ಜಿಲ್ಲೆಯಲ್ಲಿ ದೇಹದಾನಕ್ಕೆ ಹೆಚ್ಚಿದ ಉತ್ಸುಕತೆ: ನೋಂದಣಿ ಹೆಚ್ಚಳ


Team Udayavani, Jan 30, 2022, 6:35 PM IST

ಜಿಲ್ಲೆಯಲ್ಲಿ ದೇಹದಾನಕ್ಕೆ ಹೆಚ್ಚಿದ ಉತ್ಸುಕತೆ: ನೋಂದಣಿ ಹೆಚ್ಚಳ

ಉಡುಪಿ: ಬಹಳ ವರ್ಷಗಳ ಹಿಂದೆ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಅಧ್ಯಯನಕ್ಕಾಗಿ ಶವಗಳೇ ಸಿಗುತ್ತಿರಲಿಲ್ಲ. ಆದರೆ ಈಗ ಆ ಸಂಪ್ರದಾಯ ಪೂರ್ತಿಯಾಗಿ ಬದಲಾಗಿದೆ. ಜಿಲ್ಲೆಯ ಜನತೆ ಸ್ವಯಂಪ್ರೇರಿತರಾಗಿ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ.

ಜಿಲ್ಲೆಯಲ್ಲಿ 10 ವರ್ಷಗಳ ಹಿಂದಿನ ದಾಖಲೆಗಳನ್ನು ಪರಿಶೀಲಿಸಿದಾಗ ಸುಮಾರು 30ರಿಂದ 35 ಮಂದಿ ಮರಣದ ಅನಂತರ ತಮ್ಮ ದೇಹ ದಾನ ಮಾಡಲು ಬಯಸಿದ್ದರು. ಈಗ ಈ ಸಂಖ್ಯೆ ಮತ್ತಷ್ಟು ಹೆಚ್ಚಳ ಕಂಡಿದೆ.
2020ರಲ್ಲಿ 45 ಹಾಗೂ 2021ರಲ್ಲಿ 42 ಮಂದಿ ಸ್ವಯಂಪ್ರೇರಿತರಾಗಿ ದೇಹದಾನ ಮಾಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ವ್ಯಾಸಾಂಗ ಮಾಡುವ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ.

ನೋಂದಣಿ ಹೇಗೆ?
ದೇಹದಾನ ಮಾಡಲಿಚ್ಛಿಸುವ ವ್ಯಕ್ತಿಯು ಯಾವುದೇ ಸರಕಾರಿ ಅಥವಾ ಕರ್ನಾಟಕ ಸರಕಾರದ ಗೆಜೆಟ್‌ನಲ್ಲಿ ನೋಂದಾ ಯಿಸಲ್ಪಟ್ಟ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ದೇಹದಾನ ಸ್ವೀಕೃತಿಗಾಗಿ ನೋಂದಾಯಿಸಬಹುದು.

ಉಡುಪಿ ಜಿಲ್ಲೆಯಲ್ಲಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಸ್ವಯಂ ಪ್ರೇರಿತ ದೇಹದಾನಕ್ಕೆ ಸರಕಾರದ ಅನುಮತಿ ಪಡೆದಿದೆ. ಅರ್ಜಿ ಫಾರಂ ಅನ್ನು ದ್ವಿಪ್ರತಿಯಲ್ಲಿ ಭರ್ತಿಮಾಡಿ ಒಂದು ಪ್ರತಿಯನ್ನು ತಮ್ಮಲ್ಲಿರಿಸಿ ಮತ್ತೊಂದು ಪ್ರತಿ ಅಂಗರಚನಾ ಶಾಸ್ತ್ರ ವಿಭಾಗಕ್ಕೆ ನೀಡಬೇಕು. ದಾನಿಗಳು ತಮ್ಮ ಹೆಸರು, ವಿಳಾಸ, ಮೊಬೈಲ್‌, ದೂರವಾಣಿ ಸಂಖ್ಯೆ, ಒಂದು ಪಾಸ್‌ಪೋರ್ಟ್‌ ಗಾತ್ರದ ಫೋಟೋವನ್ನು ಲಗತ್ತಿಸಬೇಕು. ಅರ್ಜಿ ಫಾರಂನಲ್ಲಿ ದಾನಿಯ ಕುಟುಂಬದ ಸದಸ್ಯರು, ರಕ್ತಸಂಬಂಧಿಗಳು, ಸ್ನೇಹಿತರು ಅಥವಾ ನೆರೆಹೊರೆಯವರಿಂದ ನಾಲ್ಕು ಜನರ ಸಹಿ ಮಾಡಿಸಬೇಕು. ಅರ್ಜಿಯನ್ನು ಅಂಗರಚನಾ ಶಾಸ್ತ್ರ ವಿಭಾಗಕ್ಕೆ ತಲುಪಿಸ ಬೇಕು. ದೇಹದಾನಿಯ ಹೆಸರನ್ನು ನೋಂದಾಯಿಸಿ ನೋಂದಣಿ ಸಂಖ್ಯೆ ಸ್ವೀಕೃತಿ ಪತ್ರದ ಮೂಲಕ ತಿಳಿಸಲಾಗುತ್ತದೆ. ಇದಕ್ಕೆ ಕಾನೂನು ಪ್ರಮಾಣ ಪತ್ರ, ನೋಟರಿ ದೃಢೀಕರಣ ಅಥವಾ ಯಾವುದೇ ಕಾನೂನು ಅಂಶ ಇರುವುದಿಲ್ಲ.

ನೋಂದಣಿ ಮಾಡಿಸದಿದ್ದರೂ ಅವಕಾಶ
ಮರಣಪೂರ್ವದಲ್ಲಿ ದೇಹದಾನಿಯಾಗುವ ಇಂಗಿತ ಕುಟುಂಬ ಸದಸ್ಯರಿಗೆ ತಿಳಿಸಿದಲ್ಲಿ ಸಂಬಂಧಿಕರು ದೇಹದಾನಿಯ ಮರಣದ ಅನಂತರ ಅಂಗರಚನಾಶಾಸ್ತ್ರ ವಿಭಾಗಕ್ಕೆ ತಿಳಿಸಬಹುದಾಗಿದೆ. ಜೀವಿತಾವಧಿ
ಸಮಯದಲ್ಲಿ ತನ್ನ ಮನಸ್ಸು ಬದಲಾಯಿಸಿದರೆ ನೋಂದಣಿ ರದ್ದುಪಡಿಸಲಾಗುತ್ತದೆ.

ಪ್ರಕ್ರಿಯೆ ಹೇಗೆ?
ಮರಣದ ಅನಂತರ ದೇಹವನ್ನು ಸ್ಥಳಾಂತರಿಸುವ ಮತ್ತು ಸಂಸ್ಕರಣೆ ವಿಧಾನದ ಎಲ್ಲ ಶುಲ್ಕವನ್ನು ಇಲಾಖೆಯೇ ಭರಿಸುತ್ತದೆ. ಇಲಾಖೆಗೆ ತಂದ ದೇಹಗಳನ್ನು ಫಾರ್ಮಲಿನ್‌ ದ್ರಾವಣದಿಂದ ಸಂಸ್ಕರಿಸಿಡಲಾಗುತ್ತದೆ. ಅನಂತರ ದೇಹವನ್ನು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಅಂಗರಚನಾ ಶಾಸ್ತ್ರವನ್ನು ಕಲಿಸಲು ಉಪಯೋಗಿಸಲಾಗುತ್ತದೆ. ಪ್ರತೀ ದೇಹವನ್ನು 10ರಿಂದ 15 ವಿದ್ಯಾರ್ಥಿಗಳ ಕಲಿಕೆಗೆ ಬಳಸಲಾಗುತ್ತದೆ.

ಜಾಗೃತಿ ಕಾರ್ಯಕ್ರಮ
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕಾರ್ಯಾಗಾರದ ಸಮಯದಲ್ಲಿ, ನವೀನ ಹೊಸ ಶಸ್ತ್ರಚಿಕಿತ್ಸಾ ವಿಧಾನಗಳನ್ನು ಕಲಿಸಲು ಶವಗಳನ್ನು ಶಸ್ತ್ರಚಿಕಿತ್ಸೆ ಓದುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಈ ನಡುವೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿರುವುದರಿಂದಲೂ ನೋಂದಣಿ ಸಂಖ್ಯೆ ಹೆಚ್ಚಳವಾಗಿದೆ.
-ಡಾ| ಪ್ರಸನ್ನ ಎಲ್.ಸಿ.,
ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು,
ಅಂಗರಚನಾಶಾಸ್ತ್ರ ವಿಭಾಗ, ಕೆಎಂಸಿ, ಮಣಿಪಾಲ

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.