ಮಲ್ಪೆ ಬಂದರಿನಲ್ಲಿ ಹೂಳು: ಡ್ರಜ್ಜಿಂಗ್‌ ಬೇಡಿಕೆಗೆ ಇನ್ನೂ ಸಿಗಲಿಲ್ಲ ಮನ್ನಣೆ

ವರ್ಷಗಳಲ್ಲಿ 100ಕ್ಕೂ ಅಧಿಕ ಜೀವ ಬಲಿ, ಕೋಟ್ಯಂತರ ರೂ. ಸೊತ್ತು ಹಾನಿ...!

Team Udayavani, May 26, 2022, 12:39 PM IST

dredge

ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬೃಹತ್‌ ಪ್ರಮಾಣದಲ್ಲಿ ಹೂಳು ತುಂಬಿ ಕೊಂಡಿದ್ದು ನೀರಿನ ಇಳಿತದ ಸಂದರ್ಭದಲ್ಲಿ ಮೀನು ಗಾರಿಕೆ ಬೋಟ್‌ಗಳ ಲಂಗರು ಮತ್ತು ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಸಮರ್ಪಕವಾದ ಡ್ರಜ್ಜಿಂಗ್‌ ಕೆಲಸ ನಡೆಯ ದಿರುವುದರಿಂದ ದಿನದಿಂದ ದಿನಕ್ಕೆ ಸಮಸ್ಯೆ ಗಂಭೀರ ಸ್ವರೂಪಕ್ಕೆ ತಿರುಗಿದ್ದು, ಬೋಟ್‌ ಮಾಲಕರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಇಲ್ಲಿ ಸಂಪೂರ್ಣ ಡ್ರಜ್ಜಿಂಗ್‌ ಕಾಮಗಾರಿ ಆಗಬೇಕು ಎಂಬ ಬೇಡಿಕೆ ಇನ್ನೂ ಕೈಗೂಡಿಲ್ಲ. ವರ್ಷ ವರ್ಷ ಡ್ರಜ್ಜಿಂಗ್‌ ನಡೆಸಿದರೆ ಮಾತ್ರ ಸಮಸ್ಯೆ ಪರಿಹಾರ ಸಾಧ್ಯವಾಗುತ್ತದೆ ಎಂಬುದು ಮೀನುಗಾರರ ಅಭಿಪ್ರಾಯ.

ಇಲ್ಲಿ ಜೀವಕ್ಕೆ ಗ್ಯಾರಂಟಿ ಇಲ್ಲ

ಈ ಹಿಂದೆ ಹೂಳೆತ್ತಿದ್ದ ಸಂಸ್ಥೆಯೊಂದು ಅರ್ಧಂಬರ್ಧ ಕೆಲಸ ಮಾಡಿ ಹಣ ಪಡೆದು ಹೋಗಿದೆ ಎಂದು ಮೀನುಗಾರರು ಆರೋಪಿಸುತ್ತಾರೆ. ಬೆಳಗ್ಗೆ ಮತ್ತು ರಾತ್ರಿ ವೇಳೆ ಬೋಟ್‌ನಿಂದ ಮೀನುಗಳನ್ನು ಇಳಿಸುವ ಕಾರ್ಯ ನಡೆಯುತ್ತಿದೆ. ಬೋಟ್‌ನಿಂದ ಬೋಟ್‌ಗೆ ನಡೆದುಕೊಂಡು ಹೋಗುವ ಸಮಯ ದಲ್ಲಿ ಆಯ ತಪ್ಪಿ ನೀರಿಗೆ ಬಿದ್ದರೆ ಜೀವಕ್ಕೆ ಮಾತ್ರ ಇಲ್ಲಿ ಯಾವುದೇ ಗ್ಯಾರಂಟಿ ಇಲ್ಲ. ಸುಮಾರು ಆಳದವರೆಗೆ ಕೆಸರು ತುಂಬಿಕೊಂಡಿರುವುದರಿಂದ ಬಿದ್ದ ವ್ಯಕ್ತಿ ಮೇಲೆ ಬರದೆ ನೇರ ಅಡಿಭಾಗವನ್ನು ಸೇರುತ್ತಾನೆ. ಇಂತಹ ಆನೇಕ ಪ್ರಕರಣಗಳು ಮಲ್ಪೆ ಬಂದರಿನಲ್ಲಿ ನಡೆಯುತ್ತಲೇ ಇದೆ. ಇದರಲ್ಲಿ ಹೊರರಾಜ್ಯದ ಮೀನುಗಾರರ ಸಂಖ್ಯೆಯೇ ಹೆಚ್ಚು. ಬೋಟ್‌ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದವರ ಬಗ್ಗೆ ಬೋಟು ಮಾಲಕರಿಗಾಗಲಿ, ಮನೆ ಮಂದಿಗಾಗಲಿ ಮಾಹಿತಿ ಇಲ್ಲದೆ ನಾಪತ್ತೆಯಾಗಿರುವ ಬಗ್ಗೆ ಪೊಲೀಸ್‌ ಠಾಣೆಗೂ ಮಾಹಿತಿ ನೀಡದೆ ಕಾದು ನೋಡುವ ಪರಿಸ್ಥಿತಿ ಎದುರಾಗಿದೆ.

ತತ್‌ಕ್ಷಣ ಇಲ್ಲಿ ಹೂಳೆತ್ತುವ ಕೆಲಸ ಆಗಬೇಕಾಗಿದೆ ಎನ್ನುತ್ತಾರೆ ಇಲ್ಲಿ ಜನ ನೀರಿಗೆ ಬಿದ್ದರೆ ಮೊದಲ ಕರೆ ಸ್ವೀಕರಿಸುವ ಮುಳುಗು ತಜ್ಞ ಈಶ್ವರ್‌ ಮಲ್ಪೆ ಅವರು.

ಮಲ್ಪೆಯಲ್ಲಿರುವ ಬೋಟ್‌ಗಳು

ಮಲ್ಪೆ ಬಂದರಿನಲ್ಲಿ ಸುಮಾರು 1,200ರಷ್ಟು ಡೀಪ್‌ಸೀ ಟ್ರಾಲ್‌ಬೋಟ್‌ಗಳು, 100 ಪಸೀìನ್‌, 500ರಷ್ಟು ತ್ರಿಸೆವೆಂಟಿ ಟ್ರಾಲ್‌ಬೋಟ್‌, 200 ಸಣ್ಣ ಟ್ರಾಲ್‌ಬೋಟ್‌ ಸೇರಿದಂತೆ ಸಾವಿರಾರು ಯಾಂತ್ರಿಕೃತ ಬೋಟ್‌ಗಳು, ನಾಡದೋಣಿಗಳು ಮೀನುಗಾರಿಕೆಯಲ್ಲಿ ತೊಡಗಿಕೊಂಡಿವೆ.

ಎಲ್ಲೆಲ್ಲಿ ಹೂಳು ತುಂಬಿವೆ?

1 ಮತ್ತು 2 ಹಾಗೂ 3ನೇ ಹಂತದ ಜೆಟ್ಟಿಯಲ್ಲಿ ಕೆಸರು ತುಂಬಿಕೊಂಡಿದೆ. ನೀರು ಇಳಿತದ ಸಂದರ್ಭದಲ್ಲಿ ಬೋಟನ್ನು ಒಳ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಬಾಪುತೋಟ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೂಳು ತುಂಬಿಕೊಂಡಿದ್ದು, 1 ಮತ್ತು 2ನೇ ಜೆಟ್ಟಿಯಲ್ಲಿ ಮೀನು ಖಾಲಿ ಮಾಡಿ 3ನೇ ಜೆಟ್ಟಿಗೆ ಬೋಟುಗಳು ತೆರಳಲು ಸಾಧ್ಯವಾಗುತ್ತಿಲ್ಲ. ದಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಹೂಳು ತುಂಬಿಕೊಂಡಿದ್ದು ಬೋಟುಗಳ ಚಲನಕ್ಕೆ ಸಮಸ್ಯೆಯಾಗಿ ಬೋಟ್‌ ಹಾನಿಯಾಗುವ ಸಾಧ್ಯತೆ ಇದೆ. ನೀರಿನ ಇಳಿತದ ಸಂದರ್ಭದಲ್ಲಿ ಅಳಿವೆ ಬಾಗಿಲಿನಲ್ಲೂ ಸಮಸ್ಯೆ ಎದುರಾಗುತ್ತದೆ ಎನ್ನಲಾಗಿದೆ. ಬಂದರಿನ ಬೇಸಿನ್‌ನಲ್ಲಿ ಹೂಳು ತುಂಬಿದ್ದರಿಂದ ಒಂದೆಡೆ ಬೋಟಿನ ಅಡಿಭಾಗಕ್ಕೆ ಹಾನಿಯಾದರೆ, ಅಡಿಭಾಗದ ಕೆಸರಿನಿಂದ ಕೂಡಿದ ನೀರು ಎಂಜಿನ್‌ನಲ್ಲಿ ಅಳವಡಿಸಿದ ಲಕ್ಷಾಂತರ ರೂಪಾಯಿ ವೆಚ್ಚದ ವಾಟರ್‌ ಕೂಲರ್‌ ಸೇರಿಕೊಂಡು ಹಾನಿಗೊಳಗಾಗುತ್ತವೆ ಎನ್ನುತ್ತಾರೆ ಮೀನುಗಾರ ಸಂಘದ ಕಾರ್ಯದರ್ಶಿ ರತ್ನಾಕರ ಸಾಲ್ಯಾನ್‌.

ಇಲ್ಲಿ ಡ್ರಜ್ಜಿಂಗ್‌ ಯಂತ್ರ ಅಗತ್ಯ

ಕೇರಳ ರಾಜ್ಯದ ಪ್ರತೀ ಬಂದರಿನಲ್ಲಿ ಡ್ರಜ್ಜಿಂಗ್‌ ಯಂತ್ರದ ವ್ಯವಸ್ಥೆ ಇರುವುದರಿಂದ ಅಲ್ಲಿನ ಬಂದರಿನಲ್ಲಿ ಹೂಳಿನ ಸಮಸ್ಯೆ ಎದುರಾಗುತ್ತಿಲ್ಲ. ನಮ್ಮ ರಾಜ್ಯದ ಪ್ರಮುಖ ಬಂದರಿನಲ್ಲೂ ಡ್ರಜ್ಜಿಂಗ್‌ ಯಂತ್ರದ ವ್ಯವಸ್ಥೆಗೊಳಿಸಬೇಕೆಂದು ಮೀನುಗಾರರು ಆಗ್ರಹಿಸಿದ್ದಾರೆ.

ಸಮಸ್ಯೆ ಬಗೆಹರಿಸಿ

ಹೂಳಿನ ಸಮಸ್ಯೆ ರಾಜ್ಯದ ಎಲ್ಲ ಬಂದರುಗಳಲ್ಲಿ ಇದೆ. ಹಲವು ಬಾರಿ ಸರಕಾರಕ್ಕೆ ಹೂಳೆತ್ತಲು ಮನವಿಯನ್ನು ಮಾಡಲಾಗಿದೆ. ಇದೀಗ ಡ್ರಜ್ಜಿಂಗ್‌ಗೆ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಲಾಗುತ್ತದೆ. ಸೆಪ್ಟಂಬರ್‌ನಲ್ಲಿ ಕಾಮಗಾರಿಯನ್ನು ನಡೆಸುತ್ತಾರೆಂಬ ವಿಶ್ವಾಸ ಇದೆ. ಸರಕಾರ ಅದಷ್ಟು ಶೀಘ್ರದಲ್ಲಿ ಮೀನುಗಾರರ ಸಮಸ್ಯೆಯನ್ನು ಬಗೆ ಹರಿಸಬೇಕಾಗಿದೆ. -ದಯಾನಂದ ಕೆ. ಸುವರ್ಣ, ಅಧ್ಯಕ್ಷರು, ಮಲ್ಪೆ ಮೀನುಗಾರರ ಸಂಘ

ಅಂದಾಜು ಪಟ್ಟಿ ಸಲ್ಲಿಕೆ

ಶಾಸಕರ ಪ್ರಯತ್ನದಿಂದ 3 ಕೋ. ರೂ. ಅಂದಾಜು ಪಟ್ಟಿಯಲ್ಲಿ ಸಿದ್ಧಪಡಿಸಿ ಸರಕಾರಕ್ಕೆ ಕಳುಹಿಸಲಾಗಿದೆ. ಅನುದಾನವೂ ಬಿಡುಗಡೆಯಾಗಬಹುದು. ಈಗಿರುವ 3 ಬೇಸಿನ್‌ ಮತ್ತು ಚನೆಲ್‌ನ ಡ್ರಜ್ಜಿಂಗ್‌ ನಡೆಸಲಾಗುವುದು. ಟೆಂಡರ್‌ ಪ್ರಕ್ರಿಯೆ ನಡೆಸಿ ಮಳೆಗಾಲ ಮುಗಿದ ಬಳಿಕ ಕಾಮಗಾರಿಯನ್ನು ಆರಂಭಿಸಲಾಗುವುದು. -ಉದಯ ಕುಮಾರ್‌, ಕಾರ್ಯ ನಿರ್ವಾಹಕ ಎಂಜಿನಿಯರ್‌, ಬಂದರು ಇಲಾಖೆ

 ಶೀಘ್ರದಲ್ಲೇ ಕಾಮಗಾರಿ

ಬಂದರಿನ ಡ್ರಜ್ಜಿಂಗ್‌ ಸಮಸ್ಯೆಯ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡ ಲಾಗಿದೆ. ಆದಷ್ಟು ಶೀಘ್ರದಲ್ಲೇ ಕಾಮಗಾರಿಯನ್ನು ಕೈಗೊಳ್ಳುವಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ. – ಅಂಗಾರ ಎಸ್‌., ಮೀನುಗಾರಿಕ ಸಚಿವರು

ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.