ಮೀನುಗಾರರ ಪತ್ತೆಗೆ ಅಗತ್ಯ ಕ್ರಮ: ಪ್ರಧಾನಿಕಾರ್ಯದರ್ಶಿ,ಜೇಟ್ಲಿಗೆ ಮನವಿ
Team Udayavani, Jan 9, 2019, 4:01 AM IST
ಮಲ್ಪೆ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮತ್ತು ಅದರ ಲ್ಲಿದ್ದ ಏಳು ಮಂದಿ ಮೀನುಗಾರ ರನ್ನು ಸುರಕ್ಷಿತವಾಗಿ ಮರಳಿ ಕರೆ ತರಲು ಉನ್ನತ ಮಟ್ಟದ ತನಿಖೆ ಕೈಗೊಳ್ಳುವಂತೆ ಅಖೀಲ ಭಾರತ ಮೀನುಗಾರರ ವೇದಿಕೆ ಮಂಗಳವಾರ ದಿಲ್ಲಿಯಲ್ಲಿ ಪ್ರಧಾನಿಯವರ ಕಾರ್ಯದರ್ಶಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಪ್ರಧಾನಿ ಮೋದಿ ಅವರನ್ನೇ ಭೇಟಿ ಮಾಡಲು ನಿರ್ಧರಿಸಲಾಗಿತ್ತಾದರೂ ಸಮಯಾವಕಾಶ ಸಿಗದ ಕಾರಣ ಪ್ರಧಾನಿ ಕಾರ್ಯದರ್ಶಿಗೆ ಮನವಿ ನೀಡಲಾಯಿತು. ವಿಷಯವನ್ನು ಪ್ರಧಾನಿ ಗಮನಕ್ಕೆ ತಂದು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿ ಕ್ರಮ ಕೈಗೊಳ್ಳುವ ಬಗ್ಗೆ ಪ್ರಧಾನಿಯವರ ಕಾರ್ಯದರ್ಶಿ ನಿಯೋಗಕ್ಕೆ ಭರವಸೆ ನೀಡಿದರು.
ವಿತ್ತ ಸಚಿವ ಜೇಟ್ಲಿಗೆ ಮನವಿ
ಇದೇವೇಳೆ ನಿಯೋಗ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿ ಮೀನುಗಾರಿಕೆ ಸಲಕರಣೆಗಳಿಗೆ ಜಿಎಸ್‌ಟಿ ವಿನಾಯಿತಿ, ನಾಡದೋಣಿಗಳಿಗೆ ರಿಯಾಯಿತಿ ದರದಲ್ಲಿ ಸೀಮೆ ಎಣ್ಣೆ ವಿತರಣೆ, ಕೇಂದ್ರ ದಲ್ಲಿ ಮೀನು ಗಾರಿಕೆ ಸಚಿವಾಲಯ ತೆರೆಯ ಬೇಕು, ಡೀಸೆಲ್ ರೋಡ್ ಸೆಸ್ ವಿನಾಯಿತಿ ಸಹಿತ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿತು. ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜೇಟ್ಲಿ ಭರವಸೆ ನೀಡಿದರು.
ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್, ಅ.ಭಾ. ಮೀನುಗಾರರ ವೇದಿಕೆಯ ಅಧ್ಯಕ್ಷ ವೆಲ್ಜಿಬಾಯಿ ಕೆ. ಮಸಾನಿ, ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಎ. ಸುವರ್ಣ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಮುಖಂಡರಾದ ನಿತಿನ್ ಕುಮಾರ್, ಮನೋಹರ ಬೋಳೂರು, ಇಬ್ರಾಹಿಂ, ದಯಾನಂದ ಕೆ. ಸುವರ್ಣ, ಕರುಣಾಕರ ಸಾಲ್ಯಾನ್, ಕಿಶೋರ್ ಸುವರ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.