ಬಾಲ್ಯ ವಿವಾಹ; 6 ವರ್ಷಗಳಿಂದ ಶೂನ್ಯ ಪ್ರಕರಣ

ಕಾನೂನಿನ ಬಗ್ಗೆ ಸಾಮಾನ್ಯ ಅರಿವು ; ಸುಶಿಕ್ಷಿತರು ಹೆಚ್ಚಿರುವುದರ ಪರಿಣಾಮ

Team Udayavani, Oct 11, 2020, 5:47 AM IST

ಬಾಲ್ಯ ವಿವಾಹ; 6 ವರ್ಷಗಳಿಂದ ಶೂನ್ಯ ಪ್ರಕರಣ

ಸಾಂದರ್ಭಿಕ ಚಿತ್ರ

ಉಡುಪಿ: ಶೈಕ್ಷಣಿಕವಾಗಿ ಮುಂದುವರಿಯುತ್ತಿರುವ ಉಡುಪಿಯಲ್ಲಿ ಬಾಲ್ಯ ವಿವಾಹದ ಪ್ರಕರಣ ತೀರಾ ಕಡಿಮೆಯಿದ್ದು, ರಾಜ್ಯದಲ್ಲೇ ಕೊನೆಯ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಕಳೆದ 6 ವರ್ಷಗಳಲ್ಲಿ ಬಾಲ್ಯ ವಿವಾಹ ನಡೆದೇ ಇಲ್ಲ. ಆದರೆ 2017ರಲ್ಲಿ ಉಡುಪಿ ತಾಲೂಕಿನ ಪೆರಂಪಳ್ಳಿಯಲ್ಲಿ 17 ವರ್ಷ 11 ತಿಂಗಳು 16 ದಿನದ ಬಾಲಕಿಗೆ ಮದುವೆ ನಡೆಸಲು ಪ್ರಯತ್ನ ನಡೆದಿತ್ತಾ ದರೂ, ಅಂದಿನ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಮಹಿಳಾ ಮತ್ತು ಮಕ್ಕಳ ಇಲಾಖೆ ಡಿ.ಡಿ. ಗ್ರೇಸಿ ಅವರು ಮದುವೆಯನ್ನು ತಡೆಯುವಲ್ಲಿ ಸಫ‌ಲರಾಗಿ ದ್ದರು. ಇದು ತಾಂತ್ರಿಕವಾಗಿ ಬಾಲ್ಯ ವಿವಾಹ ವೆನಿಸಿದರೂ ಉದ್ದೇಶಪೂರ್ವಕ ಬಾಲ್ಯ ವಿವಾಹವಲ್ಲ. 15 ದಿನ ಕಳೆದಿದ್ದರೆ ಈ ಪ್ರಕರಣ ಬಾಲ್ಯವಿವಾಹದ ವ್ಯಾಪ್ತಿಯಿಂದ ಹೊರಗೆ ಉಳಿಯುತ್ತಿತ್ತು. ಬಾಲ್ಯ ವಿವಾಹಕ್ಕೆ ಕಾನೂನಿನಲ್ಲಿರುವ ಶಿಕ್ಷೆ ಬಗ್ಗೆ ಪೋಷಕರಿಗೆ ಮನವರಿಕೆ ಮಾಡುತ್ತಿದ್ದಂತೆ, ಅವರು ತಪ್ಪಿನ ಅರಿವಾಗಿ ಮುಚ್ಚಳಿಕೆ ಬರೆದು ಕೊಟ್ಟಿದ್ದರು.

ಸುಶಿಕ್ಷಿತರ ಜಿಲ್ಲೆ
ಎಷ್ಟೇ ಬಡತನವಿದ್ದರೂ, ಹೆಣ್ಣುಮಕ್ಕಳಿಗೆ ಒತ್ತಾಯಪೂರ್ವಕವಾಗಿ ಕನಿಷ್ಠ 10 ತರಗತಿ, ಓದಲು ಇಚ್ಚಿಸುವ ಮಕ್ಕಳಿಗೆ ಕನಿಷ್ಠವೆಂದರೂ ಪದವಿ ಶಿಕ್ಷಣ ನೀಡುವ ಅಭ್ಯಾಸ ಜಿಲ್ಲೆಯಲ್ಲಿದೆ. ವ್ಯಾಸಂಗ ಮುಗಿಸುವುದ
ರೊಳಗಾಗಿ ಮಕ್ಕಳು ಮದುವೆ ವಯಸ್ಸಿಗೆ ಬರುತ್ತಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಸಾಮಾಜಿಕ ಪಿಡುಗು ಬಾಲ್ಯ ವಿವಾಹಕ್ಕೆ ಬಲಿಯಾಗುವ ಅಪ್ರಾಪ್ತ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆ ಇದೆ.

ಗ್ರಾ.ಪಂ. ಮಟ್ಟದಲ್ಲಿ ಸಭೆ
ಬಾಲ್ಯ ವಿವಾಹವನ್ನು ಪರಿಣಾಮ ಕಾರಿಯಾಗಿ ತಡೆಗಟ್ಟಲು ಗ್ರಾಮ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಗ್ರಾ.ಪಂ.ನಲ್ಲಿರುವ ಸಮಿತಿ 2 ತಿಂಗಳಿಗೊಮ್ಮೆ, ತಾ| ಮತ್ತು
ಜಿಲ್ಲಾ ಮಟ್ಟದ ಸಮಿತಿ 3 ತಿಂಗಳಿಗೊಮ್ಮೆ ಸಭೆ ನಡೆಸಿ, ಇದರ ತಡೆಗೆ ನಿರ್ದಿಷ್ಟ ಕ್ರಮಗಳನ್ನು ಅನುಷ್ಠಾನ ಮಾಡುವ ಕುರಿತು ನಿರಂತರ ಸಭೆ ನಡೆಸುತ್ತಿದೆ.

ಏಕೈಕ ಜಿಲ್ಲೆ!
ಕೋವಿಡ್ ಅವಧಿಯಲ್ಲಿ ರಾಜ್ಯಾದ್ಯಂತ ಬಾಲ್ಯ ವಿವಾಹಕ್ಕೆ ಸಂಬಂಧಿಸಿದ ಘಟನೆಗಳು ಸಂಭವಿಸಿವೆ. ಆದರೆ ಉಡುಪಿ ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಸಲು ಪ್ರಯತ್ನವೂ ನಡೆದಿಲ್ಲ. ರಾಜ್ಯಮಟ್ಟದ ಪಟ್ಟಿಯಲ್ಲಿ ಶೂನ್ಯ ಪ್ರಕರಣ ಹೊಂದಿರುವ ಏಕೈಕ ಜಿಲ್ಲೆಯಾಗಿ ಗುರುತಿಸಿಕೊಂಡಿದೆ.

ಕಾನೂನಿನ ಭೀತಿ
ಪ್ರಸ್ತುತ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಿಗಿಯಾಗಿದ್ದು, ಅರ್ಚಕರು, ತಂದೆ-ತಾಯಿ, ಹುಡುಗನ ತಂದೆ-ತಾಯಿ, ಮದುವೆಗೆ ಬರುವ ಸಂಬಂಧಿಕರು, ಸಹಕಾರ ನೀಡಿದ ಸಂಘಟಕರ ಮೇಲೆಯೂ ಕಾನೂನು ಅನ್ವಯ ಪ್ರಕರಣ ದಾಖಲಿಸಲು ಅವಕಾಶವಿದೆ. ಈ ಬಗ್ಗೆ ಸಾಮಾನ್ಯ ಅರಿವು ಜನರಲ್ಲಿ ಇರುವುದರಿಂದ ಬಾಲ್ಯವಿವಾಹ ನಡೆಯುತ್ತಿಲ್ಲ. ಸ್ಥಳೀಯರಲ್ಲಿ ಜಾಗೃತಿ ಕಳೆದ ಐದಾರು ವರ್ಷಗಳ ಹಿಂದೆ ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ನಡೆಸುವ ಪ್ರಯತ್ನಗಳು ವಿಫ‌ಲವಾಗಿವೆ. ಸ್ಥಳೀಯರ ಜಾಗೃತ ಮನೋಭಾವ ಮತ್ತು ಅಧಿಕಾರಿಗಳು ಮಾಹಿತಿ ದೊರೆತ ತತ್‌ಕ್ಷಣ ಕಾರ್ಯಪ್ರವೃತ್ತರಾಗುತ್ತಿದ್ದಾರೆ. ಇದರಿಂದಾಗಿ ವಿವಾಹ ಪ್ರಯತ್ನಗಳು ಕೂಡ ನಡೆಯುತ್ತಿಲ್ಲ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ 6ರಿಂದ 18 ವರ್ಷದೊಳಗಿನವರ ಪಟ್ಟಿ ತಯಾರಿಸಿ ಮೂರು ತಿಂಗಳಿಗೊಮ್ಮೆ ಪರಿಷ್ಕರಿಸಲಾಗುತ್ತದೆ. ಮಕ್ಕಳ ಹಾಜರಾತಿ ಬಗ್ಗೆಯೂ ಮಾಹಿತಿ ಪಡೆಯಲಾಗುತ್ತಿದೆ.

ಮೂರು ವರ್ಷಗಳಿಂದ ಯಾವುದೂ ಇಲ್ಲ
ಬಾಲ್ಯ ವಿವಾಹಕ್ಕೆ ಏನಾದರೂ ಪ್ರಯತ್ನ ನಡೆದರೆ ಪೋಷಕರಿಗೆ ಬಾಲ್ಯ ವಿವಾಹದಿಂದಾಗುವ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಲಾಗುತ್ತದೆ. ಇದರಿಂದಾಗಿ ಮದುವೆಯ ತನಕ ಬಂದು ನಿಂತ ಪ್ರಕರಣಗಳು ಕಳೆದ ಮೂರು ವರ್ಷಗಳಿಂದ ಯಾವುದೂ ಇಲ್ಲ. ಜಿಲ್ಲೆಯಲ್ಲಿ ಸುಶಿಕ್ಷಿತರ ಪ್ರಮಾಣವೂ ಹೆಚ್ಚಿದೆ.
-ಸದಾನಂದ ನಾಯಕ್‌, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಉಡುಪಿ.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.