ಮೀನುಗಾರರ ಪತ್ತೆ: ಗಂಭೀರ ಪರಿಗಣನೆ ಅಗತ್ಯ
Team Udayavani, Dec 31, 2018, 4:57 AM IST
ಮಲ್ಪೆ: ಮಲ್ಪೆ ಬಂದರಿನಿಂದ ಹೊರಟ ಮೀನುಗಾರರು ನಾಪತ್ತೆಯಾಗಿ 16 ದಿನ ಕಳೆದರೂ ಯಾವುದೇ
ಸುಳಿವು ಇಲ್ಲವಾದ್ದರಿಂದ ಕೇಂದ್ರ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪತ್ತೆ ಕಾರ್ಯಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್ ಆಗ್ರಹಿಸಿದರು.
ಅವರು ರವಿವಾರ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ನ ಆಶ್ರಯದಲ್ಲಿ ಮೀನುಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಮಲ್ಪೆ ಬೀಚ್‌ನಲ್ಲಿ ನಡೆದ ರಾಜ್ಯ ಮಟ್ಟದ ಬೃಹತ್ ಮತ್ಸ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ರೈತರ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಸರಕಾರಗಳು ಮೀನುಗಾರರನ್ನು ಕಡೆಗಣಿಸುತ್ತಿವೆ. ಮೀನುಗಾರರೆಲ್ಲರೂ ಒಟ್ಟಾಗಿ ತಮ್ಮ ಸಮಸ್ಯೆಯನ್ನು ಜನಪ್ರತಿನಿಧಿಗಳಲ್ಲಿ ಹೇಳಬೇಕು. ಅದು ಪರಿಹಾರವಾಗದಿದ್ದಲ್ಲಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದರು.ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್‌ನ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು.
ಕಣ್ಮರೆಯಾದ ಮೀನುಗಾರರ ಪತ್ತೆಗೆ ನಾಳೆಯಿಂದಲೇ ಕೇಂದ್ರ ಸರಕಾರದ ಮೇಲೆ ಒತ್ತಡ ತಂದು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವಿಪಕ್ಷ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್ ಹೇಳಿದರು. ಶಾಸಕ ಲಾಲಾಜಿ ಆರ್. ಮೆಂಡನ್, ಗಣ್ಯರಾದ ದಿನಕರ ಬಾಬು, ವೆಲ್ಜಿಭಾಯಿ ಮಸಾನಿ, ಆನಂದ ಸಿ. ಕುಂದರ್, ಕಿಶೋರ್ ಆಳ್ವ, ಸತೀಶ್ ಕುಂದರ್, ಶೀಲಾ ಕೆ. ಶೆಟ್ಟಿ, ಕೃಷ್ಣ ರೆಡ್ಡಿ, ನಳಿನಿ ಪ್ರದೀಪ್ ರಾವ್, ರಾಮಕೃಷ್ಣ , ಮಟ್ಟಾರು ರತ್ನಾಕರ್ ಹೆಗ್ಡೆ, ಜನಾರ್ದನ ತೋನ್ಸೆ, ಉದ್ಯಮಿ ಮನೋಹರ್ ಶೆಟ್ಟಿ, ಯೋಗೀಶ್ ಶೆಟ್ಟಿ, ವಿನಯ ಕರ್ಕೇರ, ಜಯ ಸಿ. ಕೋಟ್ಯಾನ್, ಸಾಧು ಸಾಲ್ಯಾನ್, ಉದ್ಯಮಿ ಆನಂದ ಪಿ. ಸುವರ್ಣ, ಲಕ್ಷ್ಮೀ ಮಂಜುನಾಥ ಸಾಲ್ಯಾನ್, ಮಾದೇಗೌಡ ಉಪಸ್ಥಿತರಿದ್ದರು.
ಮರಳಿ ಬರುವಂತೆ ಪ್ರಾರ್ಥನೆ
ಸಭಾ ಕಾರ್ಯಕ್ರಮದ ಮಧ್ಯೆ ಕಳೆದ ಕಣ್ಮರೆಯಾಗಿರುವ 8 ಮಂದಿ ಮೀನುಗಾರರು ಸುರಕ್ಷಿತವಾಗಿ ಮರಳಿ ಬರುವಂತೆ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು. ಯಶ್‌ಪಾಲ್ ಎ. ಸುವರ್ಣ ಸ್ವಾಗ ತಿಸಿ. ಚಂದ್ರೇಶ್ ಪಿತ್ರೋಡಿ ನಿರೂಪಿಸಿ ದರು. ಸತೀಶ್ಚಂದ್ರ ಶೆಟ್ಟಿ ವಂದಿಸಿದರು.
ಸಮ್ಮಾನ: ಬಹುಮಾನ ವಿತರಣೆ
ಉಡುಪಿ ಜಿಲ್ಲೆಯನ್ನು ರಕ್ತದಾನಿ ಜಿಲ್ಲೆಯನ್ನಾಗಿ ಘೋಷಿಸಿದ ಡಾ| ಜಿ. ಶಂಕರ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆನಂದ ಸಿ. ಕುಂದರ್, ಗುಜರಾತ್ ರಾಜ್ಯ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ವೆಲ್ಜಿಭಾಯಿ ಮಸಾನಿ ಅವರನ್ನು ಫೆಡರೇಶನ್ ವತಿಯಿಂದ ಸಮ್ಮಾನಿಸಲಾಯಿತು. ಬೆಳಗ್ಗೆ ನಡೆದ ವಿವಿಧ ಕ್ರೀಡಾ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.