ಮಣ್ಣಪಳ್ಳ ಕೆರೆ ಸೇರುತ್ತಿದೆ ಕೊಳಚೆ ನೀರು

Team Udayavani, Oct 31, 2022, 8:39 AM IST

1

ಮಣಿಪಾಲ: ನಗರ ವ್ಯಾಪ್ತಿ ಜನರಿಗೆ ಸುಂದರ ವಿಹಾರ ತಾಣವಾಗಿರುವ ಮಣ್ಣಪಳ್ಳ ಕೆರೆ ಪರಿಸರ ಹದಗೆಡಿಸುತ್ತಿದೆ.

ಈ ಪ್ರದೇಶ ತ್ಯಾಜ್ಯ ಕೊಂಪೆಯಾಗುತ್ತಿರುವ ಬಗ್ಗೆ ಉದಯವಾಣಿ ಈಗಾಗಲೇ ವಿಸ್ತೃತ ಸರಣಿ ವರದಿ ಪ್ರಕಟಿಸಿತ್ತು. ಮಳೆಗಾಲ ಮುಗಿಯುತ್ತಿದ್ದು ಮಣಿಪಾಲ ಪರಿಸರದ ಕಟ್ಟಡ, ಮನೆಗಳ ಕೊಳಚೆ ನೀರು ಮಣ್ಣಪಳ್ಳ ಒಡಲು ಸೇರುತ್ತಿರುವುದು ಆತಂಕಕಾರಿಯಾಗಿದೆ. ಪ್ರಾಕೃತಿಕವಾಗಿ ನಿರ್ಮಾಣಗೊಂಡ ದೊಡ್ಡ ಕೆರೆಯನ್ನು ಈ ಹಿಂದೆ ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಪಡಿಸಿತ್ತು. ಕೆರೆಯಲ್ಲಿ ವರ್ಷಪೂರ್ತಿ ಇರುವ ನೀರು ಕಣ್ಮನ ಸೆಳೆಯುತ್ತದೆ. ಮಣಿಪಾಲ, ಉಡುಪಿ ಸುತ್ತಮುತ್ತಲಿನ ಜನಕ್ಕೆ ಇಲ್ಲಿನ ವಾಯು ವಿಹಾರ ಅಚ್ಚುಮೆಚ್ಚು.

ತ್ಯಾಜ್ಯ ರಾಶಿಗಳು ಅಲ್ಲಲ್ಲಿ ಹರಡಿಕೊಂಡಿರುವುದು, ಪ್ಲಾಸ್ಟಿಕ್‌ ಕವರ್‌ಗಳು ಎಲ್ಲೆಂದರಲ್ಲಿ ಬೀಸಾಡಿರುವುದು. ಪರಿಸರದ ಸುತ್ತಮುತ್ತ ಮಧ್ಯರಾತ್ರಿ ಮದ್ಯದ “ಪಾರ್ಟಿ’ಯೂ ನಡೆಯುತ್ತಿದ್ದು, ಮದ್ಯ, ಬಿಯರ್‌ ಬಾಟಲಿಗಳು ಅಲ್ಲಲ್ಲಿ ಬಿದ್ದಿವೆ. ಮಣ್ಣಪಳ್ಳಕ್ಕೆ ಸಂಪರ್ಕಿಸುವ ಮಳೆ ನೀರು ಕಾಲುವೆಯಲ್ಲಿ ಅಪಾರ ಪ್ರಮಾಣದಲ್ಲಿ ತ್ಯಾಜ್ಯ ನೀರು ಕೆರೆಗೆ ಸೇರುತ್ತಿರುವುದು ಕಳವಳಕಾರಿಯಾಗಿದೆ. ಇದರ ಜತೆಗೆ ವಿವಿಧ ತ್ಯಾಜ್ಯ, ಮದ್ಯದ ಬಾಟಲಿ, ಚಾಕೊಲೆಟ್‌, ಬಿಸ್ಕೆಟ್‌, ಚಾಟ್ಸ್‌ ಮಸಾಲ ಪ್ಯಾಕ್ಸ್‌ ತಿಂಡಿಗಳ ರ್ಯಾಪರ್‌ಗಳು ಸೇರಿಕೊಂಡು ಮೆಲ್ಲನೇ ಕೆರೆಯ ಒಡಲನ್ನು ಸೇರುತ್ತಿದೆ.

ಜಲಚರಗಳಿಗೆ ಮಾರಕ:

ನಗರದ ಈ ತ್ಯಾಜ್ಯ ನೀರಿನಿಂದ ಕೆರೆಯ ಆರೋಗ್ಯಕರ ಪರಿಸರ ಕಲುಷಿತಗೊಂಡಲ್ಲಿ ಕೆರೆಯನ್ನೇ ನಂಬಿದ ಜಲಚರಗಳಿಗೆ ಕಂಟವಾಗುತ್ತಿದೆ. ಅಲ್ಲದೆ ಮಣಿಪಾಲ ಪರಿಸರದಲ್ಲಿ ಅಂತರ್ಜಲ ವೃದ್ಧಿಗೂ ಈ ಕೆರೆ ಸಹಕಾರಿಯಾಗಿದ್ದು, ಕೆರೆ ಕಲುಷಿತಗೊಂಡಲ್ಲಿ ಮಣಿಪಾಲ ಅಂತರ್ಜಲವು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಿದೆ. ಇಲ್ಲಿಗೆ ವಿದೇಶಗಳಿಂದ ವಿವಿಧ ಜಾತಿಯ ಪಕ್ಷಿಗಳು ವಲಸೆ ಬರುತ್ತವೆ. ತ್ಯಾಜ್ಯ ನೀರು, ಪ್ಲಾಸ್ಟಿಕ್‌ ತ್ಯಾಜ್ಯದಿಂದ ಅವುಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀಳಲಿದೆ.

ಮಣ್ಣಪಳ್ಳ ಅಭಿವೃದ್ಧಿಗೆ ಯೋಜನೆ

ಜಿಲ್ಲಾಡಳಿತ, ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ಸಮಿತಿ ರಚನೆಯಾಗಿದ್ದು, ಹಲವು ವರ್ಷಗಳಿಂದ ಪಾಳು ಬಿದ್ದಂತಿರುವ ಮಣ್ಣಪಳ್ಳ ಕೆರೆಗೆ ಪುನಶ್ಚೇತನ ನೀಡಲು ಕ್ರಮವಹಿಸಲಾಗುತ್ತಿದೆ. ಶಾಸಕರು, ಜಿಲ್ಲಾಧಿಕಾರಿಗಳು ಈ ಬಗ್ಗೆ ಯೋಜನೆ ರೂಪಿಸಿದ್ದು, ಮಣ್ಣಪಳ್ಳ ಪರಿಸರಕ್ಕೆ ದಕ್ಕೆ ಬಾರದಂತೆ ಸ್ವತ್ಛತೆ, ನಿರ್ವಹಣೆ ಮತ್ತು ವಿವಿಧ ಚಟುವಟಿಕೆಗಳ ಮೂಲಕ ಪ್ರವಾಸೋದ್ಯಮವಾಗಿ ಮಣ್ಣಪಳ್ಳ ಅಭಿವೃದ್ಧಿಪಡಿಸುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರ್ಯಾಯ ಕ್ರಮ: ಮಣಿಪಾಲದಲ್ಲಿ ಯುಜಿಡಿ ವ್ಯವಸ್ಥೆ ಸರಿಯಾಗಿ ರೂಪುಗೊಳ್ಳದ ಕಾರಣ ಈ ಸಮಸ್ಯೆ ಎದುರಾಗುತ್ತಿದೆ. ಮಣ್ಣಪಳ್ಳ ಕೆರೆಗೆ ಮಳೆ ನೀರು ಹರಿಯುವ ತೋಡಿನಲ್ಲಿ ತ್ಯಾಜ್ಯನೀರು ಮತ್ತು ತ್ಯಾಜ್ಯ ಸೇರುತ್ತಿರುವುದನ್ನು ತಪ್ಪಿಸಲು ಪರ್ಯಾಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಮಣ್ಣಪಳ್ಳ ಅಭಿವೃದ್ಧಿ ಸಂಬಂಧಿಸಿ ನಡೆದಸಭೆಯಲ್ಲಿ ಶಾಸಕರು ಮತ್ತು ಜಿಲ್ಲಾಧಿಕಾರಿಯವರ ಗಮನಕ್ಕೆ ಈ ವಿಷಯವನ್ನು ಪ್ರಸ್ತಾಪಿಸಿದ್ದೇನೆ. ಮಣ್ಣಪಳ್ಳ ಅಭಿವೃದ್ಧಿ ಯೋಜನೆ ಅನುಷ್ಠಾನದಲ್ಲಿ ಮೊದಲ ಆದ್ಯತೆಯಾಗಿ ಈ ಸಮಸ್ಯೆಪರಿಗಣಿಸಲಾಗುವುದು. –ಕಲ್ಪನಾ ಸುಧಾಮ, ನಗರಸಭೆ ಸದಸ್ಯರು

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.