ಕೋವಿಡ್ ಚಿಕಿತ್ಸೆಗೆ ಶೇ. 50 ಬೆಡ್‌ಮೀಸಲು ಕಡ್ಡಾಯ: ಜಿಲ್ಲಾಧಿಕಾರಿ
ಉಡುಪಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆ
Team Udayavani, Jul 29, 2020, 9:57 AM IST
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿವೆ. ಸೋಂಕಿತರ ಚಿಕಿತ್ಸೆಗಾಗಿ ಈಗಾಗಲೇ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿಸಿಕೊಂಡಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ತಮ್ಮ ಆಸ್ಪತ್ರೆಯಲ್ಲಿ ಶೇ. 50 ಬೆಡ್‌ಗಳನ್ನು ಕಡ್ಡಾಯ ವಾಗಿ ಮೀಸಲಿಡುವಂತೆ ಸೂಚಿಸಲಾಗಿದೆ. ಮೀಸಲಿಡದ ಆಸ್ಪತ್ರೆಗಳ ಕೆಪಿಎಂಇ ನೋಂದಣಿಯನ್ನು ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ.
ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿಸಿಕೊಂಡಿರುವ 20 ಆಸ್ಪತ್ರೆಗಳು ಮಾತ್ರವಲ್ಲದೆ ಇತರ ಖಾಸಗಿ ಆಸ್ಪತ್ರೆಗಳೂ ಸಹ ಎಬಿಆರ್‌ಕೆ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ಸೂಚಿಸಿದರು. ಯಾವುದೇ ಸಂದರ್ಭದಲ್ಲೂ ರೋಗಿಗೆ ಬೆಡ್ ಇಲ್ಲ ಎಂದು
ನಿರಾಕರಿಸುವಂತಿಲ್ಲ; ನಿರಾಕರಿಸಿದಲ್ಲಿ ನೋಂದಣಿ ರದ್ದುಪಡಿಸುವುದರೊಂದಿಗೆ ಎಪಿಡಮಿಕ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದರು.
ಮಾಹಿತಿ ನೀಡಿ
ಕೋವಿಡ್ ಚಿಕಿತ್ಸೆಗೆ ನೋಂದಾಯಿಸಿರುವ ಆಸ್ಪತ್ರೆಗಳು ಕೋವಿಡ್-19 ಚಿಕಿತ್ಸೆ ಮಾತ್ರವಲ್ಲದೇ ಮಹಿಳೆ ಮತ್ತು ಮಕ್ಕಳ ಚಿಕಿತ್ಸೆಗೆ ಸಹ ಅಗತ್ಯ ವ್ಯವಸ್ಥೆಯನ್ನು ಮಾಡಿಕೊಳ್ಳ ಬೇಕು. ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಎಲ್ಲ ಸೌಲಭ್ಯ ಗಳ ಕುರಿತು ಮಾಹಿತಿಯನ್ನು ಒದಗಿಸಬೇಕು ಎಂದರು. ಪ್ರತಿದಿನ 700 ಪರೀಕ್ಷೆ ಜಿಲ್ಲೆಯಲ್ಲಿ ಕಳೆದ ವಾರದಿಂದ ಪ್ರತಿದಿನ ಸರಾಸರಿ 700 ಜನರ ಪರೀಕ್ಷೆ ನಡೆಸುತ್ತಿದೆ. ಪಾಸಿಟಿವ್ ಪ್ರಮಾಣ ಅಧಿಕವಾಗುತ್ತಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕ, ಐಎಲ್‌ಐ ಮತ್ತು ಸಾರಿಯಲ್ಲಿ ಹೆಚ್ಚು ಪಾಸಿಟಿವ್ ಕಂಡು ಬರುತ್ತಿದೆ ಎಂದು ಜಿಲ್ಲಾ ಕೋವಿಡ್-19 ನೋಡಲ್ ಅಧಿಕಾರಿ ಪ್ರಶಾಂತ್ ಭಟ್ ತಿಳಿಸಿದರು.
ಜಿ.ಪಂ. ಸಿಇಒ ಪ್ರೀತಿ ಗೆಹಲೋಟ್ ಅವರು, ಜಿಲ್ಲೆಯ ಆಸ್ಪತ್ರೆಗಳಲ್ಲಿರುವ ಬೆಡ್‌ಗಳ ಸಂಖ್ಯೆ, ಬಳಸಿರುವ ಸಂಖ್ಯೆ, ಖಾಲಿ ಇರುವ ಸಂಖ್ಯೆ, ಮೀಸಲಿಟ್ಟಿರುವ ಸಂಖ್ಯೆ ಹಾಗೂ ವೆಂಟಿಲೇಟರ್, ಐಸಿಯುಗಳ ಸಂಖ್ಯೆ ನೀಡುವಂತೆ ತಿಳಿಸಿ ದರು. ಎಡಿಸಿ ಸದಾಶಿವ ಪ್ರಭು, ಡಿಎಚ್‌ಒ ಡಾ| ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ| ಮಧುಸೂದನ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಮುನ್ನೆಚ್ಚರಿಕೆ ಅಗತ್ಯ
ಜಿಲ್ಲೆಯಲ್ಲಿ ಕೋವಿಡ್ -19ರಿಂದ ಹೆಚ್ಚಿನ ಮರಣ ಸಂಭವಿಸುವುದನ್ನು ತಡೆಯಲು ಜಿಲ್ಲಾಡಳಿತ ಅವಿರತ ಪ್ರಯತ್ನ ಮಾಡುತ್ತಿದೆ. ಜಿಲ್ಲೆಯ ಮರಣ ಪ್ರಮಾಣ ರಾಜ್ಯದಲ್ಲೇ ಅತ್ಯಂತ ಕನಿಷ್ಠವಾಗಿದೆ. ಹೋಂ ಕ್ವಾರಂಟೈನ್ ಉಲ್ಲಂಘನೆ ತಡೆಯುವಲ್ಲಿ ಸಹ ರಾಜ್ಯ ಪ್ರಥಮ ಸ್ಥಾನದಲ್ಲಿದ್ದು, ಕ್ವಾರಂಟೈನ್ ಉಲ್ಲಂ ಸಿದ 69 ಜನರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಿಸಲಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಯಲ್ಲಿರುವವರಲ್ಲಿ ಹೆಚ್ಚು ಸೋಂಕು ಕಂಡುಬರುತ್ತಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.