ನಗರಸಭೆಯಿಂದ ವೈಜ್ಞಾನಿಕ ವಿಲೇವಾರಿಗೆ ಒತ್ತು
ಉಡುಪಿಯಲ್ಲಿ ನಿತ್ಯ 250 ಕೆ.ಜಿ. ವೈದ್ಯಕೀಯ ತ್ಯಾಜ್ಯ ಉತ್ಪತ್ತಿ!
Team Udayavani, Jun 9, 2020, 5:25 AM IST
ಸಾಂದರ್ಭಿಕ ಚಿತ್ರ.
ಉಡುಪಿ: ನಗರ ವ್ಯಾಪ್ತಿ ಯಲ್ಲಿ ಕೋವಿಡ್ -19 ರೋಗಿಯ ಚಿಕಿತ್ಸೆಗೆ ಬಳಸಲಾದ ವೈದ್ಯಕೀಯ ಹಾಗೂ ಕ್ವಾರಂಟೈನ್ ವ್ಯಕ್ತಿಗಳ ಮನೆಯ ತ್ಯಾಜ್ಯವನ್ನು ವೈಜ್ಞಾನಿಕ ಕ್ರಮ ಬಳಸಿಕೊಂಡು ವಿಲೇವಾರಿ ಮಾಡಲು ನಗರಸಭೆ ಎರಡು ಸಂಸ್ಥೆಗಳಿಗೆ ಗುತ್ತಿಗೆ ನೀಡಿದೆ.
ವೈಜ್ಞಾನಿಕ ವಿಲೇವಾರಿ
ಹೊರ ದೇಶ, ರಾಜ್ಯಗಳಿಂದ ಬಂದಿರುವ ವ್ಯಕ್ತಿಗಳನ್ನು ನಗರಸಭೆ ವ್ಯಾಪ್ತಿಯ ಹೊಟೇಲ್, ಹಾಸ್ಟೆಲ್ ಹಾಗೂ ಹೋಮ್ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಈ ಪ್ರದೇಶ ದಲ್ಲಿ ಉತ್ಪತ್ತಿಯಾಗುವ ದೈನಂದಿನ ತ್ಯಾಜ್ಯ ಅಪಾಯಕಾರಿಯಾದ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ನಗರಸಭೆಯು ತ್ಯಾಜ್ಯವನ್ನು ವೈದ್ಯಕೀಯ ತ್ಯಾಜ್ಯವೆಂದು ಪರಿಗಣಿಸಿ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಮುಂದಾಗಿದೆ. ಇದರ ಗುತ್ತಿಗೆಯನ್ನು ರಾಮಕಿ ಹಾಗೂ ಪಡುಬಿದ್ರಿ ಆಯುಷ್ ಸಂಸ್ಥೆಗೆ ನೀಡಲಾಗಿದೆ.
ನಿತ್ಯ 250 ಕೆ.ಜಿ. ವೈದ್ಯಕೀಯ ತ್ಯಾಜ್ಯ
ಪಡುಬಿದ್ರಿ ಆಯುಷ್ ಹಾಗೂ ರಾಮಕಿ ಸಂಸ್ಥೆಯು ಉಡುಪಿಯ ಸುಮಾರು 55 ಕ್ವಾರಂಟೈನ್ ಸೆಂಟರ್‌ಗಳಿಂದ ನಿತ್ಯ ಸರಾಸರಿ 250 ಕೆ.ಜಿ. ವೈದ್ಯಕೀಯ ತ್ಯಾಜ್ಯವನ್ನು ಸಂಗ್ರಹಿಸುತ್ತಿದೆ. ಅವುಗಳನ್ನು ವೈಜ್ಞಾನಿಕ ವಿಧಾನವನ್ನು ಬಳಸಿಕೊಂಡು ಮೂರು ಹಂತಗಳಲ್ಲಿ ದಹನ ಮಾಡುತ್ತಿವೆ.
ವಾಹನ, ಕಾರ್ಮಿಕರ ವೆಚ್ಚ, ಇತರ ಖರ್ಚು ಸೇರಿದಂತೆ ಸಂಸ್ಥೆಗೆ ಒಂದು ಕೆ.ಜಿ. ವೈದ್ಯಕೀಯ ತ್ಯಾಜ್ಯ ದಹನ ಮಾಡಲು 75 ರೂ. ವೆಚ್ಚವಾಗುತ್ತಿದೆ. ಕ್ವಾರಂಟೈನ್ ಸೆಂಟರ್‌ಗಳಲ್ಲಿ ಹಾಗೂ ಮನೆ ಕ್ವಾರಂಟೈನ್ ಇರುವವರಿಗೆ ದೈನಂದಿನ ತ್ಯಾಜ್ಯ ಸಂಗ್ರಹಿಸಲು ಪ್ರತ್ಯೇಕವಾದ ಚೀಲವನ್ನು ಸಹ ಈ ಸಂದರ್ಭದಲ್ಲಿ ನೀಡಲಾಗುತ್ತದೆ.
ವೈದ್ಯಕೀಯ ತ್ಯಾಜ್ಯವೆಂದರೇನು?
ಕೋವಿಡ್ ಬಂದ ವ್ಯಕ್ತಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಬಳಸಲಾದ ಪಿಪಿಇ ಕಿಟ್, ಗ್ಲೌಸ್, ಮಾಸ್ಕ್, ಯೂಸ್ ಆ್ಯಂಡ್ ತ್ರೋ ಹಾಗೂ ಕೋವಿಡ್ ಪರೀಕ್ಷೆಗೆ ಬಳಸಲಾಗುವ ವೈದ್ಯಕೀಯ ಪರಿಕರಗಳನ್ನು ಎರಡು ಸಂಸ್ಥೆಗಳು ವಿಭಾಗ ಮಾಡಿಕೊಂಡು ಸಂಗ್ರಹಿಸುತ್ತಿವೆ. ನಗರದ ವಿವಿಧ ಹಾಸ್ಟೆಲ್, ಹೊಟೇಲ್‌ಗಳಲ್ಲಿ ಕ್ವಾರಂಟೈನ್‌ನಲ್ಲಿ ಇರುವ ಶಂಕಿತ ವ್ಯಕ್ತಿಗಳ ದೈನಂದಿನ ತ್ಯಾಜ್ಯವನ್ನು ಸಹ ವೈಜ್ಞಾನಿಕ ಪದ್ಧತಿಯನ್ನು ಆಳವಡಿಸಿಕೊಂಡು ವಿಲೇವಾರಿ ಮಾಡುತ್ತಿದೆ.
ತ್ಯಾಜ್ಯ ವಿಲೇವಾರಿಗೆ ಗುತ್ತಿಗೆ
ನಗರಸಭೆ ವ್ಯಾಪ್ತಿಯ ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಎರಡು ಸಂಸ್ಥೆಗಳಿಗೆ ಗುತ್ತಿಗೆ ನೀಡಲಾಗಿದೆ. ಕ್ವಾರಂಟೈನ್ ಕೇಂದ್ರದಿಂದ ಸಂಗ್ರಹಿಸಲಾದ ತ್ಯಾಜ್ಯವನ್ನು ಈ ಸಂಸ್ಥೆಗಳು ತೆಗೆದುಕೊಂಡು ಹೋಗಿ ವಿಲೇವಾರಿ ಮಾಡುತ್ತಿವೆ.
-ಸ್ನೇಹಾ, ಪರಿಸರ ಎಂಜಿನಿಯರ್. ಉಡುಪಿ ನಗರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.