ಕಾರ್ಕಳದಲ್ಲಿ 100 ಬೆಡ್ ಸಿದ್ಧಗೊಳಿಸಲು ಡಿಸಿ ಸೂಚನೆ
Team Udayavani, May 22, 2020, 5:57 AM IST
ಕಾರ್ಕಳ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗು ತ್ತಿರುವ ಕಾರಣ ತಾಲೂಕು ಕೇಂದ್ರ ಗಳಲ್ಲೇ ಚಿಕಿತ್ಸೆ ನೀಡಬೇಕಾಗಿದೆ. ಪ್ರತಿ ತಾಲೂಕಿನಲ್ಲೂ 100 ಬೆಡ್‌ಗಳನ್ನು ಕೋವಿಡ್ ರೋಗಿಗಳಿಗಾಗಿ ಸಿದ್ಧಗೊಳಿಸ ಬೇಕೆಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಮೇ 21ರಂದು ಕಾರ್ಕಳ ತಾ.ಪಂ. ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ವೈರಸ್ ತಗುಲಿ ಒಂದೇ ಒಂದು ಜೀವ ಹಾನಿಯಾಗಬಾರದು. ಈ ನಿಟ್ಟಿನಲ್ಲಿ ಮುಂಜಾಗ್ರತೆಯಾಗಿ ಸಕಲ ವ್ಯವಸ್ಥೆ ಮಾಡಬೇಕಾಗಿದೆ. ಇದಕ್ಕಾಗಿ ಖಾಸಗಿ ವೈದ್ಯರ, ದಾದಿಯರ, “ಡಿ’ ಗ್ರೂಪ್ ನೌಕರರ ಸಹಕಾರ ಪಡೆಯಬೇಕು. ಈ ನಿಟ್ಟಿನಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗುವಂತೆ ತಾಲೂಕು ಆರೋಗ್ಯಾ ಧಿಕಾರಿ ಡಾ| ಕೃಷ್ಣಾನಂದ ಅವರಿಗೆ ತಿಳಿಸಿದ ಡಿಸಿ ಅದಕ್ಕಾಗಿ ವ್ಯಯವಾಗುವ ಖರ್ಚನ್ನು ಜಿಲ್ಲಾಡಳಿತ ಭರಿಸಲಿದೆ ಎಂದರು.
ಕೋವಿಡ್ ರೋಗಿಗಳಿಗೆ ಪೌಷ್ಠಿಕಯುಕ್ತ ಆಹಾರ ಒದಗಿಸಿ ಕೊಡುವಲ್ಲಿ ಯಾವೊಂದೂ ಲೋಪವಾಗಬಾರದು ಎಂದು ಡಿಸಿ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಕಳ ಮಾದರಿ
ಕೋವಿಡ್ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಕಳ ತಾಲೂಕು ಮಾದರಿ ಎಂಬ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಡಿಸಿಯವರು, ಶಾಸಕರ ನೇತೃತ್ವದಲ್ಲಿ ಇಲ್ಲಿನ ಅಧಿಕಾರಿಗಳು, ಸಿಬಂದಿ, ಸ್ವಯಂ ಸೇವಕರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು. ಬಳಿಕ ಡಿಸಿಯವರು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಡಾ| ಪ್ರಕಾಶ್ ಕೆಲವೊಂದು ಸಲಹೆ ನೀಡಿದರು. ತಹಶೀಲ್ದಾರ್ ಪುರಂದರ ಹೆಗ್ಡೆ, ಮಹೇಶ್ಚಂದ್ರ, ಡಿವೈಎಸ್‌ಪಿ ಭರತ್ ರೆಡ್ಡಿ, ಬಿಇಒ ಶಶಿಧರ್ ಜಿ.ಎಸ್. ಉಪಸ್ಥಿತರಿದ್ದರು. ತಾ.ಪಂ. ಇಒ ಡಾ| ಮೇ| ಹರ್ಷ ಕೆ.ಬಿ. ಸ್ವಾಗತಿಸಿ, ಸಭೆ ನಿರ್ವಹಿಸಿದರು.
ಸವಾಲಾಗಿ ಸ್ವೀಕರಿಸಿ
ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಕೋವಿಡ್ ವೈರಸ್ ಕುರಿತು ಯಾರೊಬ್ಬರೂ ಧೈರ್ಯಗೆಡಬಾರದು. ನಾವು ಇದನ್ನು ಸವಾಲಾಗಿ ಸ್ವೀಕರಿಸಿ ಮುಂದುವರಿಯಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.