ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುವ ಹಡಗು, ಸದ್ಯಕ್ಕೆ ಅದು ಆಕ್ಸಿಜನ್ ಸಪೋರ್ಟ್ ನಲ್ಲಿದೆ:ನಳಿನ್
Team Udayavani, Dec 27, 2020, 7:25 PM IST
ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಗೆ ಬಿಜೆಪಿ ಉತ್ತಮ ಪೂರ್ವತಯಾರಿ ಮಾಡಿಕೊಂಡಿತ್ತು. ಅಲ್ಲದೆ ಬಿಜೆಪಿ ಹಮ್ಮಿಕೊಂಡ ಕುಟುಂಬ ಮಿಲನ, ಪಂಚರತ್ನ ಯೋಜನೆಗಳು ಅತ್ಯಂತ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ ಗ್ರಾ.ಪಂ ಚುನಾವಣೆಯ ಕುರಿತಾಗಿ ಮಾತನಾಡಿದ ಅವರು ಎರಡೂ ಹಂತದ ಚುನಾವಣೆಯಲ್ಲಿ ಉತ್ತಮ ಶೇಕಡವಾರು ಮತದಾನ ಆಗಿದ್ದು ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರಿಗೆ ರಾಜ್ಯಾದ್ಯಂತ ಅಭೂತಪೂರ್ವ ಬೆಂಬಲ ಸಿಕ್ಕಿದೆ. ರಾಜ್ಯಾದ್ಯಂತ ಬಿಜೆಪಿ ಪರ ಒಲವು ಕಂಡುಬರುತ್ತಿದೆ ಇದಕ್ಕೆಲ್ಲಾ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಅಭಿವೃದ್ಧಿ ಕಾರ್ಯವೇ ಶ್ರೀರಕ್ಷೆ ಎಂದರು.
ಈ ಸಂದರ್ಭದಲ್ಲಿ ಚುನಾವಣಾ ಕಣದಲ್ಲಿ ಕಾಂಗ್ರೆಸ್ ಪಕ್ಷದ ಭಾಗವಹಿಸುವಿಕೆಯ ಕುರಿತಾಗಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆಯಾಗಿತ್ತು. ಮತಗಟ್ಟೆಯಲ್ಲಿ ಕೆಲಸ ಮಾಡಲು ಕಾರ್ಯಕರ್ತರೇ ಇರಲಿಲ್ಲ. ಒಟ್ಟಾರೆಯಾಗಿ ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುವ ಹಡಗಾಗಿದ್ದು ಸದ್ಯಕ್ಕೆ ಕಾಂಗ್ರೆಸ್ ಆಕ್ಸಿಜನ್ ನಲ್ಲಿದೆ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ:15 ವರ್ಷದ ಬಳಿಕ ತನ್ನ ಹುಟ್ಟೂರಿನಲ್ಲಿ ಮತಚಲಾಯಿಸಿದ ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್
ಈ ನಡುವೆ ತಮ್ಮ ಕಚೇರಿಗೆ ಪಿಎಫ್ ಐ ಕಾರ್ಯಕರ್ತರು ಮುತ್ತಿಗೆ ವಿಚಾರವನ್ನು ಪ್ರಸ್ತಾಪಿಸಿದ ಅವರು ಕೆಎಫ್ ಡಿ ದೇಶದ್ರೋಹಿ ಚಟುವಟಿಕೆ ನಡೆಸುತ್ತಿದೆ ಈ ಕುರಿತಾಗಿ ಕಾನೂನು ತನ್ನದೇ ಕ್ರಮಕೈಗೊಳ್ಳುತ್ತದೆ. ಈ ತರದ ಯಾವುದೇ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾವುದೇ ಬಂಧನ ಆದಾಗ ಕಾನೂನು ಪ್ರಕಾರ ಹೋರಾಟ ಮಾಡಬೇಕೇ ಹೊರತು ಮುತ್ತಿಗೆ ಹಾಕುವುದಲ್ಲ. ಈ ರೀತಿ ಮುತ್ತಿಗೆ ಹಾಕುವುದೇ ಒಂದು ರೀತಿಯ ಭಯೋತ್ಪಾದನಾ ಚಟುವಟಿಕೆಯಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಗಂಭೀರತೆ ಪಡೆದುಕೊಳ್ಳಲಿದೆ ಎಂದು ಹೇಳಿದರು.
ಇದನ್ನೂ ಓದಿ:ಶಾಲೆ ಪುನಾರಂಭ: ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ
ಇತ್ತೀಚಿಗೆ ಮಂಗಳೂರಿನಲ್ಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಗೋಡೆ ಬರಹದಲ್ಲಿ ಬರೆಯಲಾಗಿತ್ತು. ಈ ಎಲ್ಲಾ ಕೃತ್ಯದ ಹಿಂದೆ ಭಯೋತ್ಪಾದನಾ ಚಟುವಟಿಕೆ ಇದೆ ಎಂದು ಅನಿಸುತ್ತದೆ. ಈ ಘಟನೆಗಳ ಕುರಿತಾಗಿ ನಮ್ಮ ಸರ್ಕಾರ ಎಂದಿಗೂ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ. ಎಲ್ಲದಕ್ಕೂ ತಕ್ಕ ಉತ್ತರ ನೀಡಲು ನಮ್ಮ ಸರಕಾರ ಸಿದ್ಧವಾಗಿದೆ ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.