kapu ; ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ
Team Udayavani, Apr 17, 2023, 1:51 PM IST
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಸೋಮವಾರ ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಷಿಗಳನ್ನೊಳಗೊಂಡು ಪಾದಯಾತ್ರೆ ನಡೆಸಿ, ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಪತ್ನಿ ವಿಜಯಾ ಶೆಟ್ಟಿ ಅವರ ಸಮೇತರಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಅದಕ್ಕೆ ಪೂರ್ವಭಾವಿಯಾಗಿ ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನ, ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಹಿತವಾಗಿ ವಿವಿಧ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಇದನ್ನೂ ಓದಿ:Coastal Politics; ಹೀಗೂ ಉಂಟು- ಸೋತರೂ ಅದೃಷ್ಟ ಕೈ ಹಿಡಿಯಿತು
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಲಾಲಾಜಿ ಆರ್. ಮೆಂಡನ್, ಉಡುಪಿ ಶಾಸಕ ರಘುಪತಿ ಭಟ್, ಉಡುಪಿ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಮಂಗಳೂರು ಪ್ರಭಾರಿ ಉದಯ ಕುಮಾರ್ ಶೆಟ್ಟಿ, ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಉಸ್ತುವಾರಿ ಸುಲೋಚನಾ ಭಟ್, ಪ್ರಮುಖರಾದ ಶ್ಯಾಮಲಾ ಕುಂದರ್, ದಿನಕರ ಬಾಬು, ಕುತ್ಯಾರು ನವೀನ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ವೀಣಾ ಕೆ. ಶೆಟ್ಟಿ, ಸುರೇಂದ್ರ ಪಣಿಯೂರು, ಅಂಡಾರು ದೇವಿಪ್ರಸಾದ್ ಶೆಟ್ಟಿ, ಪ್ರವೀಣ್ ಗುರ್ಮೆ ಮೊದಲಾದವರು ಪಾದಯಾತ್ರೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಕಾಪು ತಾಲೂಕು ಆಡಳಿತ ಸೌಧಕ್ಕೆ ಬಂದು ಚುನಾವಣಾಧಿಕಾರಿ ಪಿ.ಕೆ. ಬಿನೋಯ್, ಸಹ ಚುನಾವಣಾಧಿಕಾರಿ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರ ಮೂಲಕವಾಗಿ ಗುರ್ಮೆ ಸುರೇಶ್ ಶೆಟ್ಟಿ ಅವರು ನಾಮಪತ್ರ ಸಲ್ಲಿಸಿದರು.
2023 ನೇ ಸಾಲಿನ ಕಾಪು ವಿಧಾನಸಭಾ ಕ್ಷೇತ್ರ ಚುನಾವಣೆಗೆ ಕಾಪುವಿನಲ್ಲಿ ಸಲ್ಲಿಕೆಯಾಗಿರುವ ಪ್ರಥಮ ನಾಮಪತ್ರ ಇದಾಗಿದ್ದು ನಮಗೆ ಗೆಲುವಿನ ಪೂರ್ಣ ವಿಶ್ವಾಸವಿದೆ ಎಂದು ಬಿಜೆಪಿ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.