ಉಡುಪಿ: ಸಂಪರ್ಕ ಮಾಹಿತಿ ಮರೆಮಾಚಿದ ಇಬ್ಬರು ಸೋಂಕಿತರ ವಿರುದ್ಧ ದೂರು
Team Udayavani, Jun 27, 2020, 5:51 PM IST
ಉಡುಪಿ: ಜಿಲ್ಲೆಯ ಕೋವಿಡ್ 19 ಸೋಂಕಿತರಿರ್ವರು ತಮ್ಮ ಸಂಪರ್ಕ ಮಾಹಿತಿ ಮರೆಮಾಚಿದ್ದರಿಂದ ಅವರ ವಿರುದ್ಧ ಆರೋಗ್ಯ ಇಲಾಖೆ ದೂರು ನೀಡಿದೆ.
ಜಿಲ್ಲೆಯ ಕೋವಿಡ್-19 ಸೋಂಕಿತ ರೋಗಿ ಸಂಖ್ಯೆ 10186 ಮತ್ತು 10187 ಅವರು ತಮ್ಮ ಪ್ರಯಾಣದ ಮತ್ತು ಪ್ರಾಥಮಿಕ ಸಂಪರ್ಕದ ಮಾಹಿತಿಯ ಬಗ್ಗೆ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿದ್ದರಿಂದ ಇವರ ವಿರುದ್ಧ ಆರೋಗ್ಯ ಇಲಾಖೆ ಅಧಿಕಾರಿಗಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸೋಂಕಿತರು ತಪ್ಪು ಮಾಹಿತಿ ನೀಡಿದ ಕಾರಣ ಇವರ ಸಂಪರ್ಕಿತರನ್ನು ಶೀಘ್ರವಾಗಿ ಪತ್ತೆಹಚ್ಚಲು ತೊಂದರೆ ಆಗಿದ್ದು, ಈ ರೀತಿ ಮಾಹಿತಿ ಮುಚ್ಚಿಡುವುದು ಅಪರಾಧವಾಗಿದ್ದು, ಕೋವಿಡ್ 19 ವಿರುದ್ದದ ಹೋರಾಟದಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಇಲಾಖೆ ಕೋರಿಕೊಂಡಿದೆ.
ಈ ಇಬ್ಬರು ಸೋಂಕಿತರು ಹಲವು ಕಡೆ ತಿರುಗಾಡಿದ್ದರೂ ತಾವು ಎಲ್ಲಿಯೂ ಹೋಗಿಲ್ಲ ಎಂದು ಮಾಹಿತಿ ನೀಡಿದ್ದರು. ಆದರೆ ಇವರ ಕಾಲ್ ಡಿಟೈಲ್ಸ್ ಪರಿಶೀಲಿಸಿದಾಗ ಅವರ ಪ್ರಯಾಣದ ಹಿನ್ನಲೆ ತಿಳಿದಿತ್ತು. ಈ ಸೋಂಕಿತರ ಸಂಪರ್ಕದಿಂದ ನಾಲ್ವರಿಗೆ ಕೋವಿಡ್ ಸೋಂಕು ದೃಢವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.