CM ಪ್ರತಿಕೃತಿಗೆ ಚಪ್ಪಲಿ ಏಟು; ಶಾಸಕ ಯಶ್ಪಾಲ್ ಸುವರ್ಣ ಸೇರಿ 11 ಮಂದಿ ವಿರುದ್ಧ ಎಫ್ಐಆರ್
Team Udayavani, Sep 9, 2024, 9:30 PM IST
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿಗೆ ಚಪ್ಪಲಿ ಏಟು ಹಾಗೂ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಮಣಿಪಾಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರಾಂಶುಪಾಲರ ಪ್ರಶಸ್ತಿ ವಾಪಸ್ ಪಡೆದ ವಿಚಾರವಾಗಿ ಮಣಿಪಾಲದ ಸಿಂಡಿಕೇಟ್ ಸರ್ಕಲ್ನಲ್ಲಿ ಸೆ.6ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಹೆದ್ದಾರಿ ತಡೆದು ಬಿಜೆಪಿ ಮುಖಂಡರು ಸಿಎಂ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಹಿಂದೂ ವಿರೋಧಿ ಸಿದ್ದರಾಮಯ್ಯ ತೊಲಗಿ ಎಂದು ಘೋಷಣೆ ಕೂಡ ಕೂಗಿದ್ದರು.
ಈ ಸಂದರ್ಭ ನಗರಸಭಾ ಸದಸ್ಯ ಗಿರೀಶ್ ಅಂಚನ್, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದರು. ಈ ಕುರಿತು ಕಾಂಗ್ರೆಸ್ ಮುಖಂಡ ಸೌರಭ್ ಬಲ್ಲಾಳ್ ಶಾಂತಿಭಂಗ ತರುವ ಉದ್ದೇಶದಿಂದ ಕೃತ್ಯ ಎಸೆಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಯಶ್ಪಾಲ್ ಸುವರ್ಣ ಎ5 ಆರೋಪಿಯಾಗಿದ್ದಾರೆ. ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧವೂ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.