ಕಡಿಮೆ ಖರ್ಚಿನಲ್ಲಿ ಪಿಯುಸಿ ಹಾಗೂ ಪದವಿ ವಿದ್ಯಾಭ್ಯಾಸ ಪಡೆಯಲು ಈ ಕಾಲೇಜು ಆಯ್ಕೆ ಮಾಡಿ   

ಪಾಜಕದಲ್ಲಿದೆ ಆನಂದತೀರ್ಥ ಪ.ಪೂ ಕಾಲೇಜು, ಶ್ರೀ ವಿಶ್ವೇಶತೀರ್ಥ ಮಹಾವಿದ್ಯಾಲಯ ಪದವಿ ಕಾಲೇಜು

Team Udayavani, May 20, 2023, 11:47 AM IST

3-college

ಕಟಪಾಡಿ:  ಉಡುಪಿ ಪೇಜಾವರ ಮಠದ ಆಡಳಿತಕ್ಕೊಳಪಟ್ಟ, ಪಾಜಕ ಅನಂದತೀರ್ಥ ಪ.ಪೂ ಕಾಲೇಜಿನ(ವಿಜ್ಞಾನ ಮತ್ತು ವಾಣಿಜ್ಯ ವಿಭಾಗ) ಮುಂದುವರೆದ ಭಾಗವಾಗಿ ಶ್ರೀ ವಿಶ್ವೇಶತೀರ್ಥ ಮಹಾವಿದ್ಯಾಲಯ ಪದವಿ ಕಾಲೇಜು (ಬಿ.ಸಿ.ಎ ಮತ್ತು ಬಿಕಾಂ) ಲೌಕಿಕ ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ಶಿಕ್ಷಣವನ್ನು ಕಲಿಸುವ ಅಗ್ರಮಾನ್ಯ ಶಿಕ್ಷಣ ಸಂಸ್ಥೆಯಾಗಿ ಬೆಳೆಯುವತ್ತ ದಾಪುಗಾಲಿಡುತ್ತಿದೆ.

ಆನಂದತೀರ್ಥ ಟ್ರಸ್ಟ್ ನಡಿಯಲ್ಲಿ ಕೃಷ್ಣೆöಕ್ಯ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಕನಸಿನ ಕೂಸು ಇಂದು ರಾಜ್ಯದ ವಿವಿಧ ಭಾಗದ ವಿದ್ಯಾರ್ಥಿಗಳ ಜ್ಞಾನಾರ್ಜನೆಯ ಕೇಂದ್ರವಾಗಿ ರಾಜ್ಯಾದ್ಯಂತ ಮನೆಮಾತಾಗಿ ಬೆಳೆಯುತ್ತಿರುವುದರ ಹಿಂದೆ ಶ್ರೀಗಳ ಆಶೀರ್ವಾದ, ಮತ್ತು ಈಗಿನ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ನಿರಂತರ ಪ್ರೋತ್ಸಾಹವೇ ಕಾರಣ. ಅತ್ಯಂತ ಕಡಿಮೆ ಕಾಲೇಜು ಶುಲ್ಕ ಪಡೆದು ಉತ್ಕೃಷ್ಟ ಭಾರತೀಯ ಶಿಕ್ಷಣ ನೀಡುವಲ್ಲಿ ಹೆಸರಾಗಿರುವ ಈ ಶಿಕ್ಷಣ ಸಂಸ್ಥೆಯಲ್ಲಿ  ಯಾವುದೇ ಡೊನೇಷನ್, ಮತ್ತು ಡೆವಲ್‌ಮೆಂಟ್ ಶುಲ್ಕ ಪಡೆಯದೇ ಅತ್ಯಂತ ಕಡಿಮೆ ಕಾಲೇಜು ಶುಲ್ಕ ಪಡೆದು ಶಿಕ್ಷಣ ನೀಡುತ್ತಿದ್ದು, ಬಡ ವಿದ್ಯಾರ್ಥಿಗಳಿಗೆ ಆಸರೆಯಾಗಿದೆ.

ನಮ್ಮ ವಿಶೇಷತೆ:

ಕಾಲೇಜಿನ ಪ್ರತೀ ಕ್ಲಾಸ್‌ರೂಂನಲ್ಲಿ 40:1 ರಂತೆ ವಿದ್ಯಾರ್ಥಿ ಹಾಗೂ ಶಿಕ್ಷಕರ ಅನುಪಾತ, ಪ್ರತೀ ಕ್ಲಾಸ್ ರೂಂನಲ್ಲಿ ಸ್ಮಾರ್ಟ್ ಟಿ.ವಿ ಅಳವಡಿಸಲಾಗಿದ್ದು, ಅತ್ಯಾಧುನಿಕ ಶಿಕ್ಷಣ ನೀಡಿ ವಿದ್ಯಾರ್ಥಿಗಳಿಗೆ ಸ್ಪರ್ದಾತ್ಮಕ ಜಗತ್ತಿನ ವೇಗಕ್ಕೆ ತಯಾರಿ ಮಾಡಲಾಗುತ್ತದೆ. ಸುಸಜ್ಜಿತವಾದ ಲ್ಯಾಬ್, ಆಧುನಿಕ ಲೈಬ್ರೆರಿ, ವಿಶಾಲ ಕ್ರೀಡಾಂಗಣ, ಹೀಗೆ ಎಲ್ಲಾ ಆಧುನಿಕ ಸೌಲಭ್ಯವನ್ನು ಒಳಗೊಂಡ ವಿದ್ಯಾಸಂಸ್ಥೆ ಪೇಟೆಯ ಜಂಜಾಟದಿಂದ ದೂರದಲ್ಲಿ ನಿರ್ಮಾಣವಾಗಿರುವುದು ಕಲಿಯುವ ವಿದ್ಯಾರ್ಥಿಗಳಿಗೆ ಉತ್ತೇಜಿಸುವ ವಾತಾವರಣ ನಿರ್ಮಿಸುತ್ತಿದೆ.

ಎಲ್ಲಾ ತರಹದ ಸ್ಪರ್ದಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ಜೊತೆಗೆ ಅವರಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುವ ನಿಟ್ಟಿನಲ್ಲಿ ನಿರಂತರ ಆಧ್ಯಾತ್ಮಿಕ, ಸಾಂಸ್ಕೃತಿಕ ಚಟುವಟಿಯನ್ನು ನಡೆಸಿ, ವಿದ್ಯಾರ್ಥಿಗಳ ಮನೋ ವಿಕಾಸ ಮಾಡುವಲ್ಲಿ ಸಂಸ್ಥೆಯು ನಿರಂತರವಾಗಿ ಶ್ರಮಿಸುತ್ತಿದೆ.

ಉಡುಪಿ ಸುತ್ತಮುತ್ತಲಿನ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಕಾಲೇಜು ವಾಹನದ ವ್ಯವಸ್ಥೆಕೂಡ ಲಭ್ಯವಿದ್ದು, ಅದರ ಸದುಪಯೋಗಕೂಡ ವಿದ್ಯಾರ್ಥಿಗಳು ಪಡೆದುಕ್ಕೊಳ್ಳಬಹುದು. ಶ್ರೀಗಳ ಆಶಯದಂತೆ ಸಂಸ್ಥೆಗೆ ದಾಖಲಾದ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿ ಊಟದ ವ್ಯವಸ್ಥೆ ಉಚಿತವಾಗಿ ನೀಡುತ್ತಿದ್ದು, ಯಾವುದೇ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆದುಕ್ಕೊಳ್ಳುವುದಿಲ್ಲ.

ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ: ದೂರದ ಊರಿನಿಂದ ವಿದ್ಯಾಭ್ಯಾಸಕ್ಕೆ ಬರುವ ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಪ್ರತ್ಯೇಕ ವಸತಿ ನಿಲಯದ ವ್ಯವಸ್ಥೆ ಇದ್ದು, ಪಿಯುಸಿ ಹಾಗೂ  ಡಿಗ್ರಿ ವಿದ್ಯಾರ್ಥಿಗಳಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ ವಸತಿ ವ್ಯವಸ್ಥೆ ನೀಡಲಾಗುತ್ತದೆ. ಬೆಳಗಿನ ಉಪಹಾರ, ಮಧ್ಯಾಹ್ನ ಊಟ, ಸಂಜೆ ಉಪಹಾರ, ಹಾಗೂ ರಾತ್ರಿ ಊಟದ ವ್ಯವಸ್ಥೆ ಇದ್ದು, ಶುಚಿ ಹಾಗೂ ರುಚಿಯಾದ ಊಟವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ಕಾಲೇಜು ಸುತ್ತಮುತ್ತ ಸಿಸಿಟಿವಿ ಕಣ್ಗಾವಲಿನ ವ್ಯವಸ್ಥೆ ಇದ್ದು, ದಿನದ ೨೪ಗಂಟೆಯು ಕೂಡ ಸೆಕ್ಯರಿಟಿ ವ್ಯವಸ್ಥೆ ಇರುತ್ತದೆ.  ಪ್ರತಿಯೊಂದು ಕೊಠಡಿಯಲ್ಲಿ ನಾಲ್ಕು ವಿದ್ಯಾರ್ಥಿಗಳಿಗೆ ಉಳಿದುಕ್ಕೊಳ್ಳಲು ಅವಕಾಶ ಇದ್ದು ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ಉತ್ತೇಜಿಸುವ ವಾತಾವರಣ ಹಾಸ್ಟೆಲ್‌ನಲ್ಲಿ ಇರುತ್ತದೆ.

ಉತ್ತಮ ಫಲಿತಾಂಶ:

2022-23 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ವಿಭಾಗದಲ್ಲಿ ರಾಜ್ಯಕ್ಕೆ 15 ಹಾಗೂ 20ನೇ ರ‍್ಯಾಂಕ್ ಹಾಗೂ ವಾಣಿಜ್ಯ ವಿಭಾಗದಲ್ಲಿ 11 ನೇ ರ‍್ಯಾಂಕ್‌ಗಳಿಸಿದ ಕಾಲೇಜಿನ ವಿದ್ಯಾರ್ಥಿಗಳು ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ. ಅಲ್ಲದೇ 14 ವಿದ್ಯಾರ್ಥಿಗಳು ಶೇ. 90ಕ್ಕಿಂತ ಅಧಿಕ ಹಾಗೂ 21 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಪ್ರಶಾಂತ ಪ್ರದೇಶದಲ್ಲಿ, ಗುರು ಮಧ್ವಾಚಾರ್ಯರು ಜನಿಸಿದ ಪವಿತ್ರ ಜಾಗದಲ್ಲಿ ಕುಂಜಾರು ಶ್ರೀ ದುರ್ಗಾಪರಮೇಶ್ವರಿ ದೇವರು ನೆಲೆನಿಂತ ಪ್ರದೇಶದಲ್ಲಿ ಅತ್ಯಂತ ಸುಸಜ್ಜಿತವಾದ ಕಾಲೇಜು ಸ್ಥಾಪನೆಗೊಂಡಿದ್ದು, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಕೈಗೆಟುಕುವ ದರದಲ್ಲಿ ಕಾಲೇಜು ವಿದ್ಯಾಭ್ಯಾಸ ಮುಗಿಸಲು ಅವಕಾಶ ಇರುತ್ತದೆ.

ಪದವಿ ಪೂರ್ವ, ಹಾಗೂ ಪದವಿ ತರಗತಿಗಳ ದಾಖಲಾತಿ ಈಗಾಗಲೇ ಆರಂಭಗೊಂಡಿದ್ದು, ಹೆಚ್ಚಿನ ಮಾಹಿತಿಗೆ ದೂ. ಸಂ 8951099660, 9964080962 ನ್ನು ಸಂಪರ್ಕಿಸಬಹುದು.

ಟಾಪ್ ನ್ಯೂಸ್

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

Areca

Arecanut Growers: ಎರಡು ವರ್ಷಕ್ಕೊಮ್ಮೆ ಅಡಿಕೆ ಫ‌ಸಲು ಏರಿಳಿತ

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

Pashu-Sanjevani

Mangaluru: ಕರಾವಳಿ ಹೈನುಗಾರರ ಮನ ಗೆದ್ದ ಮನೆ ಬಾಗಿಲಿಗೆ ಪಶು ಸಂಜೀವಿನಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ

ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ

ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ

CM–Suvarna-Soudha

Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

Malpe-Fire

Malpe: ಮೀಟಿಂಗ್‌ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

4

Udupi: ಹಾವು ಕಡಿದು ಕೃಷಿಕ ಸಾವು

7-udupi

Request: ಕರಕುಶಲ ಕರ್ಮಿಗಳಿಗೆ ಸಕಾಲದಲ್ಲಿ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸೂಚಿಸಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

air india

Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!

hemant Soren

Jharkhand CM ಹೇಮಂತ್‌ ಸೊರೇನ್‌ ಬೇಕಲದಲ್ಲಿ

1-kere

Dharmasthala; ನಮ್ಮೂರು ನಮ್ಮ ಕೆರೆಯಡಿ 800ನೇ ಕೆರೆ ಹಸ್ತಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.