ಬ್ರಹ್ಮಾವರ: “ಬೇಕರ್ಸ್ ಮೀಟ್’ ಉದ್ಘಾಟನೆ
ಗ್ರಾಹಕರ ಆರೋಗ್ಯದ ಬಗ್ಗೆಯೂ ಕಾಳಜಿ ಅಗತ್ಯ: ಡಾ| ಪ್ರೇಮಾನಂದ ಕೆ
Team Udayavani, Sep 11, 2023, 9:26 AM IST
ಬ್ರಹ್ಮಾವರ : ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರು ಮತ್ತು ಮಾರಾಟಗಾರರ ಸಂಘ ಹಾಗೂ ಇಂಡಿಯನ್ ಬೇಕರಿ ಫೆಡರೇಶನ್ ಸಹಭಾಗಿತ್ವದಲ್ಲಿ ಸೆ. 10ರಂದು ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಜರಗಿದ “ಬೇಕರ್ಸ್ ಮೀಟ್’ ಆಹಾರೋ ದ್ಯಮಿಗಳ ಸಂಘಟನಾತ್ಮಕ ಕಾರ್ಯ ಕ್ರಮವನ್ನು ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಅಂಕಿತಾಧಿಕಾರಿ ಡಾ| ಪ್ರೇಮಾನಂದ ಕೆ. ಉದ್ಘಾಟಿಸಿದರು.
ಈ ಸಂದರ್ಭ ಅವರು ಮಾತನಾಡಿ, ಬೇಕರಿ ಉದ್ಯಮವನ್ನು ಮತ್ತಷ್ಟು ಪರಿಪಕ್ವಗೊಳಿಸುವ ನಿಟ್ಟಿನಲ್ಲಿ ಸರಕಾರ ಹೊಸ ಕಾನೂನು, ನಿಯಮಗಳನ್ನು ಜಾರಿಗೆ ತರುತ್ತಿದ್ದು ಅದನ್ನು ಪಾಲನೆ ಮಾಡುವುದು ಅನಿವಾರ್ಯವಾಗಿದೆ. ನಮ್ಮ ಆರೋಗ್ಯದ ಜತೆಗೆ, ಗ್ರಾಹಕರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಬೇಕರಿ ಉದ್ಯಮವನ್ನು ಲಾಭದಾಯಕವನ್ನಾಗಿಸಿಕೊಳ್ಳುವಂತೆ ಅವರು ಕರೆ ನೀಡಿದರು.
ಈ ವೇಳೆ ಮಾಹಿತಿ ಕಾರ್ಯಾಗಾರವೂ ನಡೆಯಿತು. ಸಮಾಜ ಸೇವಕ ವಿಶು ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಅಶಕ್ತರಿಗೆ ಧನಸಹಾಯ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಇಂಡಿಯನ್ ಬೇಕರಿ ಫೆಡರೇಶನ್ ಅಧ್ಯಕ್ಷ ಪಿ. ಎನ್. ಶಂಕರನ್, ಕಾರ್ಯದರ್ಶಿ ಕೆ. ಆರ್. ಬಾಲನ್, ಸಂಚಾಲಕ ಬಾಲರಾಜ್ ಕೆ.ಆರ್., ಕೇರಳ ಬೇಕರಿ ಅಸೋಸಿಯೇಶನ್ ಅಧ್ಯಕ್ಷ ಕಿರಣ್, ಕೇಕ್ ತಯಾರಿಕೆಯಲ್ಲಿ ಗಿನ್ನೆಸ್ ದಾಖಲೆಗೈದ ರಂಜಿತ್, ಚಿಕ್ಕಮಗಳೂರು ಟೇಸ್ಟಿ ವರ್ಲ್ಡ್ ಫುಡ್ ಫ್ಯಾಕ್ಟರಿಯ ಆಡಳಿತ ನಿರ್ದೇಶಕ ಎಂ.ಎನ್. ಅರವಿಂದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಘದ ಅಧ್ಯಕ್ಷ ವಿಶ್ವನಾಥ್ ಕುಲಾಲ್, ಉಪಾಧ್ಯಕ್ಷರಾದ ಶ್ರೀಶನ್, ಹೆರಾಲ್ಡ್, ಪ್ರಧಾನ ಕಾರ್ಯದರ್ಶಿ ಸತ್ಯಪ್ರಸಾದ್ ಶೆಣೈ, ಕೋಶಾಧಿಕಾರಿ ಶಶಿಕಾಂತ್ ಜಿ. ನಾಯಕ್, ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣ ವೇದಿಕೆಯ ಅಧ್ಯಕ್ಷ ದಿವಾಕರ್ ಸನಿಲ್ ಉಪಸ್ಥಿತರಿದ್ದರು.
ಸಂಘದ ಗೌರವಾಧ್ಯಕ್ಷ ವಾಲ್ಟರ್ ಸಲ್ಡಾನ ಸ್ವಾಗತಿಸಿದರು. ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸಗಳ ತಯಾರಕರ ಮತ್ತು ಮಾರಾಟಗಾರರ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ್ ಪಿ.ಎಸ್. ಪ್ರಸ್ತಾವನೆಗೈದರು. ನವೀನ್ ಶೆಟ್ಟಿ ವಂದಿಸಿ, ಚಂದ್ರಕಾಂತ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.