡೆಯೊಡ್ಡಿದ ಘಟನೆ ಸೋಮವಾರ ಸಂಜೆ ನಡೆದಿದೆ.
ಕಾಪು ಪುರಸಭೆ ವ್ಯಾಪ್ತಿಯ ಮೂಳೂರು ಬಿಕ್ರಿಗುತ್ತು – ತಾವರೆ ಕೊಳದಿಂದ ಹರಿದು ಬರುವ ಮಳೆ ನೀರು ಪಡುಗ್ರಾಮದ ರಾಮ ನಗರದಲ್ಲಿ ಹಾದು ಹೋಗುವ ರಾಜಕಾಲುವೆಯಲ್ಲಿ ಹರಿದು ಸಮುದ್ರ ಸೇರುತ್ತದೆ. ಈ ರಾಜಕಾಲುವೆಗೆ ಪಶ್ಚಿಮ ದಿಕ್ಕಿನಲ್ಲಿ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಶಿಫಾರಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆಯ ಮೂಲಕ 50 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಲಾಗುತ್ತಿದೆ. ಆದರೆ ಈ ತಡೆಗೋಡೆ ನಿರ್ಮಾಣ ಕಾಮಗಾರಿಯು ಅವೈಜ್ಞಾನಿಕವಾಗಿದೆ ಎನ್ನುವುದು ಸ್ಥಳೀಯರ ಆರೋಪವಾಗಿದೆ.
ಈ ಬಗ್ಗೆ ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿಲ್ಲಾಧಿಕಾರಿ, ಸಹಾಯಕ ಕಮಿಷನರ್, ಕಾಪು ತಹಶೀಲ್ದಾರ್ ಹಾಗೂ ಕಾಪು ಪುರಸಭೆ ಮುಖ್ಯಾಧಿಕಾರಿಗಳಿಗೆ ಸ್ಥಳೀಯರು ಮನವಿ ನೀಡಿ, ಕಾಮಗಾರಿಯನ್ನು ತಡೆಹಿಡಿಯುವಂತೆ ಮನವಿ ಮಾಡಿದರು.
ಕಾಮಗಾರಿಗೆ ವಿರೋಧ ಯಾಕಾಗಿ ?
ಕಾಪು ಪಡುಗ್ರಾಮ ರಾಮನಗರದ ದಕ್ಷಿಣ ಭಾಗದಲ್ಲಿ ಇರುವ ಈ ರಾಜ ಕಾಲುವೆಯ ಪೂರ್ವ ದಿಕ್ಕಿನಲ್ಲಿ ನೂರಾರು ಎಕರೆ ಕೃಷಿ ಭೂಮಿಯಿದ್ದು, ಬಹುತೇಕ ಗದ್ದೆಗಳಲ್ಲಿ ಭತ್ತದ ಕೃಷಿಯನ್ನು ಬೆಳೆಸಲಾಗುತ್ತದೆ. ಇಲ್ಲಿನ ರಾಜ ಕಾಲುವೆಯನ್ನು ಕಿರಿದು ಮಾಡಿ ತಡೆಗೋಡೆ ಕಟ್ಟಿದರೆ ಕಾಲುವೆಯಲ್ಲಿ ಹರಿಯುವ ನೀರು ಗದ್ದೆಗಳತ್ತ ನುಗ್ಗಿ ಭತ್ತದ ಗದ್ದೆಗಳು ಹಾನಿಗೀಡಾಗುತ್ತವೆ ಮತ್ತು ನೆರೆ ಬಂದಲ್ಲಿ ಭತ್ತದ ಬೆಳೆ ಸಂಪೂರ್ಣ ಕೊಳೆತು ಹೋಗಲಿದೆ ಎಂಬ ಭಯ ಸ್ಥಳೀಯರನ್ನು ಕಾಡುತ್ತಿರುವುದೆ ಕಾಮಗಾರಿಗೆ ವಿರೋಧಕ್ಕೆ ಮುಖ್ಯ ಕಾರಣವಾಗಿದೆ.
ತಡೆಗೋಡೆ ನಿರ್ಮಾಣದಿಂದ ಪ್ರಯೋಜನವೇನು ?
ರಾಮನಗರ ಮೂಲಕ ಹಾದು ಹೋಗುವ ರಾಜಕಾಲುವೆಗೆ ತಡೆಗೋಡೆ ನಿರ್ಮಿಸಿದಲ್ಲಿ ಕಾಲುವೆಯಲ್ಲಿ ಮಳೆ ನೀರು ಹರಿದು ಹೋಗುವ ಸಂದರ್ಭ ಇಕ್ಕೆಲಗಳಲ್ಲಿನ ಸವಕಳಿಯಿಂದಾಗಿ ಉಂಟಾಗುವ ಭೂ ಕುಸಿತವನ್ನು ತಡೆಯಲು ಸಾಧ್ಯವಾಗಲಿದೆ. ರಾಮನಗರ – ಮೂಳೂರು ಬಿಕ್ರಿಗುತ್ತು ಕಾಲನಿವರೆಗಿನ ಹಲವು ಮನೆಗಳಿಗೆ ಸರಕಾರಿ ಜಾಗದಲ್ಲೇ ರಸ್ತೆ ನಿರ್ಮಿಸಿ ಕೊಡಬಹುದಾಗಿದೆ. ಪ್ರಸ್ತುತ ಈ ಭಾಗದ 20ಕ್ಕೂ ಅಧಿಕ ಮನೆಗಳ ಜನರು ಖಾಸಗಿ ರಸ್ತೆಯನ್ನೇ ಬಳಸುತ್ತಿದ್ದು ಸರಕಾರಿ ರಸ್ತೆ ನಿರ್ಮಾಣವಾದಲ್ಲಿ ಜನರಿಗೆ ವಿವಿಧ ಮೂಲ ಸೌಕರ್ಯಗಳನ್ನೂ ಸುಲಭವಾಗಿ ದೊರಕಿಸಿಕೊಡಬಹುದು ಎನ್ನುವುದು ಶಾಸಕರ ಲೆಕ್ಕಾಚಾರ.ಸ್ಥಳೀಯರಾದ ಶೇಖರ್ ಪೂಜಾರಿ, ಶೇಖರ್ ಶೆಟ್ಟಿ, ಗಣೇಶ್ ಕುಂದರ್, ಸಂತೋಷ್, ಕಿಶೋರ್, ರಘುರಾಮ ಶೆಟ್ಟಿ, ಭಾಸ್ಕರ್, ಗೀತಾ, ಸರೋಜಿನಿ, ವಿಜಯಾ, ಸುಹಾಸಿನಿ, ಪೂರ್ಣಿಮಾ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.