Shirva ಸಂತ ಮೇರಿ ಪ.ಪೂ.ಕಾಲೇಜಿಗೆ ಬೋರ್ವೆಲ್ ಕೊಡುಗೆ
Team Udayavani, Jun 15, 2023, 11:09 AM IST
ಶಿರ್ವ: ಇಲ್ಲಿನ ಸಂತ ಮೇರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಅವಶ್ಯಕತೆಯನ್ನು ಮನಗಂಡ ದಾನಿ ಸ್ಟಾನಿ ಜೆಸಿಂತಾ ಡಿಸೋಜಾ ಅವರು ಸುಮಾರು 3.2 ಲ. ರೂ. ವೆಚ್ಚದಲ್ಲಿ ನಿರ್ಮಿಸಿ ಕೊಡುಗೆಯಾಗಿ ನೀಡಿದ ಬೋರ್ವೆಲ್ನ ಉದ್ಘಾಟನೆಯು ಜೂ. 15 ರಂದು ಕಾಲೇಜಿನ ಆವರಣದಲ್ಲಿ ನಡೆಯಿತು.
ಲಯಲ್ಸ್ ಜಿಲ್ಲಾ ಗವರ್ನರ್ ಡಾ|ನೇರಿ ಕರ್ನೇಲಿಯೋ ಬೋರ್ವೆಲ್ಗೆ ಚಾಲನೆ ನೀಡಿ ಮಾತನಾಡಿ, ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಜೀವಜಲ ನೀರಿನ ಅವಶ್ಯಕತೆಯನ್ನು ಮನಗಂಡ ಸ್ಟಾನಿ ಜೆಸಿಂತಾ ಡಿಸೋಜಾ ದಂಪತಿ ಸೇವಾ ಸಂಸ್ಥೆಯ ಮೂಲಕ ದಾನವಾಗಿ ನೀಡಿದ್ದು, ಅವರ ಕುಟುಂಬಕ್ಕೆ ದೇವರು ಇನ್ನೂ ಹೆಚ್ಚಿನ ದಾನ ಮಾಡಲು ಅನುಗ್ರಹ ಮಾಡಲಿ ಎಂದು ಹೇಳಿದರು.
ಶಿರ್ವ ಸಂತ ಮೇರಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ|ಫಾ|ಡಾ|ಲೆಸ್ಲಿ ಡಿಸೋಜಾ ಆಶೀರ್ವಚನ ನೀಡಿದರು.ದಾನಿ ಸ್ಟಾನಿ ಜೆಸಿಂತಾ ಡಿಸೋಜಾ ದಂಪತಿಯನ್ನು ಸಮ್ಮಾನಿಸಲಾಯಿತು.
ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ವಿ.ಜಿ.ಶೆಟ್ಟಿ, ಪ್ರಥಮ ಗವರ್ನರ್ ಮಹಮ್ಮದ್ ಹನೀಫ್, ಶಿರ್ವ ಆರೋಗ್ಯ ಮಾತಾ ದೇವಾಲಯದ ಪಾಲನ ಮಂಡಳಿಯ ಅದ್ಯಕ್ಷ ಮೆಲ್ವಿನ್ ಅರಾನ್ಹಾ, ಲಯನ್ಸ್ ಕ್ಲಬ್ ಶಿರ್ವ ಮಂಚಕಲ್ನ ಅಧ್ಯಕ್ಷ ಮೈಕಲ್ ಡಿಸೋಜಾ, ಕೋಶಾಧಿಕಾರಿ ಜೂಲಿಯಾನ್ ರೊಡ್ರಿಗಸ್, ಸಂತ ಮೇರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪ್ರಿಯಾ ನೊರೊನ್ಹಾ, ಡೊನ್ ಬೊಸ್ಕೊ ಹಿ.ಪ್ರ.ಶಾಲೆಯ ಮುಖ್ಯ ಶಿಕ್ಷಕಿ ಪೌಲಿನ್ ಡಿಸೋಜಾ,ಚರ್ಚ್ ಪಾಲನ ಮಂಡಳಿಯ ಸದಸ್ಯರು, ಆರ್ಥಿಕ ಮಂಡಳಿಯ ಸದಸ್ಯರು, ಲಯನ್ಸ್ ಸದಸ್ಯರು, ಹಳೆವಿದ್ಯಾರ್ಥಿ ಸಂಘದ ಸದಸ್ಯರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ.ಪೂ. ಕಾಲೇಜಿನ ಪ್ರಾಂಶುಪಾಲ ಜೈಶಂಕರ್ ಸ್ವಾಗತಿಸಿದರು. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ನೋರ್ಬರ್ಟ್ ಮಚಾದೋ ಕಾರ್ಯಕ್ರಮ ನಿರೂಪಿಸಿ, ಲಯನ್ಸ್ ಕಾರ್ಯದರ್ಶಿ ಚಾರ್ಲ್ಸ್ ಮೋಹನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.