Bramavara: ಮಹಿಳೆಗೆ ಕಿರುಕುಳ; ಆರೋಪಿ ಠಾಣೆಯಲ್ಲಿ ಸಾವು
Team Udayavani, Nov 10, 2024, 3:15 PM IST
ಬ್ರಹ್ಮಾವರ: ಮಹಿಳೆ ಹಾಗೂ ಮಕ್ಕಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತ ಆರೋಪಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮೃತಪಟ್ಟ ಘಟನೆ ನ.10ರ ರವಿವಾರ ಮುಂಜಾನೆ ನಡೆದಿದೆ.
ಕೇರಳ ಕೊಲ್ಲಂ ಮೂಲದ ಬಿಜು ಮೋಹನ್(45) ಮೃತಪಟ್ಟವರು.
ಹಂಗಾರಕಟ್ಟೆಯ ಮೀನು ಫ್ಯಾಕ್ಟರಿಯಲ್ಲಿ ಮೂರು ದಿನಗಳ ಹಿಂದೆಯಷ್ಟೆ ಕೂಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಚೇರ್ಕಾಡಿ ಸೂರೆಬೆಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಶನಿವಾರ ರಾತ್ರಿ 8 ಗಂಟೆ ಹೊತ್ತಿಗೆ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಗೆ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.
ಸಂತ್ರಸ್ತರ ದೂರಿನ ಮೇಲೆ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ಲಾಕ್‌ಅಪ್‌ಗೆ ಹಾಕಿದ್ದರು. ಬೆಳಗಿನ ಜಾವ 3.45ಕ್ಕೆ ಆರೋಪಿ ಅಲ್ಲಿಯೇ ಕುಳಿತು ಪಕ್ಕದ ಗೋಡೆಗೆ ತಲೆ ತಾಗಿಸಿಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದು, ತತ್‌ಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೃತರ ಸಂಬಂಧಿಕರ ದೂರಿನಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಲಾಕ್‌ಅಪ್ ಡೆತ್ ಪ್ರಕರಣವಾದ್ದರಿಂದ ಸಿಐಡಿ ತನಿಖೆಯಾಗುತ್ತದೆ. ಎರಡು ತಂಡಗಳಿಂದ ಮರಣೋತ್ತರ ಪರೀಕ್ಷೆ, ವೀಡಿಯೋ ದಾಖಲು ಸೇರಿದಂತೆ ಕಾನೂನು ಬದ್ಧವಾಗಿ ಕ್ರಮ ತೆಗೆದುಕೊಳ್ಳಲಾಗುವುದು. -ಡಾ| ಅರುಣ್ ಕೆ., ಎಸ್.ಪಿ., ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.