ಗ್ರಾಮೀಣ ವಿದ್ಯಾರ್ಥಿಗಳ ಆನ್‌ಲೈನ್‌ ಕಲಿಕೆಗೆ ಗ್ರಹಣ

ನಿರಂತರ ಕಾಡುವ ವಿದ್ಯುತ್‌, ನೆಟ್‌ವರ್ಕ್‌ ಸಮಸ್ಯೆ

Team Udayavani, Aug 28, 2020, 5:45 AM IST

ಗ್ರಾಮೀಣ ವಿದ್ಯಾರ್ಥಿಗಳ ಆನ್‌ಲೈನ್‌ ಕಲಿಕೆಗೆ ಗ್ರಹಣ

ಕೋವಿಡ್ ಕಾಲದಲ್ಲಿ ತಂತ್ರಜ್ಞಾನಗಳು ವರದಾನವಾದರೂ ಗ್ರಾಮೀಣ ಭಾಗದಲ್ಲಿನ ಮೂಲಸೌಕರ್ಯ ಕೊರತೆ, ಆರ್ಥಿಕ ಕಾರಣಗಳು ಬಡ ವಿದ್ಯಾರ್ಥಿಗಳಿಗೆ ಹಲವು ಸಮಸ್ಯೆಗಳನ್ನು ಹುಟ್ಟುಹಾಕಿವೆ. ಇದನ್ನು ಸರಿಪಡಿಸುವಲ್ಲಿ ಸರಕಾರ ಕಾರ್ಯಪ್ರವೃತ್ತವಾಗಬೇಕಿದೆ.

ಉಡುಪಿ: ಶಿಕ್ಷಣ ಇಲಾಖೆ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಕಲಿಕೆಯಿಂದ ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ವಿದ್ಯಾಗಮ ಕಾರ್ಯಕ್ರಮದಡಿಯಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌-ಆಫ್‌ಲೈನ್‌ ಶಿಕ್ಷಣಕ್ಕೆ ಮುಂದಡಿ ಇಟ್ಟಿದೆ. ಆದರೆ ಇದು ಜಿಲ್ಲೆಯ ಗ್ರಾಮೀಣ ಭಾಗದ ಶೇ. 10ರಷ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಗೆ ಸಮಸ್ಯೆಯಾಗಿದೆ.  ಜಿಲ್ಲೆಯಲ್ಲಿ 694 ಸರಕಾರಿ, 250 ಅನುದಾನಿತ ಹಾಗೂ 280 ಅನುದಾನರಹಿತ ಶಾಲೆಗಳಿವೆ. ಇದರಲ್ಲಿ 1ರಿಂದ 8ನೇ ತರಗತಿವರೆಗೆ 1,04,565 ವಿದ್ಯಾರ್ಥಿಗಳು ಮತ್ತು 9, 10ನೇ ತರಗತಿಯಲ್ಲಿ 29,115 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1,33,680 ವಿದ್ಯಾರ್ಥಿಗಳು ಇದ್ದಾರೆ. ಇಲಾಖೆಯ ಸರ್ವೇ ಅನ್ವಯ ಜಿಲ್ಲೆಯಲ್ಲಿ 1,14,476 ವಿದ್ಯಾರ್ಥಿಗಳ ಮನೆಗಳಲ್ಲಿ ಮೊಬೈಲ್‌ನಲ್ಲಿ ಇಂಟರ್‌ನೆಟ್‌ ಹಾಗೂ 1,33,000 ವಿದ್ಯಾರ್ಥಿಗಳ ಮನೆಗಳಲ್ಲಿ ಟವಿ, ರೇಡಿಯೋ ಸೌಲಭ್ಯವಿದೆ.

ಪೋಷಕರ ಆರ್ಥಿಕ ಸಂಕಷ್ಟ !
ಆರ್ಥಿಕ ಶಕ್ತಿ ಕಡಿಮೆ ಇರುವ ಪೋಷಕರು ಮಕ್ಕಳನ್ನು ಹೆಚ್ಚಾಗಿ ಸರಕಾರಿ ಶಾಲೆಗೆ ಸೇರಿಸುತ್ತಾರೆ. ಹೆಚ್ಚಿನ ಕುಟುಂಬಗಳು ಕೂಲಿ ಕೆಲಸ ಮಾಡಿ ಜೀವನ ಸಾಗಿಸುವವರಾಗಿದ್ದಾರೆ. ಈ ಕುಟುಂಬಗಳಿಗೆ ಸರಕಾರ ಜಾರಿಗೆ ತಂದ ಆನ್‌ಲೈನ್‌ ತರಗತಿಗಳು ದುಬಾರಿಯಾಗಿ ಪರಿಣಮಿಸಿವೆ. ಮಕ್ಕಳ ಭವಿಷ್ಯದ ದೃಷ್ಟಿ ಯಿಂದ ಪೋಷಕರು ಕೋವಿಡ್ ಸಂಕಷ್ಟ ಕಾಲದಲ್ಲೂ ಸಾವಿರಾರು ರೂಪಾಯಿ ವ್ಯಯಿಸಿ ಸ್ಮಾರ್ಟ್‌ಫೋನ್‌ ಖರೀದಿಸಿ ನೀಡಿದ್ದಾರೆ. ಈಗ ಇಂಟರ್ನೆಟ್‌ ಪ್ಯಾಕೇಜ್‌-ರೀಜಾರ್ಜ್‌ ಮಾಡುವುದೂ ಹೊರೆಯಾಗಿದೆ.

ನೆಟ್‌ವರ್ಕ್‌ಗೆ ಪರದಾಟ
ಕರಾವಳಿಯ ಗುಡ್ಡಗಾಡು ಪ್ರದೇಶ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಕೆಲವೆಡೆ ಒಂದು ದೂರವಾಣಿ ಕರೆ ಸ್ವೀಕರಿಸಲು ಮನೆ ಬಿಟ್ಟು ದೂರ ತೆರಳಬೇಕು. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ತರಗತಿ ಪ್ರಾರಂಭವಾಗುವ ಒಂದು ಗಂಟೆಯ ಮುನ್ನ ಪೋಷಕರೊಂದಿಗೆ ಗುಡ್ಡಹತ್ತಿ ಇಂಟರ್‌ನೆಟ್‌ ಸಂಪರ್ಕಕ್ಕಾಗಿ ಪ್ರಯತ್ನಿಸಬೇಕಾದ ಪರಿಸ್ಥಿತಿ ಎದುರಾಗಿದೆ.

ನೆಟ್‌ವರ್ಕ್‌ ಸಮಸ್ಯೆ ಪ್ರದೇಶ
ಜಡ್ಕಲ್‌, ಮುದೂರು, ಕೊಲ್ಲೂರು, ಹಾಲ್ಕಲ್‌, ಮಾವಿನ ಕಾರು, ಬಸ್ರಿಬೇರು, ಮಾರಣಕಟ್ಟೆ, ಇಡೂರು ಸಹಿತ ಕೆರಾಡಿ, ಬೆಳ್ಳಾಲ, ಮೂಡಮುಂದ, ಹೊಸೂರು ಹಾಗೂ ಕಾರ್ಕಳ, ಹೆಬ್ರಿ, ಬ್ರಹ್ಮಾವರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಇಂಟರ್‌ನೆಟ್‌ ಸಮಸ್ಯೆ ಇದೆ.

ವಿದ್ಯುತ್‌ ಸಮಸ್ಯೆ !
ಜಿಲ್ಲೆಯಲ್ಲಿ ವಾರದಲ್ಲಿ ಒಂದು ದಿನ ಮೆಸ್ಕಾಂನವರು ನಿರ್ವಹಣೆಯ ನೆಪದಲ್ಲಿ ವಿದ್ಯುತ್‌ ವ್ಯತ್ಯಯ ಮಾಡುತ್ತಾರೆ. ಮಳೆ -ಗಾಳಿಗೆ ವಿದ್ಯುತ್‌ ಸಂಪರ್ಕ ಕಡಿತಗೊಳ್ಳುವುದು ಸಹಜವಾಗಿದೆ. ಇದರಿಂದಾಗಿ ಟಿವಿ ಮೂಲಕ ಪಾಠಗಳನ್ನು ವೀಕ್ಷಿಸುವ ಮಕ್ಕಳಿಗೆ ಆ ದಿನದ ತರಗತಿಗಳು ತಪ್ಪಿ ಹೋಗುತ್ತಿವೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆ ಉಂಟಾಗುತ್ತಿದೆ. ಈ ಸಮಸ್ಯೆ ಇರುವ ಮಕ್ಕಳಿಗೆ ಯೂ ಟ್ಯೂಬ್‌ನಲ್ಲಿ ತರಗತಿ ಲಿಂಕ್‌ ಲಭ್ಯವಿದ್ದರೂ ನೆಟ್‌ವರ್ಕ್‌ ಸಮಸ್ಯೆಯಿಂದ ತರಗತಿ ವೀಕ್ಷಿಸಲು ಸಾಧ್ಯವಾಗುತ್ತಿಲ್ಲ.

ಮೊಬೈಲ್‌ ವಾಟ್ಸ್ಯಾಪ್‌ ಪಾಠ
ಜಿಲ್ಲೆಯಲ್ಲಿ ಶೇ. 10ರಷ್ಟು ವಿದ್ಯಾರ್ಥಿಗಳ ಮನೆಗಳಲ್ಲಿ ನೆಟ್‌ವರ್ಕ್‌ ಸಮಸ್ಯೆ ಇದೆ. ಅದಕ್ಕಾಗಿ ಶಿಕ್ಷಕರು ಪೋಷಕರ ಮೊಬೈಲ್‌ ವಾಟ್ಸ್ಯಾಪ್‌ಗಳಿಗೆ ರೆಕಾರ್ಡ್‌ ಮಾಡಿರುವ ವೀಡಿಯೋಗಳನ್ನು ಕಳುಹಿಸುತ್ತಾರೆ. ಜತೆಗೆ ನೆಟ್‌ವರ್ಕ್‌ ಇಲ್ಲದ ಪ್ರದೇಶಗಳಿಗೆ ಶಿಕ್ಷಕರು ತೆರಳಿ ಪಾಠ
ಹಾಗೂ ಅಗತ್ಯವಿರುವ ಚಟುವಟಿಕೆ ನೀಡುತ್ತಿದ್ದಾರೆ. ವಿದ್ಯಾರ್ಥಿಗಳ ಪಾಠದ ಗ್ರಹಿಕೆಯನ್ನೂ ಶಿಕ್ಷಕರು ಪರಿಶೀಲಿಸುತ್ತಿದ್ದಾರೆ.
– ಶೇಷಶಯನ ಕಾರಿಂಜ, ಡಿಡಿಪಿಐ, ಉಡುಪಿ ಜಿಲ್ಲೆ.

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.