“ಎರಡನೇ ಹಂತದ ಚುನಾವಣೆಗೆ ಸಕಲ ಸಿದ್ಧತೆ ‘
ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಡಿಸಿ ಭೇಟಿ
Team Udayavani, Dec 25, 2020, 9:02 PM IST
ತೆಕ್ಕಟ್ಟೆ; ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಕುಟುಂಬ ಸಮೇತರಾಗಿ ಡಿ.25 ರಂದು ಭೇಟಿ ನೀಡಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರು ಮಾತ ನಾಡಿ, ಉಡುಪಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಗ್ರಾಮ ಪಂಚಾಯತ್‌ಗಳಿಗೆ ಎರಡನೆಯ ಹಂತದ ಚುನಾವಣೆ ಡಿ.27ರಂದು ನಡೆಯುವ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಶನಿವಾರ ಬೆಳಗ್ಗೆ ಮಸ್ಟರಿಂಗ್ ಆದ ಬಳಿಕ ಆಯಾ ಮತಗಟ್ಟೆಗಳಿಗೆ ಕಳುಹಿಸುವ ಕಾರ್ಯ ನಡೆಯಲಿದೆ. ಈ ಹಿಂದೆ ನಡೆದ ಚುನಾವಣೆಗಳಲ್ಲಿ ಜಿಲ್ಲೆಯಲ್ಲಿ ಶೇ. 74ರಷ್ಟು ಮತದಾನವಾಗಿದೆ. ಡಿ. 27
ರಂದು ಬೆಳಗ್ಗೆ ಗಂಟೆ 7ರಿಂದ ಸಂಜೆ ಗಂಟೆ 5ರ ತನಕ ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಸಾಕಷ್ಟು ಮತದಾರರು ಭಾಗವಹಿಸಬೇಕು ಎನ್ನುವ ನಿಟ್ಟಿನಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಗಿದೆ ಎಂದು ಹೇಳಿದರು.
ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಹಿರಿಯ ಧರ್ಮದರ್ಶಿ ಕೆ. ಸೂರ್ಯ ನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಹಾಗೂ ಆನುವಂಶಿಕ ಪರ್ಯಾಯ ಅರ್ಚಕ ರಾಗಿ ಕೆ.ಗಣೇಶ್ ಉಪಾಧ್ಯಾಯ ಮ್ಯಾನೇಜರ್ ನಟೇಶ್ ಕಾರಂತ್ ತೆಕ್ಕಟ್ಟೆ, ಅರ್ಚಕ ಮಂಡಳಿ ಹಾಗೂ ಸಿಬಂದಿ ಇದ್ದರು.
ಚುನಾವಣೆಯಿಂದಾಗಿ ಕೊರೊನಾ ವೈರಸ್ ಹರಡುತ್ತದೆ ಎನ್ನುವ ಆತಂಕ ಬೇಡ !
ಮೊದಲ ಹಂತದ ಚುನಾವಣೆ ನಡೆದ ಕಡೆಗಳಲ್ಲಿ ಕೊರೊನಾ ಕುರಿತು ಜನರಲ್ಲಿ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಈಗಾಗಲೇ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲರಿಗೂ ಕೂಡಾ ಮಾಸ್ಕ್, ಸ್ಯಾನಿಟೈಸರ್, ಫೇಸ್‌ಶೀಲ್ಡ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಅತ್ಯಂತ ಅಚ್ಚುಕಟ್ಟಿನಿಂದ ಚುನಾವಣೆ ನಡೆಸಲಾಗಿದೆ. ಸಾರ್ವಜನಿಕರಲ್ಲಿ ಈ ಚುನಾವಣೆ ಯಿಂದಾಗಿ ಕೊರೊನಾ ವೈರಸ್ ಹರಡುತ್ತದೆ ಎನ್ನುವ ಆತಂಕ ಬೇಡ; ಬದಲಾಗಿ ಮತದಾನಕ್ಕೆ ಬರುವ ಸಂದರ್ಭ ಕಡ್ಡಾಯ ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗಿದೆ. ಒಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತದಾನಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.