ಪರೀಕ್ಷಾ ವರದಿ ಬಳಿಕವೇ ಜಿಲ್ಲೆಗೆ ಬನ್ನಿ
ಬಂದ ಬಳಿಕ ಪಾಸಿಟಿವ್‌ಗೆ ಕ್ರಿಮಿನಲ್ ಮೊಕದ್ದಮೆ
Team Udayavani, Jul 7, 2020, 7:46 AM IST
ಉಡುಪಿ: ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಾರ್ವಜನಿಕರು, ಖಾಸಗಿ ಲ್ಯಾಬ್‌ಗಳಲ್ಲಿ ನೀಡಿರುವ ತಮ್ಮ ಕೋವಿಡ್-19 ಪರೀಕ್ಷಾ ವರದಿ ಬರುವ ಮುನ್ನವೇ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಬಂದ ಅನಂತರ ಅವರ ವರದಿಯು ಪಾಸಿಟಿವ್ ಆಗಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಹೊರರಾಜ್ಯಗಳಿಂದ ಬರುವ ವ್ಯಕ್ತಿಗಳು ತಮ್ಮ ಕೋವಿಡ್ – 19 ಪರೀಕ್ಷಾ ವರದಿ ಬಂದ ಅನಂತರವೇ ಜಿಲ್ಲೆಗೆ ಬರಬೇಕು. ಖಾಸಗಿ ಲ್ಯಾಬ್‌ಗಳೂ ಸಹ ಅಂತಹ ವ್ಯಕ್ತಿಗಳ ವರದಿಯನ್ನು ಸಂಬಂಧಪಟ್ಟ ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದರು.
ಸಾರಿಗೆ ಅಧಿಕಾರಿಗೆ ನೋಟಿಸ್: ಸೂಚನೆ
ಬಸ್‌ಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಬಸ್‌ಗಳ ವಿರುದ್ಧ ಪ್ರಕರಣ ದಾಖಲಿಸದ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ನೋಟಿಸ್ ನೀಡುವಂತೆ ಸೂಚಿಸಿದರು. ಬಸ್‌ಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಪ್ರಯಾಣಿಕರಿದ್ದಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ಕೆಳಗಿಳಿಸಿ ಚಾಲಕ ಮತ್ತು ಕಂಡಕ್ಟರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಹಾಗೂ ಹೆಚ್ಚುವರಿ ಪ್ರಯಾಣಿಕರಿಗೆ ಆರ್‌ಟಿಒ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಲ್ಲ ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.