ಸರ್ಕಾರಿ ನೌಕರರ ಮುಷ್ಕರ; ಉಡುಪಿಯಲ್ಲಿ ಬಹುತೇಕ ಕಚೇರಿಗಳು ಖಾಲಿ ಖಾಲಿ
Team Udayavani, Mar 1, 2023, 10:40 AM IST
ಉಡುಪಿ: 7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ (ಎನ್’ಪಿಎಸ್) ರದ್ದು ಮಾಡಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರ ಮುಷ್ಕರ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧೀನದಲ್ಲಿರುವ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ಸೇವೆಗಳು ಬಹುತೇಕ ಬಂದ್ ಆಗಿದೆ.
ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ 84 ಇಲಾಖೆಗಳಲ್ಲಿ ಬುಧವಾರ ಸೇವೆ ಲಭ್ಯವಾಗುತ್ತಿಲ್ಲ. ನೌಕರರು ಸ್ವಯಂ ಪ್ರೇರಿತ ರಜೆ ಮಾಡಿದ್ದು, ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ, ತಹಶೀಲ್ದಾರ್ ಕಚೇರಿ, ತಾಲೂಕು ಕಚೇರಿ ಸೇರಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸೇವೆ ಲಭ್ಯವಾಗುತ್ತಿಲ್ಲ.
ಶಾಲಾ ಮಕ್ಕಳಲ್ಲಿ ಆರಂಭದಲ್ಲಿ ಗೊಂದವಿದ್ದು, ಕೆಲ ಶಾಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:ಮತ್ತೆ ಏರಿತು ಗ್ಯಾಸ್ ಸಿಲಿಂಡರ್ ಬೆಲೆ; ನಿಮ್ಮ ನಗರದಲ್ಲಿ ಬೆಲೆ ಎಷ್ಟಿದೆ?
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸರ್ಕಾರಿ ನೌಕರರ ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗಿದ್ದು, ಜಿಲ್ಲೆಯ 11 ಸಾವಿರ ನೌಕರರು ಪಾಲ್ಗೊಂಡಿದ್ದಾರೆ.
ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಜತೆ ಮಂಗಳವಾರ ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದರು. ಆದರೆ, ಈ ಸಭೆ ವಿಫಲವಾಗಿದೆ. ತಡರಾತ್ರಿವರೆಗೂ ನಡೆದ ಸರಣಿ ಸಭೆ ಬಳಿಕ ಮುಷ್ಕರಕ್ಕೆ ಕೊಟ್ಟಿರುವ ಕರೆಯನ್ನು ವಾಪಸ್ ಪಡೆಯದಿರಲು ಸರ್ಕಾರಿ ನೌಕರರ ಸಂಘ ನಿರ್ಧರಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.