ಫಲಿತಾಂಶಕ್ಕೆ ಕ್ಷಣಗಣನೆ: ಅಭ್ಯರ್ಥಿಗಳಲ್ಲಿ ತಲ್ಲಣ; ಮತದಾರರಲ್ಲಿ ಕಾತರ
Team Udayavani, May 22, 2019, 11:00 AM IST
ಮಂಗಳೂರು/ಉಡುಪಿ: ತಿಂಗಳ ಹಿಂದೆ ಮತಯಂತ್ರದೊಳಗೆ ಭದ್ರವಾದ ದ.ಕ., ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಗಳ ಜನಾದೇಶ ಪ್ರಕಟಗೊಳ್ಳಲು ಕೇವಲ ಒಂದು ದಿನವಷ್ಟೇ ಬಾಕಿ ಉಳಿದಿದೆ.
ಚುನಾವಣೆಗೂ ಹಿಂದಿನ ತಿಂಗಳಾನುಗಟ್ಟಲೆಯ ಪಕ್ಷಗಳ ಸೋಲು-ಗೆಲುವಿನ ಲೆಕ್ಕಾ ಚಾರ, ಮತದಾನ ಮುಗಿದ ಬಳಿಕದ ಸುದೀರ್ಘ 35 ದಿನಗಳ ಕಾತರ, ಕುತೂಹಲಕ್ಕೆ ತೆರೆ ಬೀಳಲು ಕ್ಷಣಗಣನೆ ಶುರುವಾಗಿದೆ. ಸುರತ್ಕಲ್‌ನ ಎನ್‌ಐಟಿಕೆ ಮತ್ತು ಉಡುಪಿ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಗೊಳ್ಳಲಿದೆ.
ರಾಜ್ಯದಲ್ಲಿ ಪ್ರಥಮ ಹಂತದಲ್ಲಿ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 17 ಕ್ಷೇತ್ರಗಳಿಗೆ ಎ.18ರಂದು ಚುನಾವಣೆ ನಡೆದಿತ್ತು. ದಕ್ಷಿಣಕನ್ನಡ ಮತ್ತು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದು 35 ದಿನಗಳ ಬಳಿಕ ಫಲಿತಾಂಶ ಘೋಷಣೆಯಾಗಲಿದ್ದು, ಚುನಾವಣಾ ಇತಿಹಾಸದಲ್ಲಿ ಮತದಾನಕ್ಕೂ ಫಲಿತಾಂಶಕ್ಕೂ ಇಷ್ಟು ದೀರ್ಘ ಅಂತರ ಇದೇ ಮೊದಲ ಬಾರಿ. 2014ರ ಲೋಕಸಭಾ ಚುನಾವಣೆಯ ಸಂದರ್ಭ ಎ.16ರಂದು ಮತದಾನ ನಡೆದು, ಮೇ 16ರಂದು ಮತ ಎಣಿಕೆ ನಡೆದಿತ್ತು.
13.43 ಲಕ್ಷ ಮತದಾರರ ತೀರ್ಪು
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ ಬಾರಿ 13,43,378 ಮಂದಿ ಮತ ಚಲಾಯಿಸಿದ್ದಾರೆ. ಕ್ಷೇತ್ರದಲ್ಲಿ ಈ ಬಾರಿ 17,24,460 ಮತದಾರರಿದ್ದು, ಶೇ.77.90 ಮತದಾನವಾಗಿತ್ತು. 2014ರ ಲೋಕಸಭಾ ಚುನಾವಣೆಯಲ್ಲಿ ಶೇ.77.19 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಒಟ್ಟು ಶೇ.77.63 ಮತದಾನವಾಗಿತ್ತು. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 15,13,940 ಮಂದಿ ಮತದಾರರಿದ್ದು, ಶೇ. 75.8 ಮತದಾನವಾಗಿತ್ತು. 2014ರಲ್ಲಿ ಶೇ. 74.46 ಮತದಾನವಾಗಿತ್ತು.
ದ.ಕ.: 13 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ದ.ಕ.ದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ, ಬಿಎಸ್‌ಪಿ, ಉತ್ತಮ ಪ್ರಜಾಕೀಯ ಪಾರ್ಟಿ, ಹಿಂದೂಸ್ತಾನ್ ಜನತಾ ಪಾರ್ಟಿ ಮತ್ತು 7 ಮಂದಿ ಪಕ್ಷೇತರರು ಸೇರಿದಂತೆ ಒಟ್ಟು 13 ಮಂದಿ ಸ್ಪರ್ಧಾಕಣದಲ್ಲಿದ್ದಾರೆ. ಇವರಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲು ಮತ್ತು ಕಾಂಗ್ರೆಸ್‌ನ ಮಿಥುನ್ ಎಂ. ರೈ ನಡುವೆ ನಿಕಟ ಹಣಾಹಣಿ ನಿರೀಕ್ಷಿತ.
12 ಅಭ್ಯರ್ಥಿಗಳ ಭವಿಷ್ಯ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನ ಪ್ರಮೋದ್ ಮಧ್ವರಾಜ್, ಬಿಜೆಪಿಯ ಶೋಭಾ ಕರಂದ್ಲಾಜೆ ಅವರ ನಡುವೆ ನಿಕಟ ಸ್ಪರ್ಧೆ ನಿರೀಕ್ಷಿಸಲಾಗಿದೆ. ಉಳಿದಂತೆ ಶಿವಸೇನೆ, ಪ್ರೌಟಿಸ್ಟ್ ಸರ್ವ ಸಮಾಜ, ಸಿಪಿಐ (ಎಂ.ಎಲ್.) ರೆಡ್‌ಸ್ಟಾರ್, ಉತ್ತಮ ಪ್ರಜಾಕೀಯ ಪಾರ್ಟಿ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ, ಪಕ್ಷೇತರರು ಸೇರಿದಂತೆ ಒಟ್ಟು 12 ಮಂದಿ ಕಣದಲ್ಲಿದ್ದಾರೆ. ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಪಕ್ಷೇತರನಾಗಿ ಸ್ಪರ್ಧಿಸಿದ್ದರು.
ಸಮೀಕ್ಷೆಗಳ ಫಲಿತಾಂಶದಿಂದ ಉತ್ಸಾಹ ಗೊಂಡಿರುವ ಬಿಜೆಪಿ ಪಾಳಯದಲ್ಲಿ ಗೆಲುವಿನ ಲೆಕ್ಕಾಚಾರ ಗರಿಗೆದರಿದೆ. ಕಾಂಗ್ರೆಸ್ ಮುಖಂಡ ರಾಗಿ ಜೆಡಿಎಸ್‌ನಿಂದ ಸ್ಪರ್ಧಿಸಿರುವ “ಮೈತ್ರಿ ಅಭ್ಯರ್ಥಿ’ ಪ್ರಮೋದ್ ಮಧ್ವರಾಜ್ ಅವರ ಗೆಲುವಿನ ಕುರಿತಾದ ಚರ್ಚೆಗಳು ಕೂಡ ನಡೆಯುತ್ತಿವೆ.
ಗೆಲುವಿನ ಲೆಕ್ಕಾಚಾರ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಪ್ರಮಾಣದಲ್ಲಿ ಆಗಿರುವ ಹೆಚ್ಚಳ ಮತ್ತು ಕ್ಷೇತ್ರದಲ್ಲಿ ವ್ಯಕ್ತವಾಗಿರುವ ರಾಜಕೀಯ ಟ್ರೆಂಡ್‌ಗಳನ್ನು ಮೂಲವಾಗಿರಿಸಿಕೊಂಡು ಗೆಲುವಿನ ಸಾಧ್ಯತೆಗಳ ಬಗ್ಗೆ ಲೆಕ್ಕಾಚಾರ ನಡೆಯುತ್ತ ಬಂದಿದೆ. ಜತೆಗೆ ಗರಿಷ್ಠ ಮತದಾನವಾದರೆ ಯಾವ ರಾಜಕೀಯ ಪಕ್ಷಕ್ಕೆ ಹೆಚ್ಚು ಅನುಕೂಲ ಎಂಬ ಬಗ್ಗೆ ಈ ಹಿಂದಿನ ಅಂಕಿಅಂಶಗಳನ್ನು ಆಧರಿಸಿಕೊಂಡು ವಿವಿಧ ಕೋನಗಳಿಂದ ವಿಶ್ಲೇಷಣೆಗಳು ನಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.