Udupi: ವಂಚನೆ ಪ್ರಕರಣ; ಆರೋಪಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು!
ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆ
Team Udayavani, Aug 18, 2024, 6:47 PM IST
ಉಡುಪಿ: ಅನಿವಾಸಿ ಭಾರತೀಯ, ಕುಂದಾಪುರ ಮೂಲದ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋ.ರೂ.ಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾರ್ಕೂರು ಮೂಲದ ನಾಗೇಶ್ ಪೂಜಾರಿ (31) ಎಂಬಾತನಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ರದ್ದುಗೊಳಿಸಿ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಆದೇಶ ನೀಡಿದ್ದಾರೆ.
ಪ್ರಕರಣದ ವಿವರ
ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಬಂಧಿತ ಹೋಟೆಲೊಂದಕ್ಕೆ ಉದ್ಯೋಗಕ್ಕೆ ಸೇರಿದ್ದ ನಾಗೇಶ್ ಪೂಜಾರಿಯು 2.5 ಕೋ.ರೂ.ಗೂ ಅಧಿಕ ಹಣ ವಂಚಿಸಿದ್ದು, ಈ ಬಗ್ಗೆ ಫಾರ್ಚ್ಯೂನ್ ಹೋಟೆಲ್ ಮ್ಯಾನೇಜರ್ ಸುನೀಲ್ ಕುಮಾರ್ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 25 ಲ.ರೂ.ಗೂ ಹೆಚ್ಚಿನ ಹಣ ಅವ್ಯವಹಾರ ಪ್ರಕರಣಗಳ ತನಿಖೆ ಸೆನ್ ಠಾಣೆಗೆ ಬರುವ ಕಾರಣ ಈ ಪ್ರಕರಣ ಉಡುಪಿ ಸೆನ್ ಠಾಣೆಗೆ ವರ್ಗಾವಣೆಗೊಂಡಿತ್ತು. ಆರೋಪಿ ನಾಗೇಶ್ ಪೂಜಾರಿ ಹೈಕೋರ್ಟ್‌ನಲ್ಲಿ ಎಫ್.ಐ.ಆರ್. ಮೇಲಿನ ತನಿಖೆ ಸ್ಥಗಿತಗೊಳಿಸಲು ವಕೀಲರ ಮೂಲಕ ಅರ್ಜಿ ದಾಖಲಿಸಿದ್ದು, 2023ರ ಜುಲೈನಲ್ಲಿ ಆ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಬಳಿಕ ಆರೋಪಿ ಕುಂದಾಪುರದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಅದನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಕರ್ನಾಟಕ ಉಚ್ಚನ್ಯಾಯಾಲಯದ ಮತ್ತು ಸೆಶನ್ಸ್ ನ್ಯಾಯಾಲಯದ ಆದೇಶಗಳನ್ನು ಮರೆಮಾಚಿ ಬ್ರಹ್ಮಾವರದ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಶರಣಾಗಿ 2023ರ ಆಗಸ್ಟ್ ತಿಂಗಳಿನಲ್ಲಿ ಆರೋಪಿ ಜಾಮೀನು ಪಡೆದುಕೊಂಡಿದ್ದ.
ಈ ಜಾಮೀನು ಆದೇಶವನ್ನು ಸರಕಾರ ಪ್ರಶ್ನಿಸಿ ಪರಿಷ್ಕೃತ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆಯನ್ನು ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಕೈಗೊಂಡಿದ್ದು, 2.5ಕೋ.ರೂ.ಗೂ ಅಧಿಕ ಹಣ ಅವ್ಯವಹಾರ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿರುವುದು ಸಮಂಜಸವಲ್ಲ ಹಾಗೂ ಹೈಕೋರ್ಟ್ ಮತ್ತು ಸೆಶನ್ಸ್ ಕೋರ್ಟ್‌ನಲ್ಲಿರುವ ನ್ಯಾಯಾಲಯದ ಆದೇಶಗಳನ್ನು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಹಾಜರುಪಡಿಸದೆ ಜಾಮೀನು ಪಡೆದಿರುವುದು ಸರಿಯಲ್ಲ, ಈ ಜಾಮೀನು ರದ್ದುಪಡಿಸಬೇಕೆಂದು ಸರಕಾರ ಕೋರಿಕೊಂಡಿತ್ತು. ವಾದ-ಪ್ರತಿವಾದ ಆಲಿಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಜೆ.ಎಂ.ಎಫ್.ಸಿ. ನ್ಯಾಯಾಲಯ ನೀಡಿದ ಜಾಮೀನು ರದ್ದುಗೊಳಿಸಿ ಆದೇಶ ನೀಡಿದ್ದಾರೆ. ಸರಕಾರದ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಬೇಳೂರು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.