ಗ್ರಾಮ ಪಂಚಾಯತ್ ಚುನಾವಣೆ: ಇಂದು 2ನೇ ಹಂತದ ಮತದಾನ
Team Udayavani, Dec 27, 2020, 1:09 AM IST
ಮಂಗಳೂರು/ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಯ ಎರಡನೇ ಹಂತದ ಚುನಾವಣೆಯ ಮತದಾನ ರವಿವಾರ ನಡೆಯಲಿದೆ.
ಎರಡನೇ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕುಗಳ 114 ಗ್ರಾಮ ಪಂಚಾಯತ್‌ಗಳ 1,500 ಸ್ಥಾನಗಳಿಗೆ ಮತ್ತು ಉಡುಪಿ ಜಿಲ್ಲೆಯ ಕುಂದಾಪುರ, ಕಾರ್ಕಳ, ಕಾಪು ತಾಲೂಕಿನ 86 ಗ್ರಾ.ಪಂ.ಗಳ 1,178 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ರವಿವಾರ ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಲಿದ್ದು, ಸಂಜೆ 5ಕ್ಕೆ ಮುಕ್ತಾಯವಾಗಲಿದೆ. ಚುನಾವಣಾ ಕರ್ತವ್ಯಕ್ಕೆ ನೇಮಕ ಗೊಂಡಿರುವ ಅಧಿಕಾರಿಗಳು ಹಾಗೂ ಸಿಬಂದಿ ಮಸ್ಟರಿಂಗ್ ಕೇಂದ್ರ ಗಳಿಂದ ಶನಿವಾರ ಮತಪೆಟ್ಟಿಗೆ, ಮತಪತ್ರ ಸೇರಿದಂತೆ ಚುನಾವಣಾ ಸಾಮಗ್ರಿ ಗಳನ್ನು ಪಡೆದುಕೊಂಡು ನಿಗದಿತ ವಾಹನಗಳಲ್ಲಿ ಪೊಲೀಸ್ ಭದ್ರತೆ ಯೊಂದಿಗೆ ನಿಯೋಜಿತ ಮತದಾನ ಕೇಂದ್ರಗಳಿಗೆ ತೆರಳಿದ್ದಾರೆ. ಗ್ರಾ.ಪಂ. ಚುನಾವಣೆಯಲ್ಲಿ ಇವಿಎಂ ಬದಲು ಮತ ಪೆಟ್ಟಿಗೆ, ಮುದ್ರಿತ ಮತಪತ್ರಗಳ ಬಳಸಲಾಗುತ್ತಿದೆ.
ಪೊಲೀಸ್ ಬಂದೋಬಸ್ತು
ಚುನಾವಣೆಗೆ ಸಂಬಂಧಿಸಿ ಸೂಕ್ತ ಪೊಲೀಸ್ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ಬೂತ್‌ನಲ್ಲಿ ಪೊಲೀಸ್/ಗೃಹರಕ್ಷಕ ದಳ ಸಿಬಂದಿಯನ್ನು ನಿಯೋಜಿಸಲಾಗಿದೆ. ಸಿಪಿಐ, ಪಿಎಸ್‌ಐ, ಎಸ್‌ಐ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ನಿಗಾ ವಹಿಸಲಿದೆೆ. ಇದಲ್ಲದೆ ಕೆಎಸ್‌ಆರ್‌ಪಿ, ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಸೆಕ್ಟರ್ ಮೊಬೈಲ್ ವಾಹನಗಳು ಗಸ್ತು ನಡೆಸಲಿವೆ.
ಕೊರೊನಾ: ಗರಿಷ್ಠ ಮುನ್ನೆಚ್ಚರಿಕೆ
ಕೊರೊನಾ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಗರಿಷ್ಠ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಮತದಾನ ಕೇಂದ್ರದ ಪ್ರವೇಶ ದ್ವಾರದಲ್ಲಿ ಆರೋಗ್ಯ ಇಲಾಖೆಯ ಸಿಬಂದಿಯನ್ನು ನಿಯೋಜಿಸಿ ಮತದಾನ ಕೊಠಡಿಯೊಳಗೆ ಪ್ರವೇಶಿಸುವ ಪ್ರತಿಯೋರ್ವನನ್ನು ಕೊರೊನಾ ಥರ್ಮಲ್ ಜ್ವರ ತಪಾಸಣೆ ಮಾಡಲಾಗುತ್ತದೆ. ಎಲ್ಲರೂ ಮಾಸ್ಕ್ ಧರಿಸಿರುವುದು ಹಾಗೂ ಸ್ಯಾನಿಟೈಸರ್ ಬಳಸಿ ಕೈಗಳನ್ನು ಶುಚಿಗೊಳಿಸಿಕೊಳ್ಳಬೇಕು. ಕೊರೊನಾ ಸೋಂಕಿತರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ.
ನಿಯಮ ಉಲ್ಲಂಘಿಸಿ ಜಾಥಾ
ಉಪ್ಪಿನಂಗಡಿ: ಚುನಾವಣೆಯ ಮುನ್ನಾ ದಿನವಾದ ಶನಿವಾರ ಶಿರಾಡಿ ಗ್ರಾಮದಲ್ಲಿ ನಿಯಮ ಉಲ್ಲಂಘಿಸಿ ಜನರಲ್ಲಿ ಭೀತಿ ಮೂಡಿಸುವ ರೀತಿಯಲ್ಲಿ ರಾಜಕೀಯ ಪಕ್ಷವೊಂದರ ಕಾರ್ಯಕರ್ತರು ವಾಹನ ಜಾಥಾ ನಡೆಸಿರುವ ಬಗ್ಗೆ ಕಡಬ ತಾ.ಪಂ.ಕಾರ್ಯ ನಿರ್ವಹಣಾಧಿಕಾರಿಗೆ ಸಾಮಾಜಿಕ ಹೋರಾಟಗಾರ ಕಿಶೋರ್ ಶಿರಾಡಿ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.