ಮೀನುಗಾರಿಕೆಗೆ ಉತ್ತೇಜನ: ಶೋಭಾ: ಉಡುಪಿಯಲ್ಲಿ ಪಂಜರ ಮೀನು ಕೃಷಿ ಕಾರ್ಯಾಗಾರ
Team Udayavani, Sep 9, 2020, 5:17 AM IST
ಉಡುಪಿ: ಸಂಸದೆ ಶೋಭಾ ಕರಂದ್ಲಾಜೆ ಅವರು ಪಂಜರ ಮೀನು ಕೃಷಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿದರು.
ಉಡುಪಿ: ಕೇಂದ್ರ, ರಾಜ್ಯ ಸರಕಾರಗಳು ಮೀನು ಕೃಷಿಗೆ ಅನೇಕ ಯೋಜನೆಗಳನ್ನು ತಂದಿದ್ದು, ಮೀನುಗಾರರು ಪ್ರಯೋಜನ ಪಡೆದು ಆರ್ಥಿಕವಾಗಿ ಸಶಕ್ತರಾಗಬೇಕು ಎಂದು ಉಡುಪಿ -ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಮೀನುಗಾರಿಕೆ ಇಲಾಖೆಯಿಂದ ಮಂಗಳವಾರ ನಗರದ ಪುರಭವನದಲ್ಲಿ ಆಯೋಜಿ ಸಿದ ಪಂಜರ ಮೀನು ಕೃಷಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧಿಕ ಆದಾಯ
ಕಡಲ ಮೀನುಗಾರಿಕೆ ಜತೆಗೆ ಒಳ ನಾಡಿನ ಮೀನುಗಾರಿಕೆಗೂ ಸರಕಾರ ಉತ್ತೇಜನ ನೀಡುತ್ತಿದೆ. ಈ ಹಿಂದೆ ಪಂಜರ ಕೃಷಿಯಲ್ಲಿ ಸಿಗಡಿ ಮಾತ್ರ ಬೆಳೆಯಲಾಗುತ್ತಿತ್ತು. ಅದರ ಜತೆಗೆ ಇತರ ಮೀನುಗಳನ್ನೂ ಬೆಳೆದು ಹೆಚ್ಚಿನ ಆದಾಯ ಗಳಿಸಬಹುದು ಎಂದರು. ಮೀನುಗಾರಿಕೆ ಜಂಟಿ ನಿರ್ದೇಶಕ ದಿನೇಶ್ ಕುಮಾರ್ ಎಚ್.ಕೆ. ಪ್ರಸ್ತಾವನೆ ಗೈದರು. ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಶಾಸಕರಾದ ರಘುಪತಿ ಭಟ್,
ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ಸಂಧ್ಯಾ ಕಾಮತ್, ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.
ಉತ್ಪನ್ನಗಳಿಗೂ ಬೇಡಿಕೆ ಹೆಚ್ಚಳ: ಸಚಿವ ಕೋಟ
ಮೀನುಗಾರಿಕೆ ಮತ್ತು ಬಂದರು ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೀನುಗಾರಿಕೆ ಇಲಾಖೆಯ ಕಾರ್ಯಕ್ರಮಗಳ ಕೈಪಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿ, ರಾಜ್ಯದಲ್ಲಿ 5.7 ಲಕ್ಷ ಹೆಕ್ಟೇರ್ ಜಲಾಶಯ ಇದ್ದು ಅದರಲ್ಲಿ ಶೇ. 12ರಷ್ಟನ್ನು ಮಾತ್ರ ಮೀನು ಕೃಷಿ ಚಟು ವಟಿಕೆ ಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪೂರ್ತಿ ಪ್ರಮಾಣದ ಮೀನುಗಾರಿಕಾ ಚಟುವಟಿಕೆ ಗಳಿಗೆ ಬಳಸಿ ಕೊಂಡು ರಾಜ್ಯವು ಮೀನುಗಾರಿಕೆ ಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸುವಂತಾಗಬೇಕು ಎಂದರು.
ಮೀನು ಚಿಪ್ಸ್‌ಗೆ ಬೇಡಿಕೆ
ಮೀನುಗಾರಿಕೆಯಲ್ಲಿ ಬದಲಾವಣೆ ತರಬೇಕೆಂಬ ಉದ್ದೇಶದಿಂದ ಮೀನು ಚಿಪ್ಸ್‌ಗಳನ್ನು ಇತರ ಚಿಪ್ಸ್‌ಗಳಂತೆ ದಿನಕ್ಕೆ 2 ಲಕ್ಷಕ್ಕೂ ಹೆಚ್ಚು ಪ್ಯಾಕ್ ಉತ್ಪಾದಿಸಿ ಮಾರುಕಟ್ಟೆಗೆ ಬಿಡಲಾಗುತ್ತಿದ್ದು ಬೇಡಿಕೆಯೂ ಹೆಚ್ಚಳವಾಗಿದೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.