ಮಳೆ, ನೆರೆ, ಪ್ರಕೃತಿ ವಿಕೋಪ ಎದುರಿಸಲು ಸರಕಾರ ಸನ್ನದ್ಧ : ಆರ್. ಅಶೋಕ್
ಕಾರ್ಕಳದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಮಲ್ಪಿಪರ್ಪಸ್ ಆಶ್ರಯತಾಣ ನಿರ್ಮಾಣ ಘೋಷಣೆ
Team Udayavani, Aug 7, 2020, 12:00 PM IST
ಕಾಪು : ಪ್ರವಾಹ, ನೆರೆ ಮತ್ತು ಪ್ರಕೃತಿ ವಿಕೋಪದಂತಹ ಸಮಸ್ಯೆಗಳನ್ನು ಎದುರಿಸಲು ರಾಜ್ಯ ಸರಕಾರ ಸನ್ನದ್ಧವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಕಾಪು ತಾಲೂಕಿನ ವಿದೋದ್ದೇಶ ಚಂಡ ಮಾರುತ ಆಶ್ರಯ ತಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಬಳಿಕ ಉದಯವಾಣಿ ಜೊತೆಗೆ ಮಾತನಾಡಿದರು.
ಉಡುಪಿ ಜಿಲ್ಲೆಯ ಕಾಪು ಮತ್ತು ತೆಕ್ಕಟ್ಟೆಯಲ್ಲಿ ಸುನಾಮಿ ಸೆಂಟರ್ ಗಳು ಪ್ರವಾಹ ಸಂತ್ರಸ್ತರಿಗಾಗಿ ಸಿದ್ಧವಾಗಿದೆ. ಕಾರ್ಕಳದಲ್ಲಿ ಹೊಸದಾಗಿ ವಿವಿಧೋದ್ದೇಶ ಆಶ್ರಯ ತಾಣ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಅನುದಾನವನ್ನು ಸರಕಾರ ಮಂಜೂರುಗೊಳಿಸಿದ್ದು, ಅದಕ್ಕೆ ಬೇಕಾದ ಸಿದ್ಧತೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ದ.ಕ. ಜಿಲ್ಲಾ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಜಿ. ಜಗದೀಶ್, ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪುರಸಭಾ ಸದಸ್ಯ ಅನಿಲ್ ಕುಮಾರ್, ಸಹಾಯಕ ಕಮೀಷನರ್ ಕೆ. ರಾಜು, ತಹಶೀಲ್ದಾರ್ ಮಹಮ್ಮದ್ ಇಸಾಕ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.