ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು: ಮಗು ಸಾವು, ಇಬ್ಬರಿಗೆ ಗಂಭೀರ ಗಾಯ
Team Udayavani, Aug 1, 2020, 12:12 PM IST
ಉಡುಪಿ: ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಎರಡು ವರ್ಷದ ಮಗು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.
ಕಾರಿನಲ್ಲಿದ್ದ ಉಳಿದ ನಾಲ್ಕು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಪತಿ, ಪತ್ನಿ ಮತ್ತು ನಾಲ್ವರು ಮಕ್ಕಳು ಕಾರಿನಲ್ಲಿ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಅಂಬಲಪಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯ ಡಿವೈಡರ್ ಗೆ ಢಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ.
ಘಟನೆಯಲ್ಲಿ ಮಹಿಳೆಗೆ ಗಂಭೀರ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಐವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಗಾಯಾಳುಗಳ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದೆ
ಸ್ಥಳಕ್ಕೆ ಉಡುಪಿ ನಗರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.