ಸಂಕಷ್ಟದಲ್ಲಿ ದೇಶದ ಗೋಶಾಲೆಗಳು; 200 ಕೋ.ರೂ. ಪ್ಯಾಕೇಜ್ಗೆ ಪೇಜಾವರ ಶ್ರೀಗಳ ಆಗ್ರಹ
Team Udayavani, Aug 18, 2020, 2:53 AM IST
ಉಡುಪಿ: ಕೋವಿಡ್ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು ತುರ್ತಾಗಿ ಕನಿಷ್ಠ 200 ಕೋಟಿ ರೂ. ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ಗೆ ಪತ್ರ ಬರೆದಿದ್ದಾರೆ.
ಕಳೆದ ಆರೇಳು ತಿಂಗಳುಗಳಿಂದ ಕೊರೊನಾದಿಂದಾಗಿ ವಿವಿಧ ಕ್ಷೇತ್ರ ಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳೂ ತೊಂದರೆಗೊಳಗಾ ಗಿವೆ. ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕ. ನೀಲಾವರ, ಕೊಡವೂರು, ಹೆಬ್ರಿಯಲ್ಲಿ ನಾವು ನಡೆಸುತ್ತಿರುವ ಗೋಶಾಲೆಗಳಿಗೇ ಮಾಸಿಕ ಅಂದಾಜು 35 ಲಕ್ಷ ರೂ. ನಿರ್ವಹಣಾ ವೆಚ್ಚ ಇದೆ. ಅದೇ ರೀತಿ ಯಲ್ಲಿ ಇದಕ್ಕೂ ದೊಡ್ಡ ಅಥವಾ ಸಣ್ಣ ಮಟ್ಟದ ಗೋಶಾಲೆಗಳನ್ನು ಅನೇಕ ಮಠ ದೇವಸ್ಥಾನ ಹಾಗೂ ಮಹನೀಯರು ಯಾವುದೇ ಪ್ರತಿ ಫಲಾಪೇಕ್ಷೆಯಿಲ್ಲದೆ ಕರ್ತವ್ಯದ ದೃಷ್ಟಿ
ಯಿಂದ ನಡೆಸುತ್ತಾ ಲಕ್ಷಾಂತರ ಗೋವುಗಳನ್ನು ಪೋಷಿಸುತ್ತಿದ್ದಾರೆ.
ಧರ್ಮಾಭಿಮಾನಿಗಳ ಸಹಕಾರದಿಂದ ಇದು ಸಾಧ್ಯವಾಗುತ್ತಿತ್ತು. ಆದರೆ ಪ್ರಸ್ತುತ ಭಕ್ತರ ದೇಣಿಗೆಯೂ ಅಷ್ಟಾಗಿ ಬರುತ್ತಿಲ್ಲ. ವಿಪರೀತ ಮಳೆಯ ಕಾರಣ ಮೇವಿನ ಸಂಗ್ರಹಣೆಯೂ ದುಸ್ತರವಾಗುತ್ತಿದೆ. ಬೇರೆ ಬೇರೆ ಕ್ಷೇತ್ರ ಗಳಿಗೆ ಸರಕಾರವು ಆರ್ಥಿಕ ಪ್ಯಾಕೇಜ್ ಘೋಷಿಸಿದಂತೆ ಗೋಶಾಲೆಗಳಿಗೂ ಕನಿಷ್ಠ 200 ಕೋ.ರೂ. ಆದರೂ ತುರ್ತಾಗಿ ನೀಡಬೇಕು ಎಂದು ಶ್ರೀಗಳು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.