ಆ.1ರಿಂದ ಡಾ. ಪ್ರತಾಪ್ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಲಭ್ಯ
Team Udayavani, Jul 29, 2023, 3:11 PM IST
ಕಾರ್ಕಳ : ಪ್ರಸಿದ್ಧ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಕ ಮತ್ತು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಪ್ರತಾಪ್ ಕುಮಾರ್ ಎನ್ ಆ.1 ರಿಂದ ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗಾಗಿ ಲಭ್ಯವಿರಲಿದ್ದಾರೆ.
ಅವರು ತಮ್ಮ ಪರಿಣತಿ ಮತ್ತು ಅನುಭವದಿಂದ ಈಗಾಗಲೇ ಈ ಕ್ಷೇತ್ರದಲ್ಲಿ ಪ್ರಸಿದ್ದಿಯಾಗಿದ್ದು, ಇನ್ನು ಮುಂದೆ ಪ್ರತಿ ಮಂಗಳವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಯವರೆಗೆ ಅಪಾಯಿಂಟ್‌ಮೆಂಟ್ ಆಧಾರದ ಮೇಲೆ ಸಮಾಲೋಚನೆಗಳಿಗೆ ಲಭ್ಯವಿರುತ್ತಾರೆ.
ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಾ ಸೇವೆಗಳ ಈ ಸೇರ್ಪಡೆಯು ಆಸ್ಪತ್ರೆಗೆ ಮಹತ್ವದ ಮೈಲಿಗಲ್ಲಾಗಿದೆ. ಇದು ಈಗಿರುವ ಸಾಮಾನ್ಯ ವೈದ್ಯಕೀಯ, ಸಾಮಾನ್ಯ ಮತ್ತು ಲ್ಯಾಪರೊಸ್ಕೋಪಿಕ್ ಶತ್ರಚಿಕಿತ್ಸೆ, ಮಕ್ಕಳ ವಿಭಾಗ, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ, ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸೆ, ನೇತ್ರಚಿಕಿತ್ಸೆ, ಹ್ರದ್ರೋಗ, ಕಿವಿ ಮೂಗು ಗಂಟಲು, ನರವಿಜ್ಞಾನ (ನ್ಯೂರೊಲಜಿ), ಮೂತ್ರಪಿಂಡ (ನೆಫ್ರಾಲಜಿ), ಮೂತ್ರಶಾಸ್ತ್ರ (ಯುರೊಲೊಜಿ), ಉಪಶಾಮಕ ಔಷಧ, ಮಕ್ಕಳ ರಕ್ತಶಾಸ್ತ್ರ & ಕ್ಯಾನ್ಸರ್, ಶಸ್ತ್ರಚಿತ್ಸಾ ಕ್ಯಾನ್ಸರ್, ಚರ್ಮ, ಮಾನಸಿಕ ಆರೋಗ್ಯ, ರೇಡಿಯೋಲೋಜಿ ಮತ್ತು ಪ್ಯಾಥೋಲಾಜಿ (ಅತ್ಯಾಧುನಿಕ ತಂತ್ರಜ್ಞಾನದ ಲ್ಯಾಬ್ ಪರೀಕ್ಷಾ) ಸೇವೆಗಳಿಗೆ ಪೂರಕವಾಗಿದೆ.
ಕಾರ್ಕಳದ ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಮುಖ್ಯ ವೈದ್ಯಧಿಕಾರಿ ಡಾ ಕೀರ್ತಿನಾಥ ಬಲ್ಲಾಳ ಮಾತನಾಡಿ, “ನಮ್ಮ ಆರೋಗ್ಯ ವೃತ್ತಿಪರರ ತಂಡಕ್ಕೆ ಡಾ. ಪ್ರತಾಪ್ ಕುಮಾರ್ ಎನ್. ಅವರನ್ನು ಸ್ವಾಗತಿಸಲು ನಾವು ಸಂತೋಷಪಡುತ್ತೇವೆ. ಈ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಾ ಸೇವೆಗಳ ಸೇರ್ಪಡೆಯು ಸಕಾಲದಲ್ಲಿ ರೋಗನಿರ್ಣಯ ಮಾಡಿ ಗುಣಮಟ್ಟದ ವೈದ್ಯಕೀಯ ಆರೈಕೆ ಮೂಲಕ ಸಮುದಾಯಕ್ಕೆ ನೀಡಲು ಇನ್ನಷ್ಟು ಸಹಕಾರಿಯಾಗಲಿದೆ” ಎಂದು ಹೇಳಿದರು.
ಅಪಾಯಿಂಟ್‌ಮೆಂಟ್ ನಿಗದಿಪಡಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ. 9731601150 ಅಥವಾ ದೂ. ಸಂಖ್ಯೆ: 08258 230583 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.