3 ಲಕ್ಷ ಮತಗಳ ಅಂತರದ ಗೆಲುವಿನ ನಿರೀಕ್ಷೆ : ಶೋಭಾ ಕರಂದ್ಲಾಜೆ
Team Udayavani, Apr 17, 2019, 6:30 AM IST
ಕಾಪು : ಈ ಬಾರಿಯ ಲೋಕಸಭಾ ಚುನಾವಣೆ ನರೇಂದ್ರ ಮೋದಿಯವರಿಗೆ ಶಕ್ತಿ ನೀಡುವ ಚುನಾವಣೆಯಾಗಿದೆ. ಅಖಂಡ ಭಾರತದ ರಕ್ಷಣೆಗಾಗಿ ಮೋದಿ ಮತ್ತೂಮ್ಮೆ ಅನಿವಾರ್ಯರಾಗಿದ್ದು, ಮೋದಿ ಗೆಲ್ಲಬೇಕಾದರೆ ಪ್ರತೀ ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಬೇಕಿದೆ. ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ 3 ಲಕ್ಷಕ್ಕೂ ಅಧಿಕ ಮತಗಳೊಂದಿಗೆ ಗೆಲುವಿನ ನಿರೀಕ್ಷೆಯಿದ್ದು, ಅದನ್ನು ಮತ್ತಷ್ಟು ಹೆಚ್ಚಳಗೊಳಿಸುವ ಪ್ರಯತ್ನ ಕಾರ್ಯಕರ್ತರಿಂದ ನಡೆಯಬೇಕಿದೆ ಎಂದು ಬಿಜೆಪಿ ಅಭ್ಯರ್ಥಿ / ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಸೋಮವಾರ ಕಾಪು ಪೇಟೆಯಲ್ಲಿ ನಡೆದ ಬೃಹತ್ ರೋಡ್ ಶೋ ಬಳಿಕ, ವಾಜಪೇಯಿ ಕಟ್ಟೆ ಬಳಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾಂಗ್ರೆಸ್‌ನಿಂದ ದೇಶ ದ್ರೋಹಕ್ಕೆ ಬೆಂಬಲ
ದೇಶದ ರಕ್ಷಣೆಯ ಭಾರ ಹೊತ್ತಿರುವ ಸೈನಿಕರು ಮತ್ತು ಮೋದಿಯವರ ನೇತೃತ್ವದಲ್ಲಿ ಬಿಜೆಪಿ ದೇಶವನ್ನು ಉಳಿಸುವ ಪ್ರಯತ್ನ ನಡೆಸುತ್ತಿದ್ದರೆ ಕಾಂಗ್ರೆಸ್ ಪಕ್ಷ ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸುವ ಪ್ರಯತ್ನ ಮಾಡುತ್ತಿದೆ. ರಾಷ್ಟÅ ವಿರೋಧಿ ನೀತಿಯ ಪ್ರಣಾಳಿಕೆ ಬಿಡುಗಡೆಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷ ದೇಶದ್ರೋಹ ಬೆಂಬಲಿಸುವ ಹುನ್ನಾರ ನಡೆಸುತ್ತಿದೆ ಎಂದವರು ಆರೋಪಿಸಿದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಪ್ರಬಾರಿ ಉದಯ ಕುಮಾರ್ ಶೆಟ್ಟಿ, ಕಾಪು ಕ್ಷೇತ್ರ ಉಸ್ತುವಾರಿ ವಿಜಯ್ ಕೊಡವೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯ್ಕ, ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿ.ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ಪಕ್ಷದ ಮುಖಂಡರಾದ ನಯನಾ ಗಣೇಶ್, ವಿಜಯಕುಮಾರ್ ಉದ್ಯಾವರ, ಪ್ರವೀಣ್ ಪೂಜಾರಿ, ಕೇಸರಿ ಯುವರಾಜ್, ಗಂಗಾಧರ ಸುವರ್ಣ, ಪುರಸಭಾ ವಿಪಕ್ಷ ನಾಯಕ ಅರುಣ್ ಶೆಟ್ಟಿ ಪಾದೂರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಸ್ವಾಗತಿಸಿದರು. ಪುರಸಭಾ ವ್ಯಾಪ್ತಿ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ ವಂದಿಸಿದರು. ಮಾಧ್ಯಮ ಪ್ರಮುಖ್ ಕಿರಣ್ ಆಳ್ವ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.