Udupi: ಫ್ಲಾಟ್ ಗೆ ನುಗ್ಗಲು ಯತ್ನಿಸಿದ ನಾಲ್ವರು ಮುಸುಕುಧಾರಿಗಳು, CCTV ಯಲ್ಲಿ ದೃಶ್ಯ ಸೆರೆ
Team Udayavani, Aug 2, 2024, 12:24 PM IST
ಉಡುಪಿ : ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ಆಗಸ್ಟ್ 01ರ ಮುಂಜಾನೆ ನಡೆದಿದೆ.
ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದರಲ್ಲಿ ನಾಲ್ವರು ವ್ಯಕ್ತಿಗಳು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲಾಟ್‌ನ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್‌ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವುದು ಕಂಡುಬಂದಿದೆ.
ಮುಸುಕುಧಾರಿಗಳು ಒಳನುಗ್ಗಲು ಯತ್ನಿಸಿದ ಫ್ಲಾಟ್‌ನಲ್ಲಿ ವಯಸ್ಸಾದ ದಂಪತಿಗಳು ವಾಸಿಸುತ್ತಿದ್ದರು. ಈ ದಂಪತಿಗಳು ಒಂದು ವಾರದ ಹಿಂದಷ್ಟೇ ಮುಂಬೈಗೆ ಪ್ರಯಾಣ ಬೆಳೆಸಿದ್ದರು. ಇದೀಗ ಈ ದಂಪತಿಗಳ ಫ್ಲಾಟ್‌ಗೆ ಮುಸುಕುಧಾರಿಗಳು ನುಗ್ಗಲು ಪ್ರವೇಶಿಸುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ನಾಲ್ವರು ಶಸ್ತ್ರಸಜ್ಜಿತ ಮುಸುಕುಧಾರಿಗಳು ಹಲವಾರು ಖಾಲಿ ಅಪಾರ್ಟ್ ಮೆಂಟ್‌ಗಳಿಗೆ ನುಗ್ಗಿ ಬೆಲೆಬಾಳುವ ವಸ್ತುಗಳ ಹುಡುಕಾಡುವ ಜೊತೆಗೆ ಅಪಾರ ಹಾನಿಯನ್ನುಂಟು ಮಾಡಿರುತ್ತಾರೆ. ಇನ್ನು ಈ ನಾಲ್ವರು ಒಂದೇ ಬಡಾವಣೆಯ ಒಟ್ಟು ಮೂರು ಅಪಾರ್ಟ್ ಮೆಂಟ್ ಕಟ್ಟಡಗಳಲ್ಲಿ ದರೋಡೆಗೆ ಯತ್ನಿಸಿದ್ದರು ಎನ್ನಲಾಗಿದೆ.
ಇದನ್ನೂ ಓದಿ: Mangaluru; ಕೆತ್ತಿಕಲ್ ಭೂಮಾಫಿಯಾ ಆರೋಪ ಉನ್ನತ ತನಿಖೆಗೆ ದಿನೇಶ್ ಗುಂಡೂರಾವ್ ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.