ಉಡುಪಿ ಜಿಲ್ಲೆಯಲ್ಲಿ “ಸಾರಿ’ ಪ್ರಕರಣ ಹೆಚ್ಚಳ
ಹೆಚ್ಚುವರಿ ವೆಂಟಿಲೇಟರ್ ಒದಗಿಸಲು ಸರಕಾರಕ್ಕೆ ಪ್ರಸ್ತಾವನೆ
Team Udayavani, Jul 22, 2020, 11:09 AM IST
ಸಾಂದರ್ಭಿಕ ಚಿತ್ರ
ಉಡುಪಿ: ದಿನೇ ದಿನೆ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿನ ವೆಂಟಿಲೇಟರ್ ಹಾಸಿಗೆಗಳು ಭರ್ತಿಯಾಗುತ್ತಿವೆ. ಮುಂದಿನ ದಿನಗಳಲ್ಲಿ “ಸಾರಿ’ (ತೀವ್ರ ಉಸಿರಾಟದ ಸಮಸ್ಯೆ) ಕೋವಿಡ್ ಪ್ರಕರಣಗಳು ಹೆಚ್ಚಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ವೆಂಟಿಲೇಟರ್‌ಗಳನ್ನು ಪೂರೈಸುವಂತೆ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಿದೆ.
ಕೋವಿಡ್ ಲಕ್ಷಣವಿರದ ಹಾಗೂ ಸೌಮ್ಯ ಲಕ್ಷಣ ಇರುವವರಿಗೆ ವೆಂಟಿಲೇಟರ್, ಐಸಿಯು ಅಗತ್ಯವಿಲ್ಲ. ಆದರೆ ಸಾರಿ ಪ್ರಕರಣಗಳಿಗೆ ಈ ವ್ಯವಸ್ಥೆ ಅಗತ್ಯ. ಹೊರಜಿಲ್ಲೆಯ ಸಾಮಾನ್ಯ ಸಾರಿ ಪ್ರಕರಣಗಳನ್ನು ತೆಗೆದುಕೊಳ್ಳದಂತೆ ಜಿಲ್ಲಾಡಳಿತ ಆಸ್ಪತ್ರೆಗಳಿಗೆ ಆದೇಶ ನೀಡಿದೆ. ಪ್ರಸ್ತುತ ಕ್ಯಾನ್ಸರ್ ಸೇರಿದಂತೆ ವಿವಿಧ ಪ್ರಮುಖ ಕಾಯಿಲೆಗಳಿಂದ ಬಳಲುತ್ತಿರುವ ಸಾರಿ ಕೋವಿಡ್ ಪ್ರಕರಣಗಳನ್ನು ಮಾತ್ರ ದಾಖಲಿಸಿಕೊಳ್ಳಲಾಗುತ್ತಿದೆ.
ವೆಂಟಿಲೇಟರ್‌ಗೆ ಪ್ರಸ್ತಾವನೆ
ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆ ನೀಡಲಾಗುತ್ತಿರುವ ಜಿಲ್ಲಾಸ್ಪತ್ರೆ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಆಸ್ಪತ್ರೆ, ಉಡುಪಿ ಡಾ| ಟಿಎಂಎ ಪೈ ಆಸ್ಪತ್ರೆಗಳಲ್ಲಿ ಒಟ್ಟು 50 ವೆಂಟಿಲೇಟರ್ ಹಾಗೂ 253 ಐಸಿಯು ಹಾಸಿಗೆಗಳಿವೆ. ಜು. 18ರಿಂದ ಜು. 20ರ ವರೆಗೆ 12 ಸಾರಿ ಪ್ರಕರಣಗಳು ಪತ್ತೆಯಾಗಿದೆ. ಜಿಲ್ಲೆಗೆ ಈಗಾಗಲೇ ಹೊಸದಾಗಿ 15 ವೆಂಟಿಲೇಟರ್ ಬಂದಿವೆ. ಜಿಲ್ಲಾಡಳಿತ ಹೆಚ್ಚುವರಿಯಾಗಿ 50 ವೆಂಟಿಲೇಟರ್‌ಗಳಿಗೆ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಕಳುಹಿಸಿದೆ. ಕಾರ್ಕಳ ಮತ್ತು ಕುಂದಾಪುರ ಸರಕಾರಿ ಕೋವಿಡ್ ಆಸ್ಪತ್ರೆಗೂ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ. ಹೊಸದಾಗಿ ಬರುವ ವೆಂಟಿಲೇಟರ್ ಜಿಲ್ಲಾಸ್ಪತ್ರೆ, ಕಾರ್ಕಳ ಹಾಗೂ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಅಳವಡಿಸಲಾಗುತ್ತದೆ.
174 ಮಂದಿಗೆ ಹೋಂ ಐಸೊಲೇಶನ್
ಕೊರೊನಾ ರೋಗ ಲಕ್ಷಣದ ಸೋಂಕಿತರಿಗೆ ಹೋಂ ಐಸೊಲೇಶನ್ ವ್ಯವಸ್ಥೆಯನ್ನು ಕೂಡ ಜಿಲ್ಲೆಯಲ್ಲಿ ಆರಂಭಿಸಲಾಗಿದೆ. ಜು. 20 ವರೆಗೆ 174 ಮಂದಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ ಸೂಕ್ತವಾದ ವ್ಯವಸ್ಥೆ ಇಲ್ಲದಿ ದ್ದರೆ ಅಂತಹವರನ್ನು ಕೊರೊನಾ ಕೇರ್ ಸೆಂಟರ್‌ಗೆ ದಾಖಲಿಸಲಾಗುತ್ತದೆ.
ಪ್ರಾಥಮಿಕ ಸಂಪರ್ಕ
ಜಿಲ್ಲೆಯಲ್ಲಿ ನಿತ್ಯ ಪತ್ತೆಯಾಗುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಶೇ. 70ರಷ್ಟು ಪ್ರಕರಣಗಳು ಸೋಂಕಿತ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದಲ್ಲಿ ಇರುವವರಿಗೆ ಕಂಡು ಬರುತ್ತಿವೆ. ಜು. 20ರಲ್ಲಿ 98 ಪ್ರಕರಣಗಳಲ್ಲಿ 73 ಪ್ರಾಥಮಿಕ ಸಂಪರ್ಕಗಳ ಪ್ರಕರಣ ವರದಿಯಾಗಿದೆ.
ಆಸ್ಪತ್ರೆಗೆ 50 ವೆಂಟಿಲೇಟರ್ ಪೂರೈಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಉಡುಪಿ ಜಿಲ್ಲಾಸ್ಪತ್ರೆ, ಕಾರ್ಕಳ ಹಾಗೂ ಕುಂದಾಪುರ ಸರಕಾರಿ ಆಸ್ಪತ್ರೆಗಳಲ್ಲಿ ಹೊಸ ವೆಂಟಿಲೇಟರ್ ಆಳವಡಿಸಲಾಗುತ್ತದೆ.
– ಡಾ| ಸುಧೀರ್‌ಚಂದ್ರ ಸೂಡ, ಡಿಎಚ್‌ಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.