ಬಿಜೆಪಿ ಸೈಕ್ಲೋಥಾನ್ ಸೈಕಲ್ ರಾಲಿ
Team Udayavani, Apr 15, 2019, 6:30 AM IST
ಉಡುಪಿ: ನರೇಂದ್ರ ಮೋದಿಯ ಅಭಿಮಾನಿಗಳು ದೇಶಾದ್ಯಂತ ನಡೆಸುವ “ಮೈ ಭಿ ಚೌಕೀದಾರ್’ ಆಂದೋಲನದ ಅಂಗವಾಗಿ ಉಡುಪಿಯಲ್ಲಿಯೂ ಶುಕ್ರವಾರ ಚೌಕೀದಾರ್ ಸೈಕ್ಲೋಥಾನ್‌ನ್ನು ಬಿಜೆಪಿ ಯುವ ಮೋರ್ಚಾದ ವತಿಯಿಂದ ಆಯೋಜಿಸಲಾಯಿತು.
ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕೆಂದು ಹಾರೈಸಿ ಬಿಜೆಪಿ ಯುವಮೋರ್ಚಾ ವತಿಯಿಂದ ತಾಲೂಕು ಕಚೇರಿ ಬಳಿಯಿಂದ ಅಜ್ಜರಕಾಡು, ಬ್ರಹ್ಮಗಿರಿ, ಜೋಡುಕಟ್ಟೆ, ಡಯನಾ ಸರ್ಕಲ್‌ದವರೆಗೆ ನಡೆದ ಸೈಕ್ಲೋಥಾನ್ ಸೈಕಲ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಕೆ.ರಘುಪತಿ ಭಟ್ ಅವರು, ರಾಜ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಪ್ರಥಮ ಬಾರಿಗೆ ಈ ಜಾಥಾ ನಡೆಯುತ್ತಿದೆ ಎಂದರು.
ಮೋದಿಯವರ ಬೆಂಬಲಕ್ಕಾಗಿ ಕಳೆದ ವರ್ಷ ಕಾಶ್ಮೀರದಿಂದ ಕನ್ಯಾಕುಮಾರಿ, ಪಶ್ಚಿಮಬಂಗಾಳದವರೆಗೆ 14,195 ಕಿ.ಮೀ. ಓಡಿ ಯಶಸ್ವಿಯಾದ ಆ್ಯತ್ಲೀಟ್ ಮಧ್ಯಪ್ರದೇಶದ ಸಮೀರ್ ಸಿಂಗ್ ಮಾತನಾಡಿ, ನರೇಂದ್ರ ಮೋದಿ ನಮಗೆ ಎಷ್ಟು ಅಗತ್ಯ ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದರು. ದೇಶಾದ್ಯಂತ 50 ನಗರಗಳಲ್ಲಿ ಮೋದಿ ಪರ ಪ್ರಚಾರ ನಡೆಸುತ್ತಿದ್ದೇವೆ. 19ನೆಯ ದಿನ ಇದಾಗಿದೆ ಎಂದು ಸಮೀರ್ ಸಿಂಗ್ ಹೇಳಿದರು.
ನಟಿ ಸ್ನೇಹಾ ಸಿಂಗ್ ಮಾತನಾಡಿ, ಮಾ. 25ಕ್ಕೆ ದಿಲ್ಲಿಯ ಇಂಡಿಯಾಗೇಟ್‌ನಿಂದ ಈ ರ್ಯಾಲಿ ಆರಂಭಗೊಂಡಿದು,ª ಮೇ 13ಕ್ಕೆ ಅಮೃತ್‌ಸರದಲ್ಲಿ ರ್ಯಾಲಿ ಕೊನೆಗೊಳ್ಳಲಿದೆ. ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗುವುದು ನಮ್ಮ ಉದ್ದೇಶ ಎಂದರು.
ಬಿಜೆಪಿ ಮುಖಂಡರಾದ ಯಶ್‌ಪಾಲ್ ಸುವರ್ಣ, ರಾಘವೇಂದ್ರ ಕಿಣಿ, ಮಹೇಶ್ ಠಾಕೂರ್, ಪ್ರತಾಪ್ ಶೆಟ್ಟಿ, ದಿನಕರ ಬಾಬು ಸಹಿತ ಹಲವಾರು ಮಂದಿ ಬಿಜೆಪಿ ಕಾರ್ಯ ಕರ್ತರು ಉಪಸ್ಥಿತರಿದ್ದರು. ಸುಮಾರು 200ರಷ್ಟು ಸೈಕಲ್‌ಗಳಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.